ಆ್ಯಪ್ನಗರ

ಮತದಾರ ಪರಿಷ್ಕರಣೆ ಆ್ಯಪ್‌ ಜಾಗೃತಿ ಕೈಗೊಳ್ಳಿ

ಹಾವೇರಿ: ಮತದಾರರ ಪಟ್ಟಿಯಲ್ಲಿತಮ್ಮ ಹೆಸರುಗಳನ್ನು ಪರಿಷ್ಕರಣೆಗೆ ಭಾರತ ಚುನಾವಣಾ ಆಯೋಗದ ಹೊಸ ಆ್ಯಪ್‌ ಬಳಿಸಿ ಪರಿಷ್ಕರಣೆ ಮಾಡುವ ಇವಿಪಿ ಕಾರ್ಯಕ್ರಮದ ಬಗ್ಗೆ ಕಾಲೇಜು, ವಿದ್ಯಾರ್ಥಿ ನಿಲಯಗಳು ಹಾಗೂ ಸಾರ್ವಜನಿಕರಲ್ಲಿವ್ಯಾಪಕ ಜಾಗೃತಿ ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅಧಿಕಾರಿಗಳಿಗೆ ಸೂಚಿಸಿದರು.

Vijaya Karnataka 26 Sep 2019, 5:00 am
ಹಾವೇರಿ: ಮತದಾರರ ಪಟ್ಟಿಯಲ್ಲಿತಮ್ಮ ಹೆಸರುಗಳನ್ನು ಪರಿಷ್ಕರಣೆಗೆ ಭಾರತ ಚುನಾವಣಾ ಆಯೋಗದ ಹೊಸ ಆ್ಯಪ್‌ ಬಳಿಸಿ ಪರಿಷ್ಕರಣೆ ಮಾಡುವ ಇವಿಪಿ ಕಾರ್ಯಕ್ರಮದ ಬಗ್ಗೆ ಕಾಲೇಜು, ವಿದ್ಯಾರ್ಥಿ ನಿಲಯಗಳು ಹಾಗೂ ಸಾರ್ವಜನಿಕರಲ್ಲಿವ್ಯಾಪಕ ಜಾಗೃತಿ ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web carry out voter revision app awareness
ಮತದಾರ ಪರಿಷ್ಕರಣೆ ಆ್ಯಪ್‌ ಜಾಗೃತಿ ಕೈಗೊಳ್ಳಿ


ಹಾವೇರಿಯ ಜಿಲ್ಲಾಡಳಿತ ಭವನದಲ್ಲಿಬುಧವಾರ ನಡೆ ಇವಿಪಿ ಕಾರ್ಯಕ್ರಮ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಹಾಗೂ ತಾಲೂಕಾ ಆಡಳಿತದೊಂದಿಗೆ ವಿಡಿಯೋ ಸಂವಾದ ನಡೆಸಿದ ಮಾತನಾಡಿದ ಅವರು, ಇ.ಎಲ್‌.ಸಿ. ಕ್ಲಬ್‌ಗಳನ್ನು ಸಕ್ರೀಯಗೊಳಿಸಿ ಮತದಾರರ ಪಟ್ಟಿಯಲ್ಲಿಹೆಸರುಗಳ ಪರಿಷ್ಕರಣೆ ಹಾಗೂ ಮತದಾನ ಜಾಗೃತಿ ಕುರಿತು ಸ್ವೀಪ್‌ ಚಟವಟಿಕೆಗಳನ್ನು ಹಮ್ಮಿಕೊಳ್ಳಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಘ್ಕಿ'್ಖಟಠಿಛ್ಟಿ ಏಛ್ಝಿp್ಝಜ್ಞಿಛಿ' ಋಟಚಿಜ್ಝಿಛಿ ಅpp, ಬಳಸಿ ಮತದಾರರ ಪಟ್ಟಿಯಲ್ಲಿತಮ್ಮ ಹೆಸರನ್ನು ಪರಿಶೀಲನೆ ಮಾಡಿಕೊಳ್ಳಲು ಹಾಗೂ ತಮ್ಮ ಪಾಲಕರ ಹೆಸರು ಪರಿಶೀಲನೆಗೊಳಪಡಿಸಲು ಸೂಕ್ತ ಮಾಹಿತಿ ನೀಡಬೇಕು. ಈ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲು ಕಾಲೇಜು ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿವಿಧ ಕಾಲೇಜುಗಳ ಮುಖ್ಯಸ್ಥರಿಗೆ ಸೂಚಿಸಿದರು.

ಎಲ್ಲಶಿಕ್ಷಕರು ಹಾಗೂ ಅವರ ಕುಟುಂಬದವರ ಮತದಾರರ ಪಟ್ಟಿಯ ಹೆಸರಿನ ಪರಿಶೀಲನೆ ಕಾರ್ಯವನ್ನು ಕೈಗೊಂಡು ಈ ಕುರಿತಂತೆ ವರದಿ ಸಲ್ಲಿಸಬೇಕು. ಬಿ.ಎಲ್‌.ಓ.ಗಳ ಸಭೆ ಕರೆದು ಇವಿಪಿ ಕಾರ್ಯಕ್ರಮ ಚುರುಕುಗೊಳಿಸಿ ನಿಗದಿತ ಗುರಿ ಸಾಧಿಸುವಂತೆ ತಾಕೀತು ಮಾಡಿದರು.

ನಾಗರಿಕರು 1950 ಟೊಲ್‌ ಫ್ರೀ ಮತದಾರರ ಸಹಾಯ ಕೇಂದ್ರದ ಮೂಲಕವು ಪರಿಶೀಲಿಸಿ ಧೃಡೀಕರಿಸಿಕೊಳ್ಳಬಹುದು ಎಂದು ತಿಳಿಸಿದರು.

ಸಭೆಯಲ್ಲಿಚುನಾವಣಾ ತಹಸೀಲ್ದಾರ ಪ್ರಶಾಂತ ನಾಲವಾರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ, ಪಿಯು ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪೀರಜಾದೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಜಿಪಂ ಸಹಾಯಕ ಕಾರ್ಯದರ್ಶಿ ಜಾಫರ ಸುತಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪಡಗಣ್ಣನವರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಜಮಖಾನೆ ಸೇರಿದಂತೆ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ