ಆ್ಯಪ್ನಗರ

ವಸತಿ ಶಾಲಾ ಕಟ್ಟಡ ನಿರ್ಮಾಣಕ್ಕೆ 8ಎಕರೆ ಜಮೀನು

ಹಿರೇಕೆರೂರು: ರಟ್ಟೀಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದಲ್ಲಿಇಂದಿರಾಗಾಂಧಿ ವಸತಿ ಶಾಲಾ ಕಟ್ಟಡ ನಿರ್ಮಾಣಕ್ಕೆ 8ಎಕರೆ ಜಮೀನನ್ನು ಸರಕಾರ ಮಂಜೂರು ಮಾಡಿದೆ ಎಂದು ಶಾಸಕ ಬಿ.ಸಿ.ಪಾಟೀಲ್‌ ಹೇಳಿದರು.

Vijaya Karnataka 28 Jan 2020, 5:00 am
ಹಿರೇಕೆರೂರು: ರಟ್ಟೀಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದಲ್ಲಿಇಂದಿರಾಗಾಂಧಿ ವಸತಿ ಶಾಲಾ ಕಟ್ಟಡ ನಿರ್ಮಾಣಕ್ಕೆ 8ಎಕರೆ ಜಮೀನನ್ನು ಸರಕಾರ ಮಂಜೂರು ಮಾಡಿದೆ ಎಂದು ಶಾಸಕ ಬಿ.ಸಿ.ಪಾಟೀಲ್‌ ಹೇಳಿದರು.
Vijaya Karnataka Web 8 acres of land for residential school building
ವಸತಿ ಶಾಲಾ ಕಟ್ಟಡ ನಿರ್ಮಾಣಕ್ಕೆ 8ಎಕರೆ ಜಮೀನು


ಸೋಮವಾರ ಪಟ್ಟಣದಲ್ಲಿಸುದ್ದಿಗಾರರೊಂದಿಗೆ ಮಾತನಾಡಿ, ಇಂದಿರಾಗಾಂಧಿ ವಸತಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಕುಡುಪಲಿ ಗ್ರಾಮದಲ್ಲಿಭೂಮಿ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಕಂದಾಯ ಸಚಿವ ಆರ್‌.ಅಶೋಕ್‌ರವರಿಗೆ ನಾನು ಪತ್ರ ಬರೆದು ಮನವಿ ಮಾಡಿಕೊಂಡ ಮೇರೆಗೆ ಗ್ರಾಮದಲ್ಲಿರುವ ಸರ್ವೆ ನಂಬರ್‌ 192 ರಲ್ಲಿಇದ್ದ 23 ಎಕರೆ ಜಮೀನಿನ ಪೈಕಿ 8 ಎಕರೆ ಜಮೀನನ್ನು ಸರಕಾರ ಮಂಜೂರು ಮಾಡಿದೆ ಎಂದು ತಿಳಿಸಿದರು. ಕುಡುಪಲಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಸೇರಿದಂತೆ ಈ ಭಾಗದ ಗ್ರಾಮಗಳಲ್ಲಿಪರಿಶಿಷ್ಟ ಜಾತಿ ಸಮುದಾಯದ ವಿಧ್ಯಾರ್ಥಿಗಳಿದ್ದು, ಅವರ ವಿಧ್ಯಾಭ್ಯಾಸಕ್ಕೆ ಅನುಕೂಲವಾಗುವ ದೃಷ್ಠಿಯಿಂದ ಇಂದಿರಾಗಾಂಧಿ ವಸತಿ ಶಾಲೆ ಪ್ರಾರಂಭಿಸಲು ಹಾಗೂ ಕಟ್ಟಡ ನಿರ್ಮಾಣಕ್ಕೆ ಬೇಕಾಗುವಷ್ಟು ಅನುದಾನ ನೀಡುವಂತೆ ಮನವಿ ಮಾಡಿಕೊಂಡಿದ್ದೇನೆ. 8 ಎಕರೆ ಜಮೀನು ಮಂಜೂರು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕಂದಾಯ ಸಚಿವ ಆರ್‌.ಅಶೋಕ್‌, ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಅವರಿಗೆ ತಾಲೂಕಿನ ಜನರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿರವಿಶಂಕರ್‌ ಬಾಳೀಕಾಯಿ, ಕೆ.ಜಿ.ಪ್ರತಾಪ್‌, ಎನ್‌.ಎಸ್‌.ಚಿಕ್ಕನರಗುಂದಮಠ, ಬಿ.ಎಸ್‌.ಪಾಟೀಲ್‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ