ಆ್ಯಪ್ನಗರ

ನೆಹರು ಜನ್ಮದಿನ, ಮಕ್ಕಳ ದಿನಾಚರಣೆ ಕಾರ್ಯಕ್ರಮ

ಸವಣೂರು: ಮಕ್ಕಳ ಬಗ್ಗೆ ಅಪಾರ ಒಲವಿದ್ದು, ಮಕ್ಕಳೊಂದಿಗೆ ಮಗುವಾಗುತ್ತಿದ್ದ ಈ ದೇಶದ ಮೊದಲ ಪ್ರಧಾನಿ ಪಂ. ಜವಾಹರಲಾಲ ನೆಹರು ಅವರ ತತ್ವ ಆದರ್ಶಗಳನ್ನು ಇಂದಿನ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿಅಳವಡಿಸಿಕೊಳ್ಳುವುದು ಅವಶ್ಯವಿದೆ ಎಂದು ಅಂಜುಮನ್‌ ಇಸ್ಲಾಂ ಸಮಿತಿ ಅಧ್ಯಕ್ಷ ಜೀಶಾನಅಹ್ಮದಖಾನ ಪಠಾಣ ಹೇಳಿದರು.

Vijaya Karnataka 16 Nov 2019, 5:00 am
ಸವಣೂರು: ಮಕ್ಕಳ ಬಗ್ಗೆ ಅಪಾರ ಒಲವಿದ್ದು, ಮಕ್ಕಳೊಂದಿಗೆ ಮಗುವಾಗುತ್ತಿದ್ದ ಈ ದೇಶದ ಮೊದಲ ಪ್ರಧಾನಿ ಪಂ. ಜವಾಹರಲಾಲ ನೆಹರು ಅವರ ತತ್ವ ಆದರ್ಶಗಳನ್ನು ಇಂದಿನ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿಅಳವಡಿಸಿಕೊಳ್ಳುವುದು ಅವಶ್ಯವಿದೆ ಎಂದು ಅಂಜುಮನ್‌ ಇಸ್ಲಾಂ ಸಮಿತಿ ಅಧ್ಯಕ್ಷ ಜೀಶಾನಅಹ್ಮದಖಾನ ಪಠಾಣ ಹೇಳಿದರು.
Vijaya Karnataka Web nehru birthday childrens day celebration
ನೆಹರು ಜನ್ಮದಿನ, ಮಕ್ಕಳ ದಿನಾಚರಣೆ ಕಾರ್ಯಕ್ರಮ

ಸವಣೂರು ಪಟ್ಟಣದ ಅಂಜುಮನ ಎ ಇಸ್ಲಾಂ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿಜರುಗಿದ ಮಾಜಿ ಪ್ರಧಾನಿ ಜವಹರಲಾಲ ನೆಹರು ಅವರ ಜನ್ಮ ದಿನ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಂ. ಜವಹರಲಾಲ ನೆಹರು ಜೀವನ ಮತ್ತು ಸಾಧನೆಗಳ ಕುರಿತು ಮಕ್ಕಳಿಗೆ ತಿಳಿಸಿದರು.

ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಜರುಗಿದ ವೇಷಭೂಷಣ, ನೃತ್ಯ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದುಕೊಂಡರು.

ಕಾರ್ಯಕ್ರಮದಲ್ಲಿಅಂಜುಮನ್‌ ಎ ಇಸ್ಲಾಂ ಶಿಕ್ಷಣ ಸಂಸ್ಥೆಯ ಎಲ್ಲಪದಾಧಿಕಾರಿಗಳು, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ