ಆ್ಯಪ್ನಗರ

ಬಿಜೆಪಿ ಕಚೇರಿಯಲ್ಲಿ ನೀರವ ಮೌನ

ರಾಣೇಬೆನ್ನೂರ : ಇದುವರೆಗೂ ಕ್ಷೇತ್ರದ ಶಾಸಕರು ಯಾರಾಗುತ್ತಾರೆ ಎಂಬ ಕುತೂಹಲ ಎಲ್ಲರಲ್ಲಿಯೂ ಮನೆ ಮಾಡಿತ್ತು. ಮಂಗಳವಾರ ನಡೆದ ಮತ ಎಣಿಕೆಯಲ್ಲಿ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ದ ಆರ್‌.ಶಂಕರ್‌ ಶಾಸಕರಾಗಿ ಹೊರಹೊಮ್ಮುವ ಮೂಲಕ ಜನರಿಗೆ ಸ್ಪಷ್ಟ ಉತ್ತರ ಸಿಕ್ಕಿದಂತಾಗಿದೆ.

Vijaya Karnataka 17 May 2018, 5:00 am
ರಾಣೇಬೆನ್ನೂರ : ಇದುವರೆಗೂ ಕ್ಷೇತ್ರದ ಶಾಸಕರು ಯಾರಾಗುತ್ತಾರೆ ಎಂಬ ಕುತೂಹಲ ಎಲ್ಲರಲ್ಲಿಯೂ ಮನೆ ಮಾಡಿತ್ತು. ಮಂಗಳವಾರ ನಡೆದ ಮತ ಎಣಿಕೆಯಲ್ಲಿ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ದ ಆರ್‌.ಶಂಕರ್‌ ಶಾಸಕರಾಗಿ ಹೊರಹೊಮ್ಮುವ ಮೂಲಕ ಜನರಿಗೆ ಸ್ಪಷ್ಟ ಉತ್ತರ ಸಿಕ್ಕಿದಂತಾಗಿದೆ.
Vijaya Karnataka Web the silence in the bjp office
ಬಿಜೆಪಿ ಕಚೇರಿಯಲ್ಲಿ ನೀರವ ಮೌನ


ಆದರೆ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ಯಾವ ಪಕ್ಷ ಸರಕಾರ ರಚಿಸಲಿದೆ ಎಂಬ ವಿಷಯ ಕುರಿತು ಬುಧವಾರ ಕ್ಷೇತ್ರದಲ್ಲಿ ಸಂಚಲನ ಉಂಟಾಗಿದೆ. ಎಲ್ಲಿ ನೋಡಿದರೂ, ಜನರು ಇದೇ ವಿಷಯ ಕುರಿತು ಚರ್ಚೆ ನಡೆಸುತ್ತಿರುವುದು ಕಂಡು ಬಂದಿತು.

ಬಿಜೆಪಿ ಕಚೇರಿಯಲ್ಲಿ ನೀರವ ಮೌನ

ಬಿಜೆಪಿ ಅಭ್ಯರ್ಥಿ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಪಕ್ಷ ದ ಕಚೇರಿಗೆ ಭೇಟಿ ನೀಡಿದಾಗ ಕೆಲವೇ ಕಾರ್ಯಕರ್ತರು ಪರಸ್ಪರ ಚರ್ಚೆಯಲ್ಲಿ ತೊಡಗಿರುವುದು ಕಂಡು ಬಂದಿತು. ಪಕ್ಷ ದ ಕಚೇರಿ ಆವರಣದಲ್ಲಿ ಒಂದು ರೀತಿ ನೀರವ ಮೌನದ ವಾತಾವರಣ ಕಂಡುಬಂದಿತು.

ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ನಿರುತ್ಸಾಹ

ಈ ಬಾರಿಯೂ ತಮ್ಮ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ ಎಂಬ ಭರವಸೆಯಲ್ಲಿದ್ದ ಕಾಂಗ್ರೆಸ್‌ ಪಕ್ಷ ದ ಕಾರ್ಯಕರ್ತರಿಗೆ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಹುತೇಕ ಕಾರ್ಯಕರ್ತರ ಮುಖದಲ್ಲಿ ನಗು ಮಾಯವಾಗಿದ್ದು, ವಿಷಾದದ ಛಾಯೆ ಎದ್ದು ಕಾಣುತ್ತಿದೆ. ಚುನಾವಣೆಯಲ್ಲಿ ಸೋತ ನಂತರ ಮಾಜಿ ಶಾಸಕ ಕೆ.ಬಿ.ಕೋಳಿವಾಡ ಮಂಗಳವಾರ ಮಧ್ಯಾಹ್ನವೇ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.

ಆರ್‌.ಶಂಕರ್‌ಗೆ ಸಚಿವ ಸ್ಥಾನ ಸಾಧ್ಯತೆ?

ಅತಂತ್ರ ವಿಧಾನಸಭೆ ಹಿನ್ನೆಲೆಯಲ್ಲಿ ಕೆಪಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸ್ಥಳೀಯ ಶಾಸಕ ಆರ್‌.ಶಂಕರ್‌ ಅವರಿಗೆ ಭಾರಿ ಬೇಡಿಕೆ ಬಂದಿದೆ. ಈ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿಗೆ ತೆರಳಿರುವ ಅವರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಹುಶಃ ಅವರಿಗೆ ಸಚಿವ ಸ್ಥಾನ ಸಿಕ್ಕರೂ ಅಚ್ಚರಿ ಏನಿಲ್ಲ. ಇದಕ್ಕೆ ಮುನ್ಸೂಚನೆ ಎಂಬಂತೆ ಮಂಗಳವಾರ ಸುಮಾರು ಎರಡು ನೂರಕ್ಕೂ ಅಧಿಕ ಕಾರ್ಯಕರ್ತರು ಬೆಂಗಳೂರಿಗೆ ತೆರಳಿದ್ದು, ಮತ್ತೆ ನೂರು ಜನ ಹೊರಡಲು ಅಣಿಯಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ