ಆ್ಯಪ್ನಗರ

ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾಗಿರುವ ಹಾವೇರಿಯ ಖಾಸಗಿ ವೈದ್ಯರು, ಸುಧಾಕರ್‌ ಶ್ಲಾಘನೆ

ಕೋವಿಡ್‌ ಸಂಕಷ್ಟಲ್ಲಿರುವವರಿಗೆ ಉಚಿತವಾಗಿ ಚಿಕಿತ್ಸೆ ನೀಡಲು ಹಾವೇರಿ ಜಿಲ್ಲೆಯ ಖಾಸಗಿ ವೈದ್ಯರು ಮುಂದಾಗಿದ್ದಾರೆ. ವೈದ್ಯರ ಈ ನಡೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Vijaya Karnataka Web 2 Aug 2020, 1:03 pm
ಹಾವೇರಿ: ಕೋವಿಡ್‌ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಹಾವೇರಿ ಜಿಲ್ಲೆಯ ಖಾಸಗಿ ವೈದ್ಯರು ಮುಂದಾಗಿರುವುದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Vijaya Karnataka Web sudhakar new


ಹಾವೇರಿ ಜಿಲ್ಲೆಯ 570 ಮಂದಿ ಖಾಸಗಿ ವೈದ್ಯರು ಕೋವಿಡ್‌ ಸಂಕಷ್ಟದಲ್ಲಿರುವವರಿಗೆ ಚಿಕಿತ್ಸೆ ನೀಡಲು ಮುಂದೆ ಬಂದಿದ್ದಾರೆ. ಸಂಕಷ್ಟದ ಕಾಲದಲ್ಲಿ ವೈದ್ಯರ ಸ್ಪಂದನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೋವಿಡ್‌ ಚಿಕಿತ್ಸೆ: 2 ವಾರದೊಳಗೆ ಶಿವಾಜಿನಗರದ ಬ್ರಾಡ್ ವೇ ಆಸ್ಪತ್ರೆ ಕಾರ್ಯಾರಂಭ

ಈ ಕುರಿತಾಗಿ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ “ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾಗಿರುವ ಹಾವೇರಿ ಜಿಲ್ಲೆಯ 570 ಖಾಸಗಿ ವೈದ್ಯರು ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ. ಕೊರೊನಾದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಯಾವುದೇ ಪ್ರತಿಫಲ ಅಪೇಕ್ಷಿಸದೆ ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ಮಾನವೀಯತೆ ಮೆರೆದಿರುವ ಈ ವೈದ್ಯರ ವೃತ್ತಿಪರತೆ ಮತ್ತು ಸೇವಾ ಮನೋಭಾವ ಆತ್ಯಂತ ಶ್ಲಾಘನೀಯ” ಎಂದಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಸೋಂಕು ತೀವ್ರ ಸ್ವರೂಪದಲ್ಲಿ ಏರಿಕೆಯಾಗುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳ ಕೊರತೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದುಬಾರಿ ಪಾವತಿಯಿಂದಾಗಿ ಜನರು ಕಂಗೆಟ್ಟದ್ದಾರೆ.


ಮತ್ತೊಂದು ಕಡೆಯಲ್ಲಿ ವೈದ್ಯರ ಕೊರತೆ ಕೂಡಾ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಉಚಿತವಾಗಿ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ಖಾಸಗಿ ವೈದ್ಯರು ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ