ಆ್ಯಪ್ನಗರ

ಎಸ್ಸಿ-ಎಸ್ಟಿ ಸ್ಮಶಾನ ಒತ್ತುವರಿ ತೆರವಿಗೆ ಕ್ರಮ

ಹಾವೇರಿ: ಜಿಲ್ಲೆಯ ಹಲವೆಡೆ ಪರಿಶಿಷ್ಟ ಜಾತಿ, ಪಂಗಡದ ಸ್ಮಶಾನ ಭೂಮಿ ಒತ್ತುವರಿಯಾಗಿವೆ ಎನ್ನುವ ದೂರುಗಳು ಬಂದಿದ್ದು, ಕೂಡಲೇ ಸ್ಮಶಾನ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಬೇಕು ಎಂದು ಹಾವೇರಿ ಉಪ ವಿಭಾಗಾಧಿಕಾರಿ ಎನ್‌.ತಿಪ್ಪೇಸ್ವಾಮಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

Vijaya Karnataka 21 Dec 2018, 5:00 am
ಹಾವೇರಿ: ಜಿಲ್ಲೆಯ ಹಲವೆಡೆ ಪರಿಶಿಷ್ಟ ಜಾತಿ, ಪಂಗಡದ ಸ್ಮಶಾನ ಭೂಮಿ ಒತ್ತುವರಿಯಾಗಿವೆ ಎನ್ನುವ ದೂರುಗಳು ಬಂದಿದ್ದು, ಕೂಡಲೇ ಸ್ಮಶಾನ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಬೇಕು ಎಂದು ಹಾವೇರಿ ಉಪ ವಿಭಾಗಾಧಿಕಾರಿ ಎನ್‌.ತಿಪ್ಪೇಸ್ವಾಮಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
Vijaya Karnataka Web action to sc st cemetery enclosure
ಎಸ್ಸಿ-ಎಸ್ಟಿ ಸ್ಮಶಾನ ಒತ್ತುವರಿ ತೆರವಿಗೆ ಕ್ರಮ


ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಪರಿಶಿಷ್ಟ ಜಾತಿ, ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಹಶೀಲ್ದಾರರು ಸ್ಮಶಾನ ಭೂಮಿಯ ಉತಾರ ನೀಡಬೇಕು ಹಾಗೂ ಸರ್ವೇ ಮಾಡಿಸಿ ತಡೆ ಗೋಡೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವಂತೆ ತಹಶೀಲ್ದಾರಗಳಿಗೆ ಉಪವಿಭಾಗಾಧಿಕಾರಿ ಸೂಚಿಸಿದರು.

ನಗರಸಭೆ ಹಾಗೂ ಪುರಸಭೆಗಳಿಗೆ ಬಿಡುಗಡೆಯಾದ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆ ಅನುದಾನ ಅಡಿ ಸ್ಥಳೀಯ ವಿದ್ಯಾರ್ಥಿ ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಪೌರಾಯುಕ್ತರಿಗೆ ಸೂಚನೆ ನೀಡಿದರು.

ವಿಶೇಷ ಘಟಕ ಅನುದಾನ ಬಳಕೆಯಲ್ಲಿ ವಿಳಂಬವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಪ್ರಸಕ್ತ ಸಾಲಿನ ಅನುದಾನ ಬಿಡುಗಡೆ ವಿಳಂಬವಾಗಿದ್ದಲ್ಲಿ ಕಳೆದ ಸಾಲಿನಲ್ಲಿ ಬಿಡುಗಡೆಯಾದ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ವೆಚ್ಚ ಮಾಡದೆ ಉಳಿಸಿಕೊಂಡವರು ತಕ್ಷ ಣವೇ ಬಳಕೆ ಮಾಡಿ ವರದಿ ನೀಡುವಂತೆ ತಿಪ್ಪೇಸ್ವಾಮಿ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ವಿ. ಚೈತ್ರಾ ಸಭೆಗೆ ಮಾಹಿತಿ ನೀಡಿ, 2016 ರಿಂದ 2018ರವರೆಗೆ ನಡೆದ 67 ದೌರ್ಜನ್ಯ ಪ್ರಕರಣಗಳಲ್ಲಿ ಪರಿಹಾರಧನವಾಗಿ ನೊಂದವರಿಗೆ 102.17 ಲಕ್ಷ ರೂ. ನೀಡಲಾಗಿದೆ ಎಂದು ವಿವರಿಸಿದರು

ದೌರ್ಜನ್ಯಕ್ಕೊಳಗಾದ ಫಲಾನುಭವಿಗಳಿಗೆ ಏಳು ದಿನದೊಳಗಾಗಿ ಪರಿಹಾರ ನೀಡಬೇಕಾಗಿದೆ. ಪೊಲೀಸ್‌ ಇಲಾಖೆಯ ವರದಿಗಳು ಇಲಾಖೆಗೆ ಬರದ ಹೊರತು ನಿಯಮಾನುಸಾರ ಪರಿಹಾರಧನ ವಿತರಿಸುವಹಾಗಿಲ್ಲ. ಕಾರಣ ಈ ಪ್ರಕರಣಗಳ ಕುರಿತಂತೆ ಪೊಲೀಸ್‌ ಇಲಾಖೆಯಿಂದ ತ್ವರಿತವಾಗಿ ವರದಿ ಕಳುಹಿಸುವಂತೆ ಸಭೆಯಲ್ಲಿ ಪೊಲೀಸ್‌ ಇಲಾಖೆಗೆ ನಿರ್ದೇಶನ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಸಹಾಯಕ ಕಾರ್ಯದರ್ಶಿ ಜಾಫರ ಸುತಾರ್‌, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸುರೇಶ ರೆಡ್ಡಿ, ನಗರಸಭೆ ಮತ್ತು ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿಯ ವಿವಿಧ ಸದಸ್ಯರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ