ಆ್ಯಪ್ನಗರ

ಬೇಡಿಕೆ ಈಡೇರಿಕೆಗೆ ಬೀದಿ ಬದಿ ವ್ಯಾಪಾರಸ್ಥ ಆಗ್ರಹ

ಹಾವೇರಿ : ಬೀದಿ ಬದಿ ವ್ಯಾಪಾರಸ್ಥರ ನಾನಾ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಘಟಕದ ಸದಸ್ಯರು ಗುರುವಾರ ನಗರಸಭೆ ಕಚೇರಿಯಲ್ಲಿ ನಗರಸಭೆ ವ್ಯವಸ್ಥಾಪಕ ಜಿ.ಕೆ.ಜೋಶಿಗೆ ಮನವಿ ಸಲ್ಲಿಸಿದರು.

Vijaya Karnataka 16 Feb 2019, 5:00 am
ಹಾವೇರಿ : ಬೀದಿ ಬದಿ ವ್ಯಾಪಾರಸ್ಥರ ನಾನಾ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಘಟಕದ ಸದಸ್ಯರು ಗುರುವಾರ ನಗರಸಭೆ ಕಚೇರಿಯಲ್ಲಿ ನಗರಸಭೆ ವ್ಯವಸ್ಥಾಪಕ ಜಿ.ಕೆ.ಜೋಶಿಗೆ ಮನವಿ ಸಲ್ಲಿಸಿದರು.
Vijaya Karnataka Web street based business demand to meet demands
ಬೇಡಿಕೆ ಈಡೇರಿಕೆಗೆ ಬೀದಿ ಬದಿ ವ್ಯಾಪಾರಸ್ಥ ಆಗ್ರಹ


ಈ ವೇಳೆ ಮುಖಂಡರು ಮಾತನಾಡಿ, ಸುಮಾರು ವರ್ಷಗಳಿಂದ ನಗರದ ಬೀದಿ ಬದಿ ವ್ಯಾಪಾರ ಮಾಡುತ್ತಾ ಜೀವನ ಸಾಗಿಸುತ್ತಿರುವ ವ್ಯಾಪಾರಿಗಳಿಗೆ ಸರಕಾರದಿಂದ ಸೌಲಭ್ಯಗಳು ಸಿಗದೆ ವಂಚಿತರಾಗಿದ್ದಾರೆ. ಸರಿಯಾಗಿ ವ್ಯಾಪಾರವಿಲ್ಲದೆ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದರು.

ಸರಕಾರದ ದೀನದಯಾಳ್‌ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆ (ಡೇ- ನಲ್ಮ್‌) ಯೋಜನೆಗಳು ಬೀದಿಬದಿ ವ್ಯಾಪಾರಸ್ಥರಿಗೆ ತಲುಪಿಲ್ಲ. ನಗರ ಬೀದಿ ಬದಿ ವ್ಯಾಪಾರಿಗಳಿಗೆ ಬೆಂಬಲ ಉಪ ಘಟಕದಡಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಬೀದಿಬದಿ ವ್ಯಾಪಾರಿಗಳಿಗೆ ಪ್ರಮಾಣ ಪತ್ರ ಹಾಗೂ ಗುರುತಿನ ಚೀಟಿ ವಿತರಿಸಬೇಕು ಎಂದು ಒತ್ತಾಯಿಸಿದರು.

ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಮಾಡಿ ಪಟ್ಟಿ ತಯಾರಿಸಿ, ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ, ಮಹಿಳೆಯರಿಗೆ ಹತ್ತು ಸಾವಿರ ಸಹಾಯಧನ, ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆ, ಜೀವ ವಿಮಾ ಯೋಜನೆ ಇಎಸ್‌ಐ, ವಸತಿ ಆಶ್ರಯಗಳು, ಕುಡಿಯುವ ನೀರು, ಗೋದಾಮು, ಶೌಚಾಲಯ, ವಿದ್ಯುತ್‌, ಟಾರಪಲ್‌, ಗಾಡಿಗಳು ಮತ್ತು ಇತರ ಸೌಲಭ್ಯಗಳನ್ನು ನೀಡುವಂತೆ ಮನವಿಯಲ್ಲಿ ಒತ್ತಾಯಿಸಿದರು.

ಜಿಲ್ಲಾಧ್ಯಕ್ಷೆ ನಾಗರತ್ನಾ ಧಾರವಾಡಕರ, ಉಪಾಧ್ಯಕ್ಷ ಸಂಜೀವಕುಮಾರ ಎಳಕೊಳ್ಳದ, ಕಾರ್ಯದರ್ಶಿ ಪ್ರದೀಪ್‌ಕುಮಾರ, ಮಹೇಶ ಹಂಜಗಿ, ಸಾಧೀಕ ಯಾದವಾಡ, ರಾಜೇಶ್ವರಿ ತಳವಾರ ಸೇರಿದಂತೆ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ