ಆ್ಯಪ್ನಗರ

ಬೆಳಗ್ಗೆ ಬಿಕೋ, ಸಂಜೆ ಸಂಭ್ರಮ

ರಾಣೇಬೆನ್ನೂರ: ಲೋಕಸಭಾ ಚುನಾವಣೆಯ ಮತ ಎಣಿಕೆಯ ಹಿನ್ನೆಲೆಯಲ್ಲಿ ಗುರುವಾರ ನಗರದಲ್ಲಿ ಬೆಳಗಿನ ಅವಧಿಯಲ್ಲಿ ಒಂದು ರೀತಿಯ ಬಿಕೋ ಎನ್ನುವ ವಾತಾವರಣ ಕಂಡುಬಂದಿತು.

Vijaya Karnataka 24 May 2019, 5:00 am
ರಾಣೇಬೆನ್ನೂರ: ಲೋಕಸಭಾ ಚುನಾವಣೆಯ ಮತ ಎಣಿಕೆಯ ಹಿನ್ನೆಲೆಯಲ್ಲಿ ಗುರುವಾರ ನಗರದಲ್ಲಿ ಬೆಳಗಿನ ಅವಧಿಯಲ್ಲಿ ಒಂದು ರೀತಿಯ ಬಿಕೋ ಎನ್ನುವ ವಾತಾವರಣ ಕಂಡುಬಂದಿತು.
Vijaya Karnataka Web HVR-23RNR2


ಬಹುತೇಕ ಜನರು ಮನೆಯಲ್ಲಿ ಟಿವಿ ಎದುರು ಕುಳಿತು ಫಲಿತಾಂಶ ವೀಕ್ಷ ಣೆಯಲ್ಲಿ ತೊಡಗಿದ್ದು ರಸ್ತೆಗಳಲ್ಲಿ ಜನಸಂಚಾರ ವಿರಳವಾಗಿತ್ತು. ನಗರದ ಪ್ರಮುಖ ಮಾರುಕಟ್ಟೆ ಸ್ಥಳವಾದ ಎಂ.ಜಿ.ರಸ್ತೆಯಲ್ಲಿಯೂ ಕೂಡ ಜನದಟ್ಟಣೆ ತುಂಬಾ ಕಡಿಮೆಯಿತ್ತು.

ಮಧ್ಯಾಹ್ನದ ನಂತರ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿರುವುದನ್ನು ಕಂಡ ಪಕ್ಷ ದ ಅಭಿಮಾನಿಗಳು ನಗರದ ವಿವಿಧ ಭಾಗಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬಿಜೆಪಿಯ ಸ್ಥಳೀಯ ಮುಖಂಡರು ಚುನಾವಣೆಯಲ್ಲಿ ವಿಜಯ ಸಾಧಿಸಿದ ಸಂಸದ ಶಿವಕುಮಾರ ಉದಾಸಿ ಅವರನ್ನು ಅಭಿನಂದಿಸಲು ಹಾವೇರಿಗೆ ತೆರಳಿದರು.

ಇದಕ್ಕೆ ವ್ಯತಿರಿಕ್ತವಾಗಿ ಕಾಂಗ್ರೆಸ್‌ ಕಾರ್ಯಕರ್ತರ ಮೊಗದಲ್ಲಿ ನಿರಾಸೆ ಮನೆ ಮಾಡಿತ್ತು. ಹೀಗಾಗಿ ಪಕ್ಷ ದ ಬಹುತೇಕ ಕಾರ್ಯಕರ್ತರು ಹೊರಗಡೆ ಎಲ್ಲಿಯೂ ಕಾಣಿಸಿಕೊಳ್ಳಲಿಲ್ಲ.

ಅಭಿಮಾನಿಗಳಿಂದ ಪಾನಕ ವಿತರಣೆ: ಮತ್ತೊಮ್ಮೆ ಮೋದಿ ಪ್ರಧಾನಿ ಆಗುತ್ತಿರುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ನಗರದ ದುರ್ಗಾ ಸರ್ಕಲ್‌ನಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಶರಬತ್‌ ವಿತರಿಸಿದರು.

ವಕೀಲರಿಂದ ಸಂಭ್ರಮಾಚರಣೆ: ಬಿಜೆಪಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ವಕೀಲರು ಸಂಭ್ರಮಾಚರಣೆ ಮಾಡಿದರು. ನಂತರ ನ್ಯಾಯಾಲಯದ ಹೊರಭಾಗದಲ್ಲಿ ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರು.

ಮಂಡ್ಯ ಫಲಿತಾಂಶದ ಚರ್ಚೆ: ನಗರದ ಬಹುತೇಕ ಕಡೆಗಳಲ್ಲಿ ಸಾರ್ವಜನಿಕರು ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷ ಗಳ ಸಾಧನೆಗಿಂತ ಮಂಡ್ಯ ಫಲಿತಾಂಶದ ಕುರಿತು ಚರ್ಚೆ ಮಾಡುತ್ತಿರುವುದು ಕಂಡುಬಂದಿತು. ಮಂಡ್ಯ ಕ್ಷೇತ್ರ ವ್ಯಾಪ್ತಿಯ ಏಳು ಕ್ಷೇತ್ರಗಳಲ್ಲಿ ಜೆಡಿಎಸ್‌ ಶಾಸಕರಿದ್ದರೂ ಪಕ್ಷ ದ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಸೋಲಿನ ಕುರಿತು ಪರಾಮರ್ಶೆ ನಡೆಸುತ್ತಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ