ಆ್ಯಪ್ನಗರ

ಆರಾಧನಾ ಮಹೋತ್ಸವ: ಸಂಭ್ರಮದ ರಥೋತ್ಸವ

ರಟ್ಟೀಹಳ್ಳಿ: ರಟ್ಟೀಹಳ್ಳಿ ಪಟ್ಟಣದ ಕದಂಬೇಶ್ವರ ದೇವಸ್ಥಾನದ ಸಮೀಪದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ 3 ದಿನಗಳ ಕಾಲ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಸಂಭ್ರಮ, ಸಡಗರದಿಂದ ಜರುಗಿತು.

Vijaya Karnataka 19 Aug 2019, 5:00 am
ರಟ್ಟೀಹಳ್ಳಿ: ರಟ್ಟೀಹಳ್ಳಿ ಪಟ್ಟಣದ ಕದಂಬೇಶ್ವರ ದೇವಸ್ಥಾನದ ಸಮೀಪದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ 3 ದಿನಗಳ ಕಾಲ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಸಂಭ್ರಮ, ಸಡಗರದಿಂದ ಜರುಗಿತು.
Vijaya Karnataka Web HVR-18 RATTIHALLI   02


ಶುಕ್ರವಾರದಿಂದ ಆರಂಭವಾದ ಧಾರ್ಮಿಕ ಕಾರ್ಯಕ್ರಮಗಳು ಭಾನುವಾರದವರೆಗೆ ಸಂಭ್ರಮದಿಂದ ಜರುಗಿದವು. ಸಹಸ್ರ ನಾಮ, ರಾಯರ ಅಷ್ಟೋತರ ಪಾರಾಯಣ, ಪಂಚಾವೃತ ಅಭಿಷೇಕ ಮತ್ತಿತರ ಕಾರ್ಯಕ್ರಮಗಳು ಜರುಗಿದ್ದವು. ಭಾನುವಾರ ಮಧ್ಯಾಹ್ನ ರಾಘವೇಂದ್ರ ಸ್ವಾಮಿ ರಥೋತ್ಸವ ಸಹಸ್ರಾರು ಭಕ್ತ ಮಧೆÜ್ಯ ಸಂಭ್ರಮದಿಂದ ಜರುಗಿತು. ಪಟ್ಟಣದ ಪ್ರಮುಖ ಬೀದಿಯಲ್ಲಿ ರಥೋತ್ಸವ ಸಂಚರಿಸಿತು. ರಥೋತ್ಸವಕ್ಕೆ ವಿಶೇಷವಾಗಿ ಹೂವಿನ ಅಲಂಕಾರ ಮಾಡಲಾಗಿತು. ಈ ವೇಳೆ ಸಮಾಜ ಬಾಂದವರು ಸೇರಿದಂತೆ ವಿವಿಧ ಗ್ರಾಮದ ಭಕ್ತರು ಭಾಗವಹಿಸಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ