ಆ್ಯಪ್ನಗರ

ನಾಳೆ 64 ನೇ ಕರ್ನಾಟಕ ರಾಜ್ಯೋತ್ಸವ

ಹಾವೇರಿ: ಜಿಲ್ಲಾಡಳಿತದ ವತಿಯಿಂದ 64 ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ನ.1 ರಂದು ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.

Vijaya Karnataka 31 Oct 2019, 5:00 am
ಹಾವೇರಿ: ಜಿಲ್ಲಾಡಳಿತದ ವತಿಯಿಂದ 64 ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ನ.1 ರಂದು ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.
Vijaya Karnataka Web tomorrow is the 64th karnataka rajyotsava
ನಾಳೆ 64 ನೇ ಕರ್ನಾಟಕ ರಾಜ್ಯೋತ್ಸವ


ಬೆಳಗ್ಗೆ 8 ಗಂಟೆಗೆ ಸಾರ್ವಜನಿಕರು, ಅಧಿಕಾರಿಗಳು, ಶಾಲಾ, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಮತ್ತು ಶಿಕ್ಷಕರು ಮಹಾದೇವ ಮೈಲಾರ ವೃತ್ತಕ್ಕೆ ಬಂದು ಸೇರುವರು. 8.15ಕ್ಕೆ ಹುತಾತ್ಮ ಮೈಲಾರ ಮಹದೇವ ವೃತ್ತದಿಂದ ಮೆರವಣಿಗೆ ಹೊರಡುವುದು ಹಾಗೂ ಬೆಳಗ್ಗೆ 9 ಗಂಟೆಗೆ ಹೊಸಮನಿ ಸಿದ್ದಪ್ಪ ಜಿಲ್ಲಾಕ್ರೀಡಾಂಗಣದಲ್ಲಿಧ್ವಜಾರೋಹಣ ಮತ್ತು ರಾಜ್ಯೋತ್ಸವ ಸಂದೇಶ, 9.30 ಕ್ಕೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಶಾಲಾ ಮಕ್ಕಳು ಮತ್ತು ಸಾರ್ವಜನಿಕ ಸಂಸ್ಥೆಗಳಿಂದ ಸ್ಥಬ್ದ ಚಿತ್ರ ಪ್ರದರ್ಶನ ಮತ್ತು ಮಕ್ಕಳಿಗೆ ಸಿಹಿ ವಿತರಣೆ ಜರುಗಲಿದೆ.

ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರ ಘನ ಉಪಸ್ಥಿತಿಯಲ್ಲಿಗೃಹ ಮತ್ತು ಸಹಕಾರಿ ಖಾತೆ ಸಚಿವರು ಹಾಗೂ ಹಾವೇರಿ ಜಿಲ್ಲಾಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಗೌರವಾನ್ವಿತ ಅತಿಥಿಯಾಗಿ ಭಾಗವಹಿ ಸುವರು. ಶಾಸಕ ನೆಹರು ಓಲೇಕಾರ ಅಧ್ಯಕ್ಷತೆ ವಹಿಸಲಿದ್ದಾರೆ.

ಜಿಲ್ಲಾಧಿಕಾರಿ, ಜಿಲ್ಲಾದಂಡಾಧಿಕಾರಿ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಜಿಲ್ಲಾ ಧ್ಯಕ್ಷ ಕೃಷ್ಣ ಬಾಜಪೇಯಿ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಎಸ್‌.ಕೆ.ಕರಿಯಣ್ಣನವರ, ಸಂಸದ ಶಿವಕುಮಾರ ಉದಾಸಿ, ವಿಧಾನ ಪರಿಷತ್‌ ಶಾಸಕರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಶಾಸಕರಾದ ಸಿ.ಎಂ.ಉದಾಸಿ, ವಿಧಾನ ಪರಿಷತ್‌ ಶಾಸಕರಾದ ಎಸ್‌.ವಿ.ಸಂಕನೂರ, ಪ್ರದೀಪ ಶೆಟ್ಟರ, ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ಜಿ.ಪಂ.ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಹಳ್ಳಿ, ತಾ.ಪಂ.ಅಧ್ಯಕ್ಷ ಕರಿಯಪ್ಪ ಉಂಡಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ ಸಂಗೂರ ಅವರು ಪಾಲ್ಗೊಳ್ಳಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿಸಂಜೆ 6 ಗಂಟೆಗೆ ನಗರದ ಜಿಲ್ಲಾಗುರುಭವನದಲ್ಲಿಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ