ಆ್ಯಪ್ನಗರ

ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ

ಹಾವೇರಿ: ತಾಲೂಕಿನ ಹಂದಿಗನೂರ ಗ್ರಾಮದಲ್ಲಿ 2018-19 ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ರೋಜಗಾರ ಹಾಗೂ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ ಜರುಗಿತು.

Vijaya Karnataka 13 Jan 2019, 5:00 am
ಹಾವೇರಿ: ತಾಲೂಕಿನ ಹಂದಿಗನೂರ ಗ್ರಾಮದಲ್ಲಿ 2018-19 ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ರೋಜಗಾರ ಹಾಗೂ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ ಜರುಗಿತು.
Vijaya Karnataka Web community exploration gram sabha
ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ


ಪಶುಪಾಲನೆ ಮತ್ತು ಪಶುವೈದ್ಯ ಇಲಾಖೆ ಸಹಾಯಕ ನಿರ್ದೆಶಕ ಡಾ. ಪರಮೆಶ ಹುಬ್ಬಳ್ಳಿ ಮಾತನಾಡಿ, ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಉದ್ಯೋಗವನ್ನು ಒದಗಿಸಿ, ಅವರ ಜೀವನಕ್ಕೆ ಭದ್ರತೆ ನೀಡಲಾಗುತ್ತದೆ. ದೀರ್ಘಕಾಲ ಬಾಳಿಕೆ ಬರುವ ಆಸ್ತಿಗಳನ್ನು ಸೃಜಿಸುವುದು. ಗ್ರಾಮೀಣ ಬಡವರ ಜೀವನೋಪಾಯದ ಮಟ್ಟವನ್ನು ಸುಧಾರಿಸುವುದು. ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಬಲಪಡಿಸಲಾಗುತ್ತಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಅರ್ಹ ಪ್ರತಿ ಕುಟುಂಬವು ಉದ್ಯೋಗ ಚೀಟಿ ಹೊಂದುವ ಹಕ್ಕು ಹೊಂದಿರುತ್ತಾರೆ. ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬ 100 ಮಾನವ ದಿನಗಳ ಕೆಲಸಕ್ಕಾಗಿ ಅರ್ಜಿ ಸಲ್ಲಿಸಲು ಹಕ್ಕುಳ್ಳವರಾಗಿರುತ್ತಾರೆ ಎಂದರು.

ತಾಲೂಕು ಸಾಮಾಜಿಕ ಪರಿಶೊಧಕ ಸಂಪತ್ತಕುಮಾರ, ಸಂಯೋಜಕ ಗಿರೀಶ ಜಿ.ಬಿ., ತಾಲೂಕು ಪಂಚಾಯಿತಿ ಉಪಾಧ್ಯಕ್ಷ ರು, ಗ್ರಾ.ಪಂ. ಅಧ್ಯಕ್ಷ ರು, ಉಪಾಧ್ಯಕ್ಷ ರು, ಸದಸ್ಯರು, ಉದ್ಯೋಗ ಚೀಟಿ ಪಡೆದ ಕೂಲಿ ಕಾರ್ಮಿಕರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಎಂ. ರೂಡಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಬಸವರಾಜ ಸಂಶಿ ನಿರೂಪಿಸಿ, ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ