ಆ್ಯಪ್ನಗರ

ಎಂಜನಿಯರಿಂಗ್‌ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ ನೀಡಿ

ಹಾವೇರಿ: ಸರಕಾರಿ ಎಂಜನಿಯರಿಂಗ್‌ ಕಾಲೇಜ್‌ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಬೇಕೆಂದು ಆಗ್ರಹಿಸಿ ಎಐಡಿಎಸ್‌ಒ ಸಂಘಟನೆಯ ನೇತೃತ್ವದಲ್ಲಿಹಾವೇರಿ ಸರಕಾರಿ ಎಂಜನಿಯರ್‌ ಕಾಲೇಜ್‌ ವಿದ್ಯಾರ್ಥಿಗಳು ಬುಧವಾರ ಜಿಲ್ಲಾಡಳಿತ ಮುಂಭಾಗದಲ್ಲಿಬೃಹತ್‌ ಪ್ರತಿಭಟನೆ ನಡೆಸಿದರು.

Vijaya Karnataka 5 Mar 2020, 5:00 am
ಹಾವೇರಿ: ಸರಕಾರಿ ಎಂಜನಿಯರಿಂಗ್‌ ಕಾಲೇಜ್‌ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಬೇಕೆಂದು ಆಗ್ರಹಿಸಿ ಎಐಡಿಎಸ್‌ಒ ಸಂಘಟನೆಯ ನೇತೃತ್ವದಲ್ಲಿಹಾವೇರಿ ಸರಕಾರಿ ಎಂಜನಿಯರ್‌ ಕಾಲೇಜ್‌ ವಿದ್ಯಾರ್ಥಿಗಳು ಬುಧವಾರ ಜಿಲ್ಲಾಡಳಿತ ಮುಂಭಾಗದಲ್ಲಿಬೃಹತ್‌ ಪ್ರತಿಭಟನೆ ನಡೆಸಿದರು.
Vijaya Karnataka Web 4 HAVERI 2-_23
ಹಾವೇರಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿಎಐಡಿಎಸ್‌ಒ ಸಂಘಟನೆಯ ನೇತೃತ್ವದಲ್ಲಿಸರಕಾರಿ ಎಂಜನಿಯರ್‌ ಕಾಲೇಜ್‌ ವಿದ್ಯಾರ್ಥಿಗಳು ಬುಧವಾರ ಉಚಿತ ಲ್ಯಾಪ್‌ಟಾಪ್‌ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.


ದೇವಗಿರಿಯ ಸರಕಾರಿ ಎಂಜನಿಯರಿಂಗ್‌ ಕಾಲೇಜಿನಿಂದ ಪ್ರತಿಭಟನೆ ಮೆರವಣಿಗೆ ಪ್ರಾರಂಭಿಸಿ ಜಿಲ್ಲಾಡಳಿತ ಭವನದವರೆಗೆ ಬೃಹತ್‌ ಪ್ರತಿಭಟನೆ ನಡೆಸಿ ಸರಕಾರ ವಿರುದ್ಧ ಧಿಕ್ಕಾರ ಕೂಗಿದರು.

ಈ ವೇಳೆ ವಿದ್ಯಾರ್ಥಿ ಮುಖಂಡರು ಮಾತನಾಡಿ, ರಾಜ್ಯ ಸರಕಾರ ರಾಜ್ಯದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ಯೋಜನೆಯನ್ನು ಘೋಷಿಸಿದ್ದು, ಇದರೊಂದಿಗೆ ತಾಂತ್ರಿಕ ಶಿಕ್ಷಣ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್‌ಟಾಪ್‌ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ12 ಎಂಜನಿಯರಿಂಗ್‌ ಕಾಲೇಜ್‌ಗಳಿದ್ದು, ತಾಂತ್ರಿಕ ಶಿಕ್ಷಣ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಅವಶ್ಯಕವಾಗಿದೆ. ಸರಕಾರಿ ಕಾಲೇಜಿನಲ್ಲಿಓದುತ್ತಿರುವ ಎಲ್ಲಾವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಅಗತ್ಯವಾಗಿದೆ. ಸರಕಾರಿ ಕಾಲೇಜಿನಲ್ಲಿಓದುತ್ತಿರುವ ಎಲ್ಲಾವಿದ್ಯಾರ್ಥಿಗಳು ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಾಗಿವೆ. ಲ್ಯಾಪ್‌ಟಾಪ್‌ ಇಲ್ಲದೆ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನಡೆಯಾಗುತ್ತಿದೆ ಎಂದು ಆರೋಪಿಸಿದರು.

ಪ್ರತಿ ವರ್ಷದ ಪಠ್ಯಕ್ರಮದಲ್ಲಿಎಷ್ಟು ಭಾಗಗಳನ್ನು ಪೂರೈಸಲು ಲ್ಯಾಪ್‌ಟಾಪ್‌ ಮೇಲೆ ಅವಲಂಬಿತರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿಸರಕಾರಿ ಎಂಜನಿಯರ್‌ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರವು ಉಚಿತ ಲ್ಯಾಪ್‌ಟಾಪ್‌ ಘೋಷಿಸಿ ಶೀಘ್ರದಲ್ಲಿಯೇ ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.

ಎಂಜನಿಯರಿಂಗ್‌ ಕಾಲೇಜಿನಲ್ಲಿಓದುತ್ತಿರುವ ವಿದ್ಯಾರ್ಥಿಗಳು ಶ್ರೀಮಂತರಿದ್ದಾರೆ ಎಂದು ತಿಳಿದುಕೊಂಡಿದ್ದಾರೆ. ಆದರೆ ಸರಕಾರಿ ಎಂಜನಿಯರ್‌ ಕಾಲೇಜಿನಲ್ಲಿಓದುತ್ತಿರುವ ವಿದ್ಯಾರ್ಥಿಗಳ ಶ್ರೀಮಂತರಿಲ್ಲ. ಸಾಲ ಮಾಡಿ ಪಾಲಕರು ಎಂಜನಿಯರಿಂಗ್‌ ಓದಿಸುತ್ತಿದ್ದಾರೆ ಎಂದರು.

ರಾಜ್ಯ ಸರಕಾರ ಪದವಿ ವಿದ್ಯಾರ್ಥಿಗಳಿಗೆ ನೀಡಿದಂತೆ ಸರಕಾರಿ ಎಂಜನಿಯರ್‌ ಕಾಲೇಜ್‌ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್‌ಟಾಪ್‌ ನೀಡಿದರೆ ಸಾವಿರಾರು ವಿದ್ಯಾರ್ಥಿಗಳ ಓದುವುದಕ್ಕೆ ಸಹಾಯವಾಗುತ್ತದೆ. ಈ ಕೂಡಲೇ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿಆಲ್‌ ಇಂಡಿಯ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ ಮುಖಂಢ ಮಾಲತೇಶ, ವಿದ್ಯಾರ್ಥಿ ಮುಖಂಡ ತಿಪ್ಪೇಸ್ವಾಮಿ, ಶಿವಪ್ರತಾಪ್‌, ವಿದ್ಯಾರ್ಥಿಗಳಾದ ಅಕ್ಷಯ, ಮುತ್ತಪ್ಪ ಹುಲಿಗೇಶ, ಗಣೇಶ, ನಯನಾ ಸೇರಿದಂತೆ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ