ಆ್ಯಪ್ನಗರ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 75 ಕೇಂದ್ರ

ವಿಕ ಸುದ್ದಿಲೋಕ ಹಾವೇರಿಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜೂನ್‌ 25 ರಿಂದ ಜುಲೈ 3ರವರೆಗೆ ಜರುಗಲಿದ್ದು, ಸುಗಮ ಹಾಗೂ ಸುವ್ಯವಸ್ಥಿತ ಪರೀಕ್ಷೆ ನಡೆಸಲು 75 ಪರೀಕ್ಷಾ ಕೇಂದ್ರಗಳು ಹಾಗೂ ...

Vijaya Karnataka 20 Jun 2020, 5:00 am
ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜೂನ್‌ 25 ರಿಂದ ಜುಲೈ 3ರವರೆಗೆ ಜರುಗಲಿದ್ದು, ಸುಗಮ ಹಾಗೂ ಸುವ್ಯವಸ್ಥಿತ ಪರೀಕ್ಷೆ ನಡೆಸಲು 75 ಪರೀಕ್ಷಾ ಕೇಂದ್ರಗಳು ಹಾಗೂ 15 ಬ್ಲಾಕ್‌ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದರು.
Vijaya Karnataka Web 75 center for sslc exam
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 75 ಕೇಂದ್ರ


ಕೋವಿಡ್‌ ಸುರಕ್ಷತಾ ಮಾನದಂಡದೊಂದಿಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಪರೀಕ್ಷಾ ಕೇಂದ್ರಗಳಲ್ಲಿಸೂಕ್ತ ವ್ಯವಸ್ಥೆ ಮಾಡಲಾಗಿದೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಿಲಿನ 200 ಮೀಟರ್‌ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಷಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ನಿಷೇಧಿತ ಪ್ರದೇಶದಲ್ಲಿಅನಧಿಕೃತ ವ್ಯಕ್ತಿ ಹಾಗೂ ವ್ಯಕ್ತಿಗಳ ಗುಂಪುಗಳ ಪ್ರವೇಶ ನಿಷೇಧಸಲಾಗಿದೆ. ಈ ಪ್ರದೇಶದಲ್ಲಿನ ಝರಾಕ್ಸ್‌ ಮತ್ತು ಟೈಪಿಂಗ್‌ ಸೆಂಟರ್‌ಗಳನ್ನು ಪರೀಕ್ಷಾ ಸಮಯದಲ್ಲಿಮುಚ್ಚಲು ಆದೇಶಿಸಲಾಗಿದೆ ಹಾಗೂ ಮೊಬೈಲ್‌ ಬಳಕೆ ನಿಷೇಧಿಸಲಾಗಿದೆ. ಸದರಿ ಆದೇಶವನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ