ಆ್ಯಪ್ನಗರ

ರೈತ ಸಂಘ ಪ್ರತಿಭಟನೆ

ರಾಣೇಬೆನ್ನೂರ: ತಾಲೂಕಿನ ಹೋಬಳಿ ಮಟ್ಟದ ಕೃಷಿ ಸಂಪರ್ಕ ಕೇಂದ್ರಗಳಲ್ಲಿನ ಸಿಬ್ಬಂದಿ ಕೊರತೆ ನಿವಾರಿಸಬೇಕು ಹಾಗೂ ರೈತರಿಗೆ ಸಕಾಲಕ್ಕೆ ಬೀಜ, ಗೊಬ್ಬರ ಪೂರೈಸುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ತಾಲೂಕ ಘಟಕದ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟಿಸಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Vijaya Karnataka 9 May 2019, 5:00 am
ರಾಣೇಬೆನ್ನೂರ: ತಾಲೂಕಿನ ಹೋಬಳಿ ಮಟ್ಟದ ಕೃಷಿ ಸಂಪರ್ಕ ಕೇಂದ್ರಗಳಲ್ಲಿನ ಸಿಬ್ಬಂದಿ ಕೊರತೆ ನಿವಾರಿಸಬೇಕು ಹಾಗೂ ರೈತರಿಗೆ ಸಕಾಲಕ್ಕೆ ಬೀಜ, ಗೊಬ್ಬರ ಪೂರೈಸುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ತಾಲೂಕ ಘಟಕದ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟಿಸಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
Vijaya Karnataka Web HVR-8RNR5

ರೈತ ಸಂಘದ ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ಸರಕಾರ ರೈತರಿಗೆ ಉತ್ತಮ ಸೇವೆ ಒದಗಿಸಲು ಹೋಬಳಿ ಮಟ್ಟದಲ್ಲಿ ರೈತಸಂರ್ಪಕ ಕೇಂದ್ರಗಳನ್ನು ತೆರೆದಿದೆ. ಆದರೆ ಸಿಬ್ಬಂದಿ ಕೊರತೆಯಿಂದಾಗಿ ರೈತರಿಗೆ ಸಮರ್ಪಕ ಸೇವೆ ಸಿಗದಂತಾಗಿದ್ದು ಕೂಡಲೇ ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಕಳೆದ ನಾಲ್ಕೈದು ವರ್ಷಗಳಿಂದ ಬರಗಾಲದಿಂದ ತತ್ತರಿಸಿರುವ ತಾಲೂಕಿನ ರೈತರು ಈ ಬಾರಿ ಉತ್ತಮ ಮುಂಗಾರಿನ ನಿರೀಕ್ಷೆಯಲ್ಲಿ ಭೂಮಿ ಹದ ಮಾಡಿಕೊಂಡಿದ್ದಾರೆ. ಅದಕ್ಕಾಗಿ ಮಳೆ ಸುರಿದ ತಕ್ಷ ಣ ಬಿತ್ತನೆ ಕೈಗೊಳ್ಳಲು ಅನುಕೂಲವಾಗುವಂತೆ ಸಮರ್ಪಕ ಪ್ರಮಾಣದಲ್ಲಿ ಬೀಜ ಮತ್ತು ಗೊಬ್ಬರದ ದಾಸ್ತಾನು ಮಾಡಿಕೊಳ್ಳಬೇಕು. ಎಲ್ಲಕ್ಕಿಂತಲೂ ಪ್ರಮುಖವಾಗಿ ತಾಲೂಕಿನಲ್ಲಿ ನಕಲಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡದಂತೆ ಕೃಷಿ ಅಧಿಕಾರಿಗಳು ಅಗತ್ಯ ಮುಂಜಾಗರೂಕತಾ ಕ್ರಮ ಕೈಗೊಂಡು ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಬಸವರಾಜ ಹುಲ್ಲತ್ತಿ, ಬಸವರಾಜ ರಾಜನಹಳ್ಳಿ, ಮಂಜಪ್ಪ ಬಾರ್ಕಿ, ಭರಮಪ್ಪ ಪೂಜಾರ, ರಾಯಣ್ಣ ಮಾಕನೂರ, ನಾಗರಾಜ ಬಣಕಾರ, ಪ್ರಶಾಂತಕುಮಾರ, ಪಿ.ಆರ್‌.ಪಾಟೀಲ, ಭೀಮರಡ್ಡಿ, ಯಮನಪ್ಪ ಮತ್ತು ಇತರರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ