ಆ್ಯಪ್ನಗರ

ಹೈದರಾಬಾದ್: ಭಾಗ್ಯಲಕ್ಷ್ಮೀ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದ ಅಮಿತ್ ಶಾ!

ಹೈದರಾಬಾದ್ ಮಹಾನಗರ ಪಾಲಿಕೆ(GHMC) ಚುನಾವಣೆ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಪರ ಪ್ರಚಾರ ಅಭಿಯಾನ ಆರಂಭಿಸಿದ್ದಾರೆ. ಹೈದರಾಬಾದ್‌ಗೆ ಆಗಮಿಸುತ್ತಿದ್ದಂತೇ ಅಮಿತ್ ಶಾ ಚಾರ್‌ಮಿನಾರ್ ಪಕ್ಕದಲ್ಲೇ ಇರುವ ಪ್ರಸಿದ್ಧ ಭಾಗ್ಯಲಕ್ಮೀ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದru.

Vijaya Karnataka Web 29 Nov 2020, 6:12 pm
ಹೈದರಾಬಾದ್: ಹೈದರಾಬಾದ್ ಮಹಾನಗರ ಪಾಲಿಕೆ(GHMC) ಚುನಾವಣೆ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಪರ ಪ್ರಚಾರ ಅಭಿಯಾನ ಆರಂಭಿಸಿದ್ದಾರೆ.

ಹೈದರಾಬಾದ್‌ಗೆ ಆಗಮಿಸುತ್ತಿದ್ದಂತೇ ಚಾರ್‌ಮಿನಾರ್ ಪಕ್ಕದಲ್ಲೇ ಇರುವ ಪ್ರಸಿದ್ಧ ಭಾಗ್ಯಲಕ್ಮೀ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಅಮಿತ್ ಶಾ, ಪ್ರಚಾರಕ್ಕೂ ಮೊದಲು ದೇವಿಯ ಆಶೀರ್ವಾದ ಪಡೆದರು.

ಇದಕ್ಕೂ ಮೊದಲು ಬೇಗಂಪೇಟ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾ ಅವರಿಗೆ ಭರ್ಜರಿ ಸ್ವಾಗತ ಕೋರಿದ ಬಿಜೆಪಿ ಕಾರ್ಯಕರ್ತರು, ಮೆರವಣಿಗೆ ಮೂಲಕ ಅಮಿತ್ ಶಾ ಅವರನ್ನು ಭಾಗ್ಯಲಕ್ಷ್ಮೀ ದೇವಸ್ಥಾನಕ್ಕೆ ಕರೆತಂದರು.

ಹೈದರಾಬಾದ್ ಪಾಲಿಕೆ ಚುನಾವಣೆ: ಅಮಿತ್ ಶಾ ಬರುವ ಮುನ್ನ ಬಿಜೆಪಿಗೆ ಕೆಸಿಆರ್ ಟಾಂಗ್!

ಬಳಿಕ ಸಿಕಂದರಾಬಾದ್‌ನ ವಾರಸಿಗುಡಾದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಅಮಿತ್ ಶಾ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದರು.



ಈ ವೇಳೆ ಮಾತನಾಡಿದ ಅಮಿತ್ ಶಾ, ರಾಜ್ಯದ ಆಡಳಿತಾರೂಢ ಟಿಆರ್‌ಎಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಹೈದರಾಬಾದ್ ಸೇರಿದಂತೆ ಸಂಪೂರ್ಣ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿದೆ ಎಂದು ಹರಿಹಾಯ್ದರು.

ಇದೇ ವೇಳೆ ಎಐಎಂಐಎಂ ಪಕ್ಷವನ್ನೂ ತರಾಟೆಗೆ ತೆಗೆದುಕೊಂಡ ಅಮಿತ್ ಶಾ, ಒವೈಸಿ ಸಹೋದರರು ಧರ್ಮದ ರಾಜಕಾರಣ ಮಾಡುವುದನ್ನು ಬಿಟ್ಟರೆ ನಗರದ ಜನತೆಗೆ ಬೇರೆನೂ ಕೊಡುಗೆ ನೀಡಿಲ್ಲ ಎಂದು ಕಿಡಿಕಾರಿದರು.

ಹೈದರಾಬಾದ್ ಭಾಗ್ಯನಗರವಾಗಲಿದೆ ಎಂದ ಯೋಗಿ: ಅಸಾದುದ್ದೀನ್ ಒವೈಸಿ ಪ್ರತಿಕ್ರಿಯೆ ಏನಿತ್ತು!

ಈಗಾಗಲೇ GHMC ಚುನಾವಣಾ ಪ್ರಚಾರದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ. ಇದೀಗ ಅಮಿತ್ ಶಾ ಕೂಡ ಆಗಮಿಸಿರುವುದರಿಂದ GHMC ಚುನಾವಣಾ ಪ್ರಚಾರ ರಂಗೇರಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ