ಆ್ಯಪ್ನಗರ

GHMC ಮತ ಎಣಿಕೆ: ಟಿಆರ್‌ಎಸ್‌ಗೆ ಮುನ್ನಡೆ, 2ನೇ ಸ್ಥಾನಕ್ಕೆ ಬಿಜೆಪಿ-ಎಐಎಂಐಎಂ ನಡುವೆ ಪೈಪೋಟಿ!

GHMC ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ​ಸದ್ಯದ ಅಂಕಿ ಅಂಶಗಳ ಪ್ರಕಾರ ಆಡಳಿತಾರೂಢ ಟಿಆರ್‌ಎಸ್ 60 ಸ್ಥಾನಗಳಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ​ಬಿಜೆಪಿ ಸದ್ಯ 40 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಅದರಂತೆ ಎಐಎಂಐಎಂ 45 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

Vijaya Karnataka Web 4 Dec 2020, 4:15 pm
ಹೈದರಾಬಾದ್: ಇಡೀ ರಾಷ್ಟ್ರದ ಗಮನ ಸೆಳೆದಿದ್ದ ಹೈದರಬಾದ್ ಮಹಾನಗರ ಪಾಲಿಕೆ(GHMC) ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗಿದೆ.
Vijaya Karnataka Web KCR
ಸಂಗ್ರಹ ಚಿತ್ರ


ಮತ ಎಣಿಕೆ ಆರಂಭವಾಗುತ್ತಿದ್ದಂತೇ ಭರ್ಜರಿ ಮುನ್ನಡೆ ಸಾಧಿಸಿ ಅಚ್ಚರಿ ಮೂಡಿಸಿದ್ದ ಬಿಜೆಪಿ, ಇದೀಗ ಎರಡನೇ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸುತ್ತಿರುವುದು ಗಮನಾರ್ಹ.

ಸದ್ಯದ ಅಂಕಿ ಅಂಶಗಳ ಪ್ರಕಾರ ಆಡಳಿತಾರೂಢ ಟಿಆರ್‌ಎಸ್ 60 ಸ್ಥಾನಗಳಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಹಾಗೂ ಅಸಾದುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ ಪಕ್ಷ ಎರಡನೇ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸುತ್ತಿವೆ.

ಹೈದರಾಬಾದ್ ಪಾಲಿಕೆ ಚುನಾವಣೆ: ಬಿಜೆಪಿಗೆ ಹಿನ್ನಡೆ.. ಟಿಆರ್‌ಎಸ್‌‌, ಎಐಎಂಐಎಂ ಮುನ್ನಡೆ..!

ಬಿಜೆಪಿ ಸದ್ಯ 40 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಎಐಎಂಐಎಂ 45 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಕೇವಲ ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಸದ್ಯ ಟಿಆರ್‌ಎಸ್ 11 ಸ್ಥಾನಗಳನ್ನು ಜಯಿಸಿದ್ದು, ಎಐಎಂಐಎಂ 10 ಸ್ಥಾನಗಳಲ್ಲಿ ಜಯ ದಾಖಲಿಸಿದೆ. ಬಿಜೆಪಿ ಕೇವಲ ಒಂದು ಕ್ಷೇತ್ರವನ್ನು ಜಯಿಸಿದ್ದು, ಕಾಂಗ್ರೆಸ್ ಇದುವರೆಗೂ ಜಯದ ರುಚಿ ಉಂಡಿಲ್ಲ.


ಇನ್ನು ಟಿಆರ್‌ಎಸ್ ಮುನ್ನಡೆ ಸಾಧಿಸುತ್ತಿದ್ದಂತೇ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಪುತ್ರಿ ಹಾಗೂ ಟಿಆರ್‌ಎಸ್ ನಾಯಕಿ ಕೆ. ಕವಿತಾ, ಮುಂದಿನ 2-3ಗಂಟೆಗಳಲ್ಲಿ ಸ್ಪಷ್ಟ ಚಿತ್ರಣ ಹೊರಹೊಮ್ಮಲಿದೆ. ಟಿಆರ್‌ಎಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್‌ನಲ್ಲೂ ಅರಳಿದ ಕಮಲ..! ಪಾಲಿಕೆ ಚುನಾವಣೆಯಲ್ಲಿ ಆರಂಭಿಕ ಮುನ್ನಡೆ..

ಅಲ್ಲದೇ ಬಿಜೆಪಿ ಮತ್ತಷ್ಟು ಹಿಂದಕ್ಕೆ ತಳ್ಳಲ್ಪಡಲಿದ್ದು, ಹೈದರಾಬಾದ್ ಜನರನ್ನು ವಿಭಜಿಸಲು ಬಂದಿದ್ದ ಬಿಜೆಪಿಗೆ ತಕ್ಕ ಶಾಸ್ತಿ ಆಗಲಿದೆ ಎಂದು ಕವಿತಾ ಭವಿಷ್ಯ ನುಡಿದಿದ್ದಾರೆ.

ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದ್ದು, ತೀವ್ರ ಜಿದ್ದಾಜಿದ್ದಿನ ಹೈದರಾಬಾದ್ ಪಾಲಿಕೆ ಚುನಾವಣೆಯಲ್ಲಿ ಯಾರ ಕೈ ಮೇಲಾಗಲಿದೆ ಕಾದು ನೋಡಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ