ಆ್ಯಪ್ನಗರ

ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ

ಹಾವೇರಿ: ಶಿಕ್ಷಣ ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿದೆ. ಪೋಷಕರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಶ್ರೀವಿದ್ಯಾ ಹೇಳಿದರು.

Vijaya Karnataka 12 Nov 2019, 5:00 am
ಹಾವೇರಿ: ಶಿಕ್ಷಣ ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿದೆ. ಪೋಷಕರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಶ್ರೀವಿದ್ಯಾ ಹೇಳಿದರು.
Vijaya Karnataka Web educate children
ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ


ಜಿಲ್ಲಾಕಾನೂನೂ ಸೇವೆಗಳ ಪ್ರಾಧಿಕಾರ, ಜಿಲ್ಲಾನ್ಯಾವಾದಿಗಳ ಸಂಘ, ಅಭಿಯೋಜಕರ ಇಲಾಖೆ, ಪೊಲೀಸ್‌ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿನಗರದ ಜ್ಞಾನಗಂಗಾ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿಸೋಮವಾರ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಪ್ರಯುಕ್ತ ನಡೆದ ಕಡ್ಡಾಯ ಶಿಕ್ಷಣ ಹಕ್ಕು ಕುರಿತು ಕಾನೂನು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನ್ಯಾಯ ವಿತರಣೆ ಎಲ್ಲರಿಗೂ ಸಮಾನವಾಗಿ ಸಿಗಲೆಂದೇ ಉಚಿತ ಕಾನೂನು ಪ್ರಾಧಿಕಾರ ರಚನೆ ಮಾಡಲಾಗಿದೆ. ಇದಕ್ಕಾಗಿ ಅನುಚ್ಛೇದ 39(ಎ)ನಲ್ಲಿಒಂದು ಸರಕಾರ ಎಲ್ಲಾಬಡಜನರಿಗೆ ಉಚಿತ ಕಾನೂನು ಸೇವೆ ನೀಡುವುದು ಆಯಾ ರಾಜ್ಯದ ಮುಖ್ಯ ಕರ್ತವ್ಯವಾಗಿದೆ ಎಂದು ಉಲ್ಲೇಖಿಸಲಾಗಿದೆ. ಈ ನಿಟ್ಟಿನಲ್ಲಿ1987 ರಲ್ಲಿಮೊದಲ ಬಾರಿ ಉಚಿತ ಕಾನೂನು ಸೇವೆ ಜಾರಿಗೆ ಬಂದಿತು ಎಂದು ತಿಳಿಸಿದರು

ಅಧ್ಯಕ್ಷತೆ ವಹಿಸಿದ್ದ ಬಿಇಒ ಎಂ.ಎಚ್‌.ಪಾಟೀಲ ಮಾತನಾಡಿ, ಶಿಕ್ಷಣ ಒಂದು ಶಕ್ತಿ, ಬೆಳಕು. ಬಡತನವೆಂಬ ಕತ್ತಲು ಹೋಗಲಾಡಿಸಲು ಪ್ರತಿಯೊಬ್ಬರು ಶಿಕ್ಷಣ ಪಡೆಯಲೇಬೆಕಾಗಿದೆ ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿಗಳಾದ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, 2009 ರಲ್ಲಿಭಾರತ ಸರಕಾರ ಎಲ್ಲರಿಗೂ ಕಡ್ಡಾಯ ಮತ್ತು ಉಚಿತ ಶಿಕ್ಷಣ ಸಿಗಬೇಕು ಎನ್ನುವ ನಿಟ್ಟಿನಲ್ಲಿಆರ್‌ಟಿಇ ಜಾರಿಗೆ ತಂದಿದೆ ಎಂದರು.

ರಾಜೇಶ್ವರಿ ಅವರು ರಾಷ್ಟ್ರೀಯ ಕಾನೂನು ಸೇವೆಗಳ ಕಾಯ್ದೆ ಕುರಿತು ಮತ್ತು ದೈಹಿಕ ಶಿಕ್ಷಣಾಧಿಕಾರಿ ಎನ್‌.ಐ.ಇಚ್ಚಂಗಿ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಕುರಿತು ಉಪನ್ಯಾಸ ನೀಡಿದರು. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಸಿ.ಪಾವಲಿ, ಕಾರ್ಯದರ್ಶಿ ಪಿ.ಎಂ.ಬೆನ್ನೂರ, ಹಿರಿಯ ಸರಕಾರಿ ಅಭಿಯೋಜಕ ಎಸ್‌.ಎಂ.ಗೆಜ್ಜಿಹಳ್ಳಿ, ಜ್ಞಾನಗಂಗಾ ಆಂಗ್ಲಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸಿದ್ದಲಿಂಗೇಶ ನೀರಲಗಿ, ಕೃಷ್ಣಾ ಪಿ. ಸೇರಿದಂತೆ ಇನ್ನಿತರರು ಈ ಸಂದರ್ಭದಲ್ಲಿಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ