ಆ್ಯಪ್ನಗರ

ತಂಬಾಕು ಉತ್ಪನ್ನ ಮಾರಾಟ: ಅಂಗಡಿಗಳ ಮೇಲೆ ದಾಳಿ

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಹಾವೇರಿ ನಗರದ ಆಯ್ದ 22 ಅಂಗಡಿಗಳ ಮೇಲೆ ಸೋಮವಾರ ದಾಳಿ ನಡೆಸಿ 3400 ರೂ. ದಂಡ ವಸೂಲಿ ಮಾಡಿದ್ದಾರೆ.

Vijaya Karnataka 15 Oct 2019, 5:00 am
ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಹಾವೇರಿ ನಗರದ ಆಯ್ದ 22 ಅಂಗಡಿಗಳ ಮೇಲೆ ಸೋಮವಾರ ದಾಳಿ ನಡೆಸಿ 3400 ರೂ. ದಂಡ ವಸೂಲಿ ಮಾಡಿದ್ದಾರೆ.
Vijaya Karnataka Web 14 HAVERI 10_23


ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ನೋಟೀಸ್‌ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿಕಲಂ-4ರಡಿಯಲ್ಲಿ2600 ರೂ. ಹಾಗೂ ಕಲಂ 6ಬಿ ಅಡಿಯಲ್ಲಿ800 ರೂ. ಸೇರಿ 3600 ರೂ. ದಂಡ ವಸೂಲಿ ಮಾಡಲಾಗಿದೆ.

ದಾಳಿಯಲ್ಲಿಜಿಲ್ಲಾತಂಬಾಕು ನಿಯಂತ್ರಣ ಸಲಹೆಗಾರರಾದ ಡಾ. ಸಂತೋಷ ದಡ್ಡಿ, ದಾದಾಪೀರ ಹುಲಿಕಟ್ಟಿ, ನಗರ ಪೊಲೀಸ್‌ ಠಾಣೆಯ ಸಿ.ಬಿ.ಕುಲಕರ್ಣಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಪಿ.ಎನ್‌.ಪಾಟೀಲ, ಮಹೇಶ ಕುಮ್ಮೂರ ಸೇರಿದಂತೆ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ