ಆ್ಯಪ್ನಗರ

ಸ್ವಚ್ಛತೆಗೆ ಎಲ್ಲರೂ ಕೈಜೋಡಿಸಿ

ಹಾವೇರಿ : ದೇಶದ ಸ್ವಾತಂತ್ರ್ಯಕ್ಕೆ ನಮ್ಮ ಹಿರಿಯರು ಶ್ರಮಿಸಿದಂತೆ, ದೇಶದ ಸ್ವಚ್ಛತೆಗೆ ಎಲ್ಲರೂ ಕೈಜೋಡಿಸುವುದು ಅತ್ಯಗತ್ಯವಾಗಿದೆ. ಗ್ರಾಮಗಳ ಸ್ವಚ್ಛತೆಗೆ ವಿದ್ಯಾರ್ಥಿಗಳು, ಶಾಲಾ ಶಿಕ್ಷ ಕರ ಪಾತ್ರ ಬಹುಮುಖವಾಗಿದೆ ಎಂದು ಜಿಪಂ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ ಹೇಳಿದರು.

Vijaya Karnataka 13 Jul 2019, 5:00 am
ಹಾವೇರಿ : ದೇಶದ ಸ್ವಾತಂತ್ರ್ಯಕ್ಕೆ ನಮ್ಮ ಹಿರಿಯರು ಶ್ರಮಿಸಿದಂತೆ, ದೇಶದ ಸ್ವಚ್ಛತೆಗೆ ಎಲ್ಲರೂ ಕೈಜೋಡಿಸುವುದು ಅತ್ಯಗತ್ಯವಾಗಿದೆ. ಗ್ರಾಮಗಳ ಸ್ವಚ್ಛತೆಗೆ ವಿದ್ಯಾರ್ಥಿಗಳು, ಶಾಲಾ ಶಿಕ್ಷ ಕರ ಪಾತ್ರ ಬಹುಮುಖವಾಗಿದೆ ಎಂದು ಜಿಪಂ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ ಹೇಳಿದರು.
Vijaya Karnataka Web all hands down to cleanliness
ಸ್ವಚ್ಛತೆಗೆ ಎಲ್ಲರೂ ಕೈಜೋಡಿಸಿ


ಹಾವೇರಿಯ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್‌ ಸಹಯೋಗದಲ್ಲಿ ಶುಕ್ರವಾರ ನಡೆದ ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ ಸ್ವಚ್ಛ ಮೇವ ಜಯತೆ ಆಂದೋಲನ ಅಂಗವಾಗಿ ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ಶಾಲೆಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ನಿರ್ವಹಣೆ ಕುರಿತು ಗ್ರಾಮೀಣ ಸಮುದಾಯಕ್ಕೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಗ್ರಾಮೀಣ ಪ್ರದೇಶದ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಒಂದು ದಿನದ ಘನ ತ್ಯಾಜ್ಯ ನಿರ್ವಹಣೆ ಮತ್ತು ಓಡಿಎಫ್‌ ಸುಸ್ಥಿರತೆ ಕುರಿತು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧೀಜಿ ಅವರು ರಸ್ತೆಗಳ ಕಸಗೂಡಿಸಿದರು ಹಾಗೂ ಶೌಚಾಲಯ ಶುಚಿಗೊಳಿಸುವ ಮೂಲಕ ಸ್ವಚ್ಛ ಭಾರತದ ಕನಸು ಕಂಡಿದ್ದರು. ಗಾಂಧೀಜಿ ಅವರ ಮಾದರಿಯಲ್ಲಿ ಶಿಕ್ಷ ಕರು, ವಿದ್ಯಾರ್ಥಿಗಳು ಮುಂದುವರೆಯಬೇಕು. ಸ್ವಚ್ಛತೆ ಮತ್ತು ನೈರ್ಮಲ್ಯ ಇಂದಿನ ತುರ್ತು ಅಗತ್ಯವಾಗಿದೆ. ಶಿಕ್ಷ ಕರಿಂದ ನಾಯಕರನ್ನು ನಿರ್ಮಿಸಲು ಸಾಧ್ಯ, ಸ್ವಚ್ಛತೆ ಕುರಿತು ಶಿಕ್ಷ ಕರು ಇಂದು ಮಕ್ಕಳಲ್ಲಿ ಬಿತ್ತಿದ ಬೀಜ ಮುಂದೆ ಹೆಮ್ಮರವಾಗಿ ಬೆಳೆಯುತ್ತದೆ. ಆರೋಗ್ಯವಂತ ಸಮಾಜದಿಂದ ಸದೃಢ ರಾಷ್ಟ್ರ ಕಟ್ಟಲು ಸಾಧ್ಯವಾಗುತ್ತದೆ. ವಾರಕ್ಕೆ ಒಂದು ದಿನವಾದರೂ ವಿದ್ಯಾರ್ಥಿಗಳ ತಂಡದೊಂದಿಗೆ ಗ್ರಾಮದೊಳಗೆ ಸಂಚಾರ ಮಾಡಿ ಗ್ರಾಮಸ್ಥರಿಗೆ ಸ್ವಚ್ಛತೆಯ ಜಾಗೃತಿ, ಮೀತ ನೀರು ಬಳಕೆ, ಶೌಚಾಲಯ ಬಳಕೆ ಕುರಿತಂತೆ ಜಾಗೃತಿ ಮೂಡಿಸಲು ಕರೆ ನೀಡಿದರು.

ಜಿ.ಪಂ. ಸಿಇಒ ಕೆ.ಲೀಲಾವತಿ ಪ್ರಾಸ್ತಾವಿಕವಾಗಿ ಮಾತನಾಡಿ, ನಗರ ಪ್ರದೇಶಕ್ಕೆ ಸೀಮಿತವಾಗಿದ್ದ ಪ್ಲಾಸ್ಟಿಕ್‌ ಬಳಕೆ ಘನತ್ಯಾಜ್ಯ ವಿಲೇವಾರಿ ಸಮಸ್ಯೆ ಹಳ್ಳಿಗಳಲ್ಲೂ ಪ್ಲಾಸ್ಟಿಕ್‌ ಬಳಕೆ ಅಧಿಕವಾಗಿದೆ. ಘನ ತ್ಯಾಜ್ಯ ವಿಲೇವಾರಿ ಸಮಸ್ಯೆ ಎದುರಾಗಿದೆ. ನಗರದಂತೆ ಹಳ್ಳಿಗಳಲ್ಲು ಒಣ ಹಾಗೂ ಹಸಿ ಕಸ ವಿಂಗಡಣೆ, ಸ್ವಚ್ಛತೆ ಹಾಗೂ ಶೌಚಾಲಯ ಬಳಕೆ ಪ್ರತಿ ಕುಟುಂಬ ಅವಿಭಾಜ್ಯ ಅಂಗ ಎಂಬುದುರ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಶಾಲಾ ಮಕ್ಕಳ ಮೂಲಕ ಸಂದೇಶ ತಲುಪಿಸಲು ಶಿಕ್ಷ ಕರಿಗೆ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಈಗಾಗಲೇ ಜಿಲ್ಲೆಯ 35 ಗ್ರಾಮ ಪಂಚಾಯತಿಗಳಲ್ಲಿ ಘನ ತ್ಯಾಜ್ಯವನ್ನು ಗ್ರಾ.ಪಂಚಾಯತಿ ವತಿಯಿಂದ ಉಚಿತವಾಗಿ ಸಂಗ್ರಹಿಸಲಾಗುತ್ತಿದೆ. ಹಂತ ಹಂತವಾಗಿ ಜಿಲ್ಲೆಯ ಎಲ್ಲ ಪಂಚಾಯತಿಗಳಲ್ಲೂ ಘನ ತಾಜ್ಯ ವಿಲೇವಾರಿ ಕಾರ್ಯಕ್ರಮಗಳನ್ನು ವಿಸ್ತರಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲೀಲಾವತಿ ಅವರು ಸ್ವಚ್ಛತಾ ಪ್ರತಿಜ್ಞಾವಿದಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಜಿ.ಪಂ.ಉಪಕಾರ್ಯದರ್ಶಿ ಜಿ. ಗೋವಿಂದಸ್ವಾಮಿ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಜಿಲ್ಲೆಯ ಕ್ಷೇತ್ರ ಶಿಕ್ಷ ಣಾಧಿಕಾರಿಗಳು, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ