ಆ್ಯಪ್ನಗರ

ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ

ತುಮ್ಮಿನಕಟ್ಟಿ : ರಾಣೆಬೆನ್ನೂರು ತಾಲೂಕಿನ ಬಿಲ್ಲಹಳ್ಳಿ ಗ್ರಾಪಂ ವ್ಯಾಪ್ತಿಗೆ ಬರುವ ಹಾರೋಗೊಪ್ಪ ಗ್ರಾಮದಲ್ಲಿ ಗ್ರಾಪಂ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ ಹಾಗೂ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಮಾಡಲಾಯಿತು.

Vijaya Karnataka 30 Mar 2019, 5:00 am
ತುಮ್ಮಿನಕಟ್ಟಿ : ರಾಣೆಬೆನ್ನೂರು ತಾಲೂಕಿನ ಬಿಲ್ಲಹಳ್ಳಿ ಗ್ರಾಪಂ ವ್ಯಾಪ್ತಿಗೆ ಬರುವ ಹಾರೋಗೊಪ್ಪ ಗ್ರಾಮದಲ್ಲಿ ಗ್ರಾಪಂ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ ಹಾಗೂ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಮಾಡಲಾಯಿತು.
Vijaya Karnataka Web voting awareness for students
ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ


ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಿವರಾಜ ಎಸ್‌. ಮಾತನಾಡಿ ಮತದಾನ ಎನ್ನುವುದು ಪ್ರಜಾಪ್ರಭುತ್ವದ ಆಧಾರ ಸ್ಥಂಭ. ಈ ಸ್ಥಂಭ ಗಟ್ಟಿಯಾಗಿರಬೇಕಾದರೆ ಮತದಾನದ ಪ್ರಮಾಣ ಹೆಚ್ಚಾಗಬೇಕಾಗಿದೆ. ಅಂದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯ ಎಂದರು. ಪ್ರಜ್ಞಾವಂತ ಮತದಾರರು ಪ್ರಜಾಪ್ರಭುತ್ವದ ಮೂಲ ಹಕ್ಕಾದ ಮತದಾನದಲ್ಲಿ ಕಡ್ಡಾಯವಾಗಿ ಪಾಲ್ಗೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕಾಗಿದೆ. ನಾವು ಮತದಾನ ಮಾಡುವದಲ್ಲದೇ ನಮ್ಮ ಸುತ್ತಮುತ್ತಲಿನವರು ಮತದಾನ ಮಾಡಿದ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಮತದಾನದಿಂದ ದೂರ ಉಳಿದವರಿಗೆ ಮತದಾನದ ಮಹತ್ವ ಕುರಿತು ತಿಳುವಳಿಕೆ ಮೂಲಕ ಮತದಾನ ಮಾಡುವಂತೆ ಹೇಳಬೇಕು ಎಂದರು. ಪ್ರಾಥಮಿಕ ಶಾಲೆ ಶಿಕ್ಷ ಕರು ಪಾಲಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ