ಆ್ಯಪ್ನಗರ

ಸಿಗರೇಟ್‌, ಗುಟಕಾಕ್ಕೆ ಬ್ರೇಕ್‌

ಹಾವೇರಿ :ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಿಡಿ, ಸಿಗರೇಟ್‌ ಸೇದುವವರ ಮೇಲೆ ಹಾಗೂ ಪ್ರತ್ಯೇಕ ತಂಬಾಕು ಪೊಟ್ಟಣ (ಗುಟಕಾ) ಮಾರಾಟಕ್ಕೆ ಬ್ರೇಕ್‌ ಹಾಕಲು ಜಿಲ್ಲಾಡಳಿತ ಸನ್ನದ್ಧವಾಗಿದೆ.

Vijaya Karnataka 5 Dec 2018, 5:00 am
ಹಾವೇರಿ :ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಿಡಿ, ಸಿಗರೇಟ್‌ ಸೇದುವವರ ಮೇಲೆ ಹಾಗೂ ಪ್ರತ್ಯೇಕ ತಂಬಾಕು ಪೊಟ್ಟಣ (ಗುಟಕಾ) ಮಾರಾಟಕ್ಕೆ ಬ್ರೇಕ್‌ ಹಾಕಲು ಜಿಲ್ಲಾಡಳಿತ ಸನ್ನದ್ಧವಾಗಿದೆ.
Vijaya Karnataka Web cigarette break the hut
ಸಿಗರೇಟ್‌, ಗುಟಕಾಕ್ಕೆ ಬ್ರೇಕ್‌


ಹಾವೇರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಮಂಗಳವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಕಠಿಣ ಕ್ರಮಕ್ಕೆ ಸೂಚನೆ: ಈ ವೇಳೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ ಮಾತನಾಡಿ, ಶಾಲಾ-ಕಾಲೇಜು, ಸರಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್‌ ಸೇವನೆ, ಮದ್ಯಪಾನ ಮಾಡುವವರ ಮೇಲೆ ಕೋಪ್ಟಾ ಕಾಯ್ದೆ ಅನುಸಾರ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ, ಸಮುದಾಯ ಗುಂಪು ಚರ್ಚೆ, ತರಬೇತಿ ಕಾರ್ಯಾಗಾರಗಳು, ಕಾರ್ಯಪಡೆ ರಚನೆಯಂತಹ ಪರಿಣಾಮಕಾರಿ ಕಾರ್ಯಗಳಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಾಮಫಲಕ ಅಳವಡಿಕೆ: ನಿಯಮಾನುಸಾರ ಬಸ್‌ ನಿಲ್ದಾಣ, ಆಸ್ಪತ್ರೆಗಳು, ಶಾಲಾ-ಕಾಲೇಜು, ಹಾಸ್ಟೆಲ್‌ಗಳು ಹಾಗೂ ಎಲ್ಲ ಸರಕಾರಿ ಕಚೇರಿಗಳ ಆವರಣದಲ್ಲಿ ಧೂಮಪಾನ ನಿಷೇಧಿತ ವಲಯವೆಂದು ಕಡ್ಡಾಯವಾಗಿ ನಾಮಫಲಕ ಅಳವಡಿಸಬೇಕು. ನಿಷೇಧಿತ ವಲಯದಲ್ಲಿ ತಂಬಾಕು ಸೇವೆ, ಮದ್ಯಪಾನ ಚಟುವಟಿಕಗಳು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಪರವಾನಗಿ ಪಡೆದ ಬಾರ್‌, ರೆಸ್ಟೋರೆಂಟ್‌ ಹಾಗೂ ಮದ್ಯದಂಗಡಿಗಳಲ್ಲಿ ಗುಂಪುಗುಂಪಾಗಿ ಸಿಗರೇಟ್‌ ಸೇವನೆಯಂತಹ ಚಟುವಟಿಕೆಗಳಿಗೆ ನಿಯಂತ್ರಣ ಹಾಕಲು, ಪ್ರತ್ಯೇಕವಾಗಿ ಸ್ಮೋಕಿಂಗ್‌ ಝೋನ್‌ ಸ್ಥಾಪಿಸಲು ನಿರ್ದೇಶನ ನೀಡಿ ಅನುಷ್ಠಾನಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು. ಅಬಕಾರಿ ಇಲಾಖೆ ನೇತೃತ್ವದಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಈ ಕಾರ್ಯದ ಅನುಷ್ಠಾನಕ್ಕೆ ಕ್ರಮವಹಿಸಬೇಕು ಎಂದು ತಿಳಿಸಿದರು.

ಪ್ರತ್ಯೇಕ ತಂಬಾಕು ತಡೆ: ಸಣ್ಣಪುಟ್ಟ ಪೆಟ್ಟಿಗೆ ಅಂಗಡಿ, ಬೀಡಾ ಅಂಗಡಿಗಳಲ್ಲಿ ಅಡಕೆ ಪೊಟ್ಟಣದ ಜೊತೆಗೆ ಪ್ರತ್ಯೇಕವಾಗಿ ತಂಬಾಕು ಪುಡಿಯ ಪೊಟ್ಟಣ ಮಾರಾಟ ಮಾಡುವುದು ತಿಳಿದುಬಂದಿದೆ. ಆಹಾರ ಸುರಕ್ಷ ತಾ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸ್‌ ಇಲಾಖೆ ಅಧಿಕಾರಿಗಳು ಈ ಅಂಗಡಿಗಳ ಮೇಲೆ ದಾಳಿಮಾಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಶಾಲಾ-ಕಾಲೇಜುಗಳಲ್ಲಿ ಗುಟಕಾ, ಧೂಮಪಾನ ಸೇವನೆ ಕೈಬಿಡಲು ಸುತ್ತೋಲೆ ಹೊರಡಿಸಿ. ಅರಿವು ಮತ್ತು ಜಾಗೃತಿ ಜೊತೆಗೆ ನಡಾವಳಿ ಬದಲಾಯಿಸುವಂತ ಕಾರ್ಯಕ್ರಮ ಜಾರಿಗೆ ತರುವುದರ ಜೊತೆಗೆ ಕಾನೂನಾತ್ಮಕವಾಗಿ ದಂಡ, ಶಿಕ್ಷೆಯಂತಹ ಕಠಿಣ ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್‌.ಎಸ್‌.ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ನಾಗರಾಜ ನಾಯಕ, ಆರ್‌.ಸಿ.ಎಚ್‌.ಅಧಿಕಾರಿ ಡಾ.ಜಯಾನಂದ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಪೊಲೀಸ್‌ ಇಲಾಖೆ, ತಂಬಾಕು ನಿಯಂತ್ರಣ ಅಧಿಕಾರಿಗಳು, ಶಿಕ್ಷ ಣ ಇಲಾಖೆ, ತಾಲೂಕಾ ವೈದ್ಯಾಧಿಕಾರಿಗಳು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ