ಆ್ಯಪ್ನಗರ

ಹಾವೇರಿಯಲ್ಲಿ ಮೊದಲ ಕೊರೊನಾ ಕೇಸ್‌, ಹಸಿರು ವಲಯದ ಜಿಲ್ಲೆ ಆರೆಂಜ್‌ ಝೋನ್‌ಗೆ

ಜಿಲ್ಲೆಯ ಸವಣೂರಿನ ಒಬ್ಬರಿಗೆ ಕೊರೊನಾ ವೈರಸ್‌ ಇರುವುದು ಖಚಿತವಾಗುತ್ತಿದ್ದಂತೆ ಅವರ ಕುಟುಂಬದ 14 ಸದಸ್ಯರು, ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಸೇರಿ 21 ಜನರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Vijaya Karnataka 4 May 2020, 3:16 pm
ಹಾವೇರಿ: ಹಸಿರು ವಲಯದಲ್ಲಿದ್ದು ಲಾಕ್‌ಡೌನ್‌ ಸಡಿಲಿಕೆಯ ಸಂಪೂರ್ಣ ಲಾಭ ಪಡೆಯಲು ತಯಾರಾಗಿದ್ದ ಜಿಲ್ಲೆಯ ಜನತೆಗೆ ಸೋಮವಾರದ ಸುದ್ದಿ ಬರಸಿಡಿಲಿನಂತೆ ಬಂದೆರಗಿದೆ. ಲಾಕ್‌ಡೌನ್‌ ಉದ್ದಕ್ಕೂ ಒಂದೇ ಒಂದು ಕೊರೊನಾ ವೈರಸ್‌ ಪ್ರಕರಣಗಳು ವರದಿಯಾಗದೇ ಇದ್ದ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ವ್ಯಕ್ತಿಯೊಬ್ಬರ ಕೋವಿಡ್‌-19 ವರದಿ ಪಾಸಿಟಿವ್‌ ಬಂದಿದೆ.
Vijaya Karnataka Web coronavirus-01


ಮುಂಬಯಿ, ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಿದ್ದ ಜಿಲ್ಲೆಯ ಸವಣೂರಿನ 32 ವರ್ಷದ ಪುರುಷರೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರಿಂದ ಒಂದೇ ಕುಟುಂಬದ ಮೂವರಿಗೆ ಕೊರೊನಾ ವೈರಸ್‌ ವ್ಯಾಪಿಸಿರುವ ಸಾಧ್ಯತೆ ಇದ್ದು, ಸಂಜೆ ವೇಳೆಗೆ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

ಒಬ್ಬರಿಗೆ ಕೊರೊನಾ ವೈರಸ್‌ ಇರುವುದು ಖಚಿತವಾಗುತ್ತಿದ್ದಂತೆ ಅವರ ಕುಟುಂಬದ 14 ಸದಸ್ಯರು, ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಸೇರಿ 21 ಜನರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊರೊನಾ ವೈರಸ್‌ ಕಾಣಿಸಿಕೊಂಡ ಸವಣೂರಿನ 100 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಕಂಟೈನ್‌ಮೆಂಟ್‌ ಝೋನ್‌ ಎಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ 394 ಮನೆಗಳಿದ್ದು, 1,780 ಜನರು ವಾಸವಾಗಿದ್ದಾರೆ. 500 ಮೀಟರ್‌ ಪ್ರದೇಶವನ್ನು ಬಫರ್‌ ಝೋನ್‌ ಎಂದು ಘೋಷಣೆ ಮಾಡಲಾಗಿದ್ದು, ಮೂರು ಹಳ್ಳಿಗಳಲ್ಲಿ ಆರೋಗ್ಯ ಪರೀಕ್ಷೆ ಆರಂಭಿಸಲಾಗಿದೆ. ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಲಾಗಿದ್ದು, ಮನೆಯಿಂದ ಹೊರಗೆ ಬರುವುದನ್ನು ನಿಷೇಧಿಸಲಾಗಿದೆ.

ಮೊದಲ ಪ್ರಕರಣ ಪತ್ತೆಯಾಗುವುದರೊಂದಿಗೆ ಹಾವೇರಿ ಜಿಲ್ಲೆ ಹಸಿರು ವಲಯದಿಂದ ಕಿತ್ತಳೆ ವಲಯಕ್ಕೆ ಜಾರಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ