ಆ್ಯಪ್ನಗರ

ಲಾಕ್‌ಡೌನ್‌ ಅವಧಿಯ ಪರಿಹಾರ ನೀಡಿ

ಹಾವೇರಿ: ಕಾರ್ಮಿಕರಿಗೆ ಲಾಕ್‌ಡೌನ್‌ ವೇಳೆಯ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಿಐಟಿಯು ಜಿಲ್ಲಾಘಟಕದವರು ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು.

Vijaya Karnataka 26 Sep 2020, 5:00 am
ಹಾವೇರಿ: ಕಾರ್ಮಿಕರಿಗೆ ಲಾಕ್‌ಡೌನ್‌ ವೇಳೆಯ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಿಐಟಿಯು ಜಿಲ್ಲಾಘಟಕದವರು ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು.
Vijaya Karnataka Web 24 MANJU 1-_23
ಸಿಐಟಿಯು ಜಿಲ್ಲಾಘಟಕದವರು ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.


ಸಿಐಟಿಯು ಜಿಲ್ಲಾಸಂಚಾಲಕ ವಿನಾಯಕ ಕುರುಬರ ಮಾತನಾಡಿ, ಗುತ್ತಿಗೆ ಕಾರ್ಮಿಕರ ಕೆಲಸದ ಅವಧಿ ಹೆಚ್ಚಳ, 2020-21ನೇ ಸಾಲಿನ ವ್ಯತ್ಯಸ್ಥ ತುಟ್ಟಿಭತ್ಯೆ ಮುಂದೂಡಿಕೆ ಆದೇಶ ರದ್ದು ಮಾಡಿ, ಬಾಕಿ ಸಹಿತ ವಿಡಿಎಯನ್ನು ಕೂಡಲೇ ನೀಡಬೇಕು. ನಿಗದಿತ ಕಾಲಾವಧಿಯ ಕಾರ್ಮಿಕರ ನೇಮಕಕ್ಕೆ ಅನುಮತಿ ನೀಡುವ ಮಾದರಿ ಸ್ಥಾಯಿ ಆದೇಶಗಳಿಗೆ ತಂದಿರುವ ತಿದ್ದುಪಡಿ ಹಿಂಪಡೆಯಬೇಕು. ಲಾಕ್‌ಡೌನ್‌ ಅವಧಿಯ ವೇತನವನ್ನು ಕಾರ್ಮಿಕರಿಗೆ ಪೂರ್ಣ ಪಾವತಿಸಬೇಕು. ಕೋವಿಡ್‌ ಲಾಕ್‌ಡೌನ್‌ ಆರ್ಥಿಕ ಹಿಂಜರಿತ ನೆಪದಲ್ಲಿಕಾರ್ಮಿಕರ ವಜಾ, ವರ್ಗಾವಣೆ, ಒಪ್ಪಂದದಲ್ಲಿನ ವೇತನ ಹೆಚ್ಚಳ ಮುಂದೂಡಿಕೆ ಕ್ರಮಗಳನ್ನು ನಿರ್ಬಂಧಿಸಬೇಕು ಎಂದು ಒತ್ತಾಯಿಸಿದರು.

ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ಅಗತ್ಯ ಸರಕುಗಳ ಕಾಯ್ದೆ, ವಿದ್ಯುತ್‌ ಕಾಯ್ದೆಗಳಿಗೆ ರಾಜ್ಯ ಸರಕಾರವು ತಿದ್ದುಪಡಿ ಸುಗ್ರೀವಾಜ್ಞೆಗಳನ್ನು ತಂದಿದೆ. ರೈತರನ್ನು, ಕೃಷಿ ಕೂಲಿಕಾರರನ್ನು, ಹಮಾಲಿಗಳನ್ನು, ಬಳಕೆದಾರರನ್ನು ಕಾಪೊರ್‍ರೇಟ್‌ ಹಿಡಿತಕ್ಕೆ ಒಪ್ಪಿಸುವ ಈ ಸುಗ್ರೀವಾಜ್ಞೆಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಕೋವಿಡ್‌-19 ಪಿಡುಗಿನ ವಿರುದ್ಧ ವೈದ್ಯರು, ಶುಶ್ರೂಷಕಿಯರು, ಪ್ಯಾರಾ-ಮೆಡಿಕಲ್‌ ಸಿಬ್ಬಂದಿ, ಗ್ರಾ.ಪಂ. ನೌಕರರು, ಪೊಲೀಸ್‌ ಮತ್ತು ಸಾರಿಗೆ ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಮುಂತಾದ ಅನೇಕ ಫ್ರಂಟ್‌ಲೈನ್‌ ಕೆಲಸಗಾರರಿಗೆ ಸಮರ್ಪಕ ಪಿಪಿಇ ಕಿಟ್‌, ಆರೋಗ್ಯ ವಿಮೆ, ಪ್ರೋತ್ಸಾಹ ಧನ, ಉಚಿತ ತಪಾಸಣೆ ಮತ್ತು ಚಿಕಿತ್ಸೆ ಮತ್ತಿತರ ಸೌಲಭ್ಯಗಳನ್ನು ವಿಸ್ತರಿಸಬೇಕು. ಯೋಜನಾ ಕಾರ್ಮಿಕರಿಗೆ ಗೌರವಧನ ಪಾವತಿಸಬೇಕು.

ಶಿಕ್ಷಣ, ಆರೋಗ್ಯ, ರೈಲು, ರಸ್ತೆ, ವಿದ್ಯುತ್‌, ದೂರಸಂಪರ್ಕ, ವಿಮಾ, ಬ್ಯಾಂಕ್‌ ಮುಂತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿಉದ್ಯೋಗ ಖಾತ್ರಿ ಯೋಜನೆಯಡಿ 200 ದಿನಗಳ ಉದ್ಯೋಗ ನೀಡಬೇಕು. ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ನಿರುದ್ಯೋಗ ಭತ್ಯೆ ಮಾಸಿಕ 10,000 ರೂ. ನೀಡಬೇಕು ಎಂದು ಅಗ್ರಹಿಸಿದರು.

ಪ್ರತಿಭಟನೆಯಲ್ಲಿಜಿಲ್ಲಾಮುಖಂಡ ಅಂದಾನೆಪ್ಪ ಹೆಬಸೂರ, ಪರಮೇಶ ಪುರದ, ಕುಮಾರ ದೇವಗಿರಿ, ಈರನಗೌಡ ಪಾಟೀಲ, ಮಾರುತಿ ಬಾವಣ್ಣನವರ, ವೆಂಕಟೇಶ ಎಚ್‌, ಸುಭಾಸಚಂದ್ರ ಹೊಸಗೌಡ್ರ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ