ಆ್ಯಪ್ನಗರ

ಒಂದೇ ತಿಂಗಳಲ್ಲಿ ಗುತ್ತಿಗೆ ವೈದ್ಯರನ್ನು ಖಾಯಂ ಮಾಡಲು ಆದೇಶ, ಶ್ರೀರಾಮುಲು

ಒಂದು ತಿಂಗಳ ಅವಧಿಯಲ್ಲಿ ಗುತ್ತಿಗೆ ವೈದ್ಯರನ್ನು ಖಾಯಂ ಮಾಡಲಾಗುವುದು ಎಂದು ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ. ಈ ಕುರತಾಗಿ ಬುಧವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು

Vijaya Karnataka Web 8 Jul 2020, 2:59 pm
ಬೆಂಗಳೂರು: ಒಂದೇ ತಿಂಗಳಲ್ಲಿ ರಾಜ್ಯದಲ್ಲಿರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ವೈದ್ಯರನ್ನು ಖಾಯಂ ಮಾಡಲು ಆದೇಶ ಹೊರಡಿಸುತ್ತೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು ಕೊಟ್ಟ ಭರವಸೆಯನ್ನು ಬದಲಾಯಿಸುವುದಿಲ್ಲ ಎಂದರು.
Vijaya Karnataka Web sriramulu


ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದ ಗುತ್ತಿಗೆ ವೈದ್ಯರೊಂದಿಗೆ ಮಾತುಕತೆ ನಡೆಸಿದ ಸಚಿವ ಶ್ರೀರಾಮುಲು, ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿಮ್ಮೊಂದಿಗಿದೆ. ಯಾವುದೇ ಕಾರಣಕ್ಕೂ ಕೊಟ್ಟ ಭರವಸೆಯನ್ನು ಈಡೇರಿಸದೆ ಇರುವುದಿಲ್ಲ ಎಂದರು.

ಕೊರೊನಾ ಎಫೆಕ್ಟ್‌: ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ

ಗುತ್ತಿಗೆ ವೈದ್ಯರನ್ನು ಖಾಯಂ ಮಾಡಬೇಕು ಎಂಬ ಬೇಡಿಕೆ ಬಹಳ ವರ್ಷಗಳಿಂದ ಇದೆ. 2017 ರಿಂದ ಖಾಯಂ ಮಾಡುವ ನಿಟ್ಟಿನಲ್ಲಿ ಯಾವುದೇ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ. ಈ ನಿಟ್ಟಿನಲ್ಲಿ ವೈದ್ಯರು ಪ್ರತಿಭಟನೆ ನಡೆಸಿದ್ದಾರೆ.

ವೈದ್ಯರ ಬೇಡಿಕೆಗೆ ಸ್ಪಂದಿಸಿದ ಸಚಿವರು,ಮಂಗಳವಾರ ನಡೆದ ಸಭೆಯಲ್ಲಿ ಗುತ್ತಿಗೆ ವೈದ್ಯರನ್ನು ಖಾಯಂ ಮಾಡಲು ತೀರ್ಮಾನ ಮಾಡಿದ್ದೇವೆ. ಈ ಕುರಿತಾಗಿ ಕೆಲವು ಬದಲಾವಣೆ ಮಾಡಬೇಕಾಗಿದೆ. ಕಷ್ಟ ಕಾಲದಲ್ಲಿ ಜನರ ಸೇವೆ ಮಾಡಿದ 507 ಮಂದಿ ಗುತ್ತಿಗೆ ವೈದ್ಯರನ್ನ ಒಂದು ತಿಂಗಳಿನಲ್ಲಿ ಖಾಯಂ ಮಾಡಲಾಗುವುದು. ಈ ಕುರಿತು ಗುರುವಾರ ಆದೇಶ ಹೊರಡಿಸುತ್ತೇನೆ ಎಂದು ಸಚಿವ ಶ್ರೀರಾಮುಲು ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ