ಆ್ಯಪ್ನಗರ

ಎಲ್ಲ ಮಕ್ಕಳಿಗೂ ಶಿಕ್ಷಣ ಸಿಗಲಿ

ರಾಣೇಬೆನ್ನೂರ :ದೇಶದ ಸರ್ವತೋಮುಖ ಅಭಿವದ್ಧಿ ದಷ್ಟಿಯಿಂದ ಬಡವ, ಶ್ರೀಮಂತ ಎನ್ನದೇ ಸಮಾಜದಲ್ಲಿ ಎಲ್ಲ ಮಕ್ಕಳಿಗೂ ಶಿಕ್ಷಣ ದೊರೆಯುವಂತಾಗಬೇಕು ಎಂದು

ವಿಕ ಸುದ್ದಿಲೋಕ 13 Jun 2016, 5:00 am
ರಾಣೇಬೆನ್ನೂರ :ದೇಶದ ಸರ್ವತೋಮುಖ ಅಭಿವದ್ಧಿ ದಷ್ಟಿಯಿಂದ ಬಡವ, ಶ್ರೀಮಂತ ಎನ್ನದೇ ಸಮಾಜದಲ್ಲಿ ಎಲ್ಲ ಮಕ್ಕಳಿಗೂ ಶಿಕ್ಷಣ ದೊರೆಯುವಂತಾಗಬೇಕು ಎಂದು ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಜಯಕಷ್ಣ ಹೇಳಿದರು.
Vijaya Karnataka Web sigali education for all children
ಎಲ್ಲ ಮಕ್ಕಳಿಗೂ ಶಿಕ್ಷಣ ಸಿಗಲಿ


ನಗರದ ಮಿನಿವಿಧಾನ ಸೌಧದಲ್ಲಿ ಭಾನುವಾರ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾವಾದಿಗಳ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆ, ಸ್ಥಳೀಯ ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.

ಪರಿಸ್ಥಿತಿಯ ಅನಿವಾರ್ಯತೆಗೆ ಸಿಲುಕಿ ಮಕ್ಕಳನ್ನು ಶಾಲೆಗೆ ಕಳುಹಿಸದೇ ಕೆಲಸಕ್ಕೆ ಕಳುಹಿಸಿದ್ದರೆ ಅಂತಹ ತಂದೆ ತಾಯಿಗಳನ್ನು ಮನವೊಲಿಸಿ ಮಕ್ಕಳನ್ನು ಶಾಲೆಗೆ ಕರೆತಂದು ಶಿಕ್ಷಣ ಕೊಡಿಸಲು ಎಲ್ಲರೂ ಪ್ರಯತ್ನಿಸಬೇಕು. ಎಷ್ಟೋ ಮಕ್ಕಳು ಶಾಲೆಯಿಂದ ಹೊರಗೆ ಉಳಿದು ಕೆಲಸ ಮಾಡುತ್ತ ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅಂತಹ ಮಕ್ಕಳಿಗೆ ಯೋಗ್ಯ ಶಿಕ್ಷಣ ನೀಡಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬಾಳುವಂತೆ ಮಾಡುವುದು ಅತ್ಯಗತ್ಯವಾಗಿದೆ. ಶಿಕ್ಷಣ ಪಡೆಯುವುದು ಉದ್ಯೋಗಕ್ಕೆ ಮಾತ್ರ ಸೀಮಿತವಲ್ಲ. ಸಮಾಜದಲ್ಲಿ ಯಾವ ರೀತಿ ಬಾಳಿ ಬದುಕಬೇಕು ಎಂಬುದನ್ನು ಕೂಡ ಅದು ನಮಗೆ ಕಲಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾರದರೂ ಬಾಲ ಕಾರ್ಮಿಕರು ಕಂಡುಬಂದರೆ ಅವರನ್ನು ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು ಎಂದರು.

ತಾಲೂಕು ವಕೀಲರ ಸಂಘದ ಅಧ್ಯಕ್ಷ ಎನ್.ವಿ.ಚಪ್ಪರದ ಅಧ್ಯಕ್ಷತೆ ವಹಿಸಿದ್ದರು.

ತಹಸೀಲ್ದಾರ ರಾಮಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಅಧಿಕಾರಿ ಸುನಂದ ಅಯ್ಯನಗೌಡ್ರ, ಆರ್.ಎಸ್.ಹಿರೇಮಠ, ವಿಕಾರ್ಡ್ ಸಂಸ್ಥೆಯ ಏಕಾಂತ ಮುದಿಗೌಡರ, ನೋಟರಿ ಕುಮಾರ ಮಡಿವಾಳರ, ವಿವಿಧ ಶಾಲೆಗಳ ಮಕ್ಕಳು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ