ಆ್ಯಪ್ನಗರ

ಮಹಿಳೆಯರ ರಕ್ಷಣೆಗೆ ಹಲವು ಕಾನೂನು

ಶಿಗ್ಗಾವಿ: ಈ ಹಿಂದೆ ನಾಲ್ಕು ಗೋಡೆಗಳ ಮಧ್ಯ ಬದುಕಿದ್ದ ಮಹಿಳೆಯರು, ಇಂದು ಮನೆಗೆಲಸ ನಿಭಾಯಿಸಿಕೊಂಡು ಪುರುಷರಿಗೆ ಸರಿ ಸಮಾನರಾಗಿ ಎಲ್ಲ ರಂಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರಾಮಾಣಿಕ, ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಶಿಗ್ಗಾವಿ ಕಿರಿಯ ದಿವಾಣಿ ನ್ಯಾಯಾಲಯದ ನ್ಯಾಯಾಧೀಶರಾದ ಬಾಳಾಸಾಹೇಬ ವಡವಡೆ ಹೇಳಿದರು.

Vijaya Karnataka 11 Mar 2019, 5:00 am
ಶಿಗ್ಗಾವಿ: ಈ ಹಿಂದೆ ನಾಲ್ಕು ಗೋಡೆಗಳ ಮಧ್ಯ ಬದುಕಿದ್ದ ಮಹಿಳೆಯರು, ಇಂದು ಮನೆಗೆಲಸ ನಿಭಾಯಿಸಿಕೊಂಡು ಪುರುಷರಿಗೆ ಸರಿ ಸಮಾನರಾಗಿ ಎಲ್ಲ ರಂಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಪ್ರಾಮಾಣಿಕ, ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಶಿಗ್ಗಾವಿ ಕಿರಿಯ ದಿವಾಣಿ ನ್ಯಾಯಾಲಯದ ನ್ಯಾಯಾಧೀಶರಾದ ಬಾಳಾಸಾಹೇಬ ವಡವಡೆ ಹೇಳಿದರು.
Vijaya Karnataka Web HVR-9SGN-3


ಶುಕ್ರವಾರ ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮೀತಿ, ನ್ಯಾಯವಾದಿಗಳ ಸಂಘ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಇಲಾಖೆ, ಪೊಲೀಸ್‌ ಮತ್ತು ಕಂದಾಯ ಇಲಾಖೆ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾನೂನು ಅರಿವು-ನೆರುವು ಕಾರ್ಯಕ್ರಮ ಉದ್ಟಾಟಿಸಿ ಮಾತನಾಡಿದ ಅವರು, ಈಗ ಸರಕಾರಗಳು, ಮಹಿಳೆಯರಿಗಾಗಿ ಹಲವು ಕಠಿಣ ಕಾನೂನುಗಳನ್ನು ರೂಪಿಸಿದೆ ಎಂದರು.

ಮಹಿಳೆಯರ ರಕ್ಷ ಣೆಗೆ ಕಾನೂನು ಮತ್ತು ಅವರ ಸಾಮಾಜಿಕ ಅಭಿವೃದ್ಧಿಗೆ ಯೋಜನೆ ರೂಪಿಸಿದೆ. ನ್ಯಾಯಾಂಗ ಇಲಾಖೆ ಮಹಿಳೆಯರಿಗೆ ಉಚಿತ ಕಾನೂನು ಅರಿವು-ನೆರವು ಕಾರ್ಯಕ್ರಮ ರೂಪಿಸಿದೆ. ತಮ್ಮ ಸಮಸ್ಯೆಗಳನ್ನು ಅದಾಲತ್‌ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಿದೆ ಎಂದರು.

ಸರಕಾರಿ ಸಹಾಯಕ ಅಭಿಯೋಜಕ ಜಿ.ಕೆ.ಕುರ್ಡಿಕೇರಿ ಮಾತನಾಡಿ, ಇಂದು ಮಹಿಳೆಯ ಅಬಲೆಯಲ್ಲ, ಸಬಲೆ. ಮಹಿಳೆಯರಿಗೆ ಎಲ್ಲ ರಂಗಗಳಲ್ಲಿ ಭಾಗವಹಿಸುವ ಮುಕ್ತ ಅವಕಾಶವಿದೆ. ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಉನ್ನತಿ ಹೊಂದಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷ ತೆ ವಹಿಸಿ ಮಾತನಾಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ.ವೈ.ಪರಶುರಾಮ ಗಾಜಿಯವರ, ಮಹಿಳೆಯರು ಹಾಗೂ ಮಕ್ಕಳ ಅಭಿವೃದ್ಧಿಗಾಗಿಯೇ ಸರಕಾರ ಶಿಶು ಅಭಿವೃದ್ಧಿ ಇಲಾಖೆ ರೂಪಿಸಿದೆ. ಇಲಾಖೆ ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿ ಕೆಲಸ ಮಾಡುತ್ತಿದೆ. ತಾಯಂದಿರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸುವ ಮಹತ್ತರ ಜವಾಬ್ದಾರಿ ಹೊತ್ತು ಪೌಷ್ಠಿಕ ಆಹಾರ ಪೂರೈಸುತ್ತಿದೆ ಎಂದರು.

ನ್ಯಾಯವಾದಿ ಕೆ.ಎನ್‌.ಭಾರತಿ ಮಾತನಾಡಿ, ಇಂದಿನ ಆಧುನಿಕ ಯುಗದಲ್ಲಿ ಸುಂದರ ಸಮಾಜ ಕಟ್ಟುವಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ ಎಂದರು.

ಎಎಸ್‌ಐ ಪೊಲೀಸಗೌಡ್ರ ಮಾತನಾಡಿ ಮಹಿಳೆಯರ ರಕ್ಷ ಣೆಯೇ ಪೊಲೀಸರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸಹಾಯವಾಣಿ ಸ್ಥಾಪಿಸಿದೆ. ಮಹಿಳೆಯರು ಸಮಸ್ಯೆಗಳು ಬಂದಲ್ಲಿ ಧೈರ್ಯದಿಂದ ಬಂದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಮೇಲ್ವಿಚಾರಕರು, ಕಾರ್ಯಕರ್ತೆಯರು, ಸಹಾಯಕಿಯರು ಸೇರಿದಂತೆ ಮಹಿಳೆಯರು ಉಪಸ್ಥಿತರಿದ್ದರು. ನ್ಯಾಯವಾದಿ ಪಿ.ಪಿ ಹೊಂಡದಕಟ್ಟಿ ನಿರೂಪಿಸಿದರು. ಜಯಶ್ರೀ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ