ಆ್ಯಪ್ನಗರ

ರೇಲ್ವೆ ಮೇಲ್ಸೇತುವೆ ಹೋರಾಟ ವಾಪಾಸ್‌

ರಾಣೇಬೆನ್ನೂರ: ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿ ಸಂಸದ ಶಿವಕುಮಾರ ಉದಾಸಿ ಭರವಸೆ ನೀಡಿದ ಹಿನ್ನೆಲೆಯಲ್ಲಿಹೋರಾಟ ಸಮಿತಿ ಸದಸ್ಯರು ನ.4ರಂದು ನಡೆಸಲು ಉದ್ದೇಶಿಸಲಾಗಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.

Vijaya Karnataka 4 Nov 2019, 5:00 am
ರಾಣೇಬೆನ್ನೂರ: ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿ ಸಂಸದ ಶಿವಕುಮಾರ ಉದಾಸಿ ಭರವಸೆ ನೀಡಿದ ಹಿನ್ನೆಲೆಯಲ್ಲಿಹೋರಾಟ ಸಮಿತಿ ಸದಸ್ಯರು ನ.4ರಂದು ನಡೆಸಲು ಉದ್ದೇಶಿಸಲಾಗಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.
Vijaya Karnataka Web railway overpass stopped
ರೇಲ್ವೆ ಮೇಲ್ಸೇತುವೆ ಹೋರಾಟ ವಾಪಾಸ್‌


ರಾಣೇಬೆನ್ನೂರಿನ ದೇವರಗುಡ್ಡ ರಸ್ತೆ ಸೇರಿದಂತೆ ಎಲ್ಲಾಮೂರು ರೇಲ್ವೆ ಗೇಟ್‌ಗಳ ಬಳಿ ಮೇಲ್ಸೇತುವೆ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಹಿನ್ನೆಲೆಯಲ್ಲಿರೇಲ್ವೆ ಅಧಿಕಾರಿಗಳು ಹಾಗೂ ಹೋರಾಟ ಸಮಿತಿ ಸದಸ್ಯರೊಂದಿಗೆ ಸಂಸದರು ಭಾನುವಾರ ಚರ್ಚೆ ನಡೆಸಿ, ಸಮಸ್ಯೆಗೆ ಕಾರಣರಾದ ರೇಲ್ವೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬೇಗನೆ ಎಸ್ಟಿಮೇಟ್‌ ಮಾಡಿ ಮೇಲ್ಸೇತುವೆ ಕಾಮಗಾರಿ ಕೈಗೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.

ನಂತರ ಹೋರಾಟ ಸಮಿತಿ ಸದಸ್ಯರೊಂದಿಗೆ ಮಾತನಾಡಿದ ಸಂಸದರು, ಮೇಲ್ಸೇತುವೆ ನಿರ್ಮಾಣಕ್ಕೆ ಎರಡು ಎಕರೆ ಜಾಗೆ ಬೇಕಾಗುತ್ತದೆ. ಜಿಲ್ಲಾಧಿಕಾರಿಗಳು ಭೂಸ್ವಾಧೀನ ಮಾಡಿಕೊಂಡು ರೇಲ್ವೆ ಇಲಾಖೆಗೆ ಜಾಗೆ ಹಸ್ತಾಂತರಿಸಿದ ನಂತರವೇ ಕಾಮಗಾರಿ ಕೈಗೊಳ್ಳಲು ಸಾಧ್ಯ. ಇದಕ್ಕೆ ಸ್ವಲ್ಪ ಸಮಯ ಬೇಕಾಗುವುದರಿಂದ ಸದ್ಯದ ಮಟ್ಟಿಗೆ ಕೆಳ ಸೇತುವೆ ಬಳಿ ನೀರು ನಿಲ್ಲದಂತೆ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಈಗಿರುವ ಪರ್ಯಾಯ ರಸ್ತೆಯೂ ಸರಿಯಾಗಿಲ್ಲದ ಕಾರಣ ಅದನ್ನು ಕೂಡ ಸರಿಪಡಿಸುವಂತೆ ರೇಲ್ವೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು

ಸಂಸದರ ಭರವಸೆ ಹಿನ್ನೆಲೆಯಲ್ಲಿಹೋರಾಟ ಸಮಿತಿ ಸದಸ್ಯರು ನ.4ರಂದು ನಡೆಸಲು ಉದ್ದೇಶಿಸಲಾಗಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದರು.

ಡಾ.ಬಸವರಾಜ ಕೇಲಗಾರ, ರೇಲ್ವೆ ಮೇಲ್ಸೇತುವೆ ಹೋರಾಟ ಸಮಿತಿ ಅಧ್ಯಕ್ಷ ರವೀಂದ್ರಗೌಡ ಪಾಟೀಲ, ಪ್ರಭುಸ್ವಾಮಿ ಕರ್ಜಗಿಮಠ, ಜಗದೀಶ ಕೆರೂಡಿ, ಉಮೇಶ ಹೊನ್ನಾಳಿ, ಗದಿಗೆಪ್ಪ ಹೊಟ್ಟಿಗೌಡ್ರ, ಎಸ್‌.ಡಿ.ಹಿರೇಮಠ, ಶೇಖಪ್ಪ ನರಸಗೊಂಡರ, ರಾಜಣ್ಣ ಪಾಟೀಲ, ಪ್ರಕಾಶ ಪೂಜಾರ ಮತ್ತಿತರರು ಇದ್ದರು.

ಪತ್ರಿಕೆಯು ನ.3ರ ಸಂಚಿಕೆಯಲ್ಲಿಹೋರಾಟಕ್ಕೆ ಕಾರಣವಾದ ಅವೈಜ್ಞಾನಿಕ ರೇಲ್ವೆ ಸೇತುವೆ ಕುರಿತು ವಿಸ್ತ್ರತ ವರದಿ ಪ್ರಕಟಿಸಿದ್ದನ್ನು ಇಲ್ಲಿಸ್ಮರಿಸಬಹುದಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ