ಆ್ಯಪ್ನಗರ

ಯುವಕರು ತಪ್ಪದೇ ಮತದಾನ ಮಾಡಲಿ

ಬಂಕಾಪುರ: ದೇಶದ ಅಭಿವೃದ್ಧಿ, ಜನರ ಬೇಡಿಕೆಗಳಿಗೆ ಪರಿಹಾರ ಸಿಗಬೇಕಾದರೆ ದೇಶಕ್ಕೆ ಸುಭದ್ರ ಸರಕಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಯುವಕರು ತಪ್ಪದೇ ಮತದಾನ ಮಾಡಬೇಕು ಎಂದು ಸಮಾಜ ಸೇವಕ ಪವನ ಸಾರಥಿ ತಿಳಿಸಿದರು.

Vijaya Karnataka 24 Mar 2019, 5:00 am
ಬಂಕಾಪುರ: ದೇಶದ ಅಭಿವೃದ್ಧಿ, ಜನರ ಬೇಡಿಕೆಗಳಿಗೆ ಪರಿಹಾರ ಸಿಗಬೇಕಾದರೆ ದೇಶಕ್ಕೆ ಸುಭದ್ರ ಸರಕಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಯುವಕರು ತಪ್ಪದೇ ಮತದಾನ ಮಾಡಬೇಕು ಎಂದು ಸಮಾಜ ಸೇವಕ ಪವನ ಸಾರಥಿ ತಿಳಿಸಿದರು.
Vijaya Karnataka Web HVR-23SGN-1


ಪಟ್ಟಣದ ಸರಕಾರಿ ಪ್ರಥಮ ದರ್ಜೆ ಮಹಾ ವಿದ್ಯಾಲಯದಲ್ಲಿ ಮಾತೃ ಮಂಡಳಿ ಆಶ್ರಯದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೌಲ್ಯಯುತ ಪ್ರಜಾಪ್ರಭುತ್ವವನ್ನು ನಿರ್ಮಾಣ ಮಾಡಲು 18 ವರ್ಷ ತುಂಬಿದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನವು ಸಂವಿಧಾನ ಬದ್ಧವಾಗಿ ಸಾರ್ವಜನಿಕರಿಗೆ ಸಿಕ್ಕಿರುವ ಪ್ರಬಲ ಅಸ್ತ್ರವಾಗಿದೆ. ಆ ಹಕ್ಕನ್ನು ಪ್ರತಿಯೊಬ್ಬರು ಚಲಾಯಿಸುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಪ್ರೊ. ಯಮುನಾ ಕೋಣೇಸರ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ನಿರ್ಣಯದಂತೆ ಜನ ನಾಯಕನಾಗುತ್ತಾನೆ. ಪ್ರಜೆಗಳು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಮತ ಚಲಾಯಿಸಿದಾಗ ಮಾತ್ರ ಒಳ್ಳೆಯ ಅಭ್ಯರ್ಥಿ ಆಯ್ಕೆ ಮಾಡಲು ಸಾಧ್ಯ. ಅಂತಹ ಅಭ್ಯರ್ಥಿಗಳಿಂದ ಮಾತ್ರ ಸದೃಢ ಸುಭದ್ರ ರಾಷ್ಟ್ರ ನಿರ್ಮಾಣವಾಗಲು ಸಾಧ್ಯ ಎಂದರು.

ಮಾತೃ ಮಂಡಳಿ ಮುಕ್ತಾ ಉಥಳೆಕರ, ಮುಖಂಡರಾದ ಗಂಗಾಧರ ಪಟ್ಟಣಶೆಟ್ಟರ, ಸುರೇಶ ಉಥಳೆಕರ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೊ. ವಿಜಯ ಗುಡಗೇರಿ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ