Please enable javascript.ಆಸಿಡ್ ಮಾರಾಟ ನಿಯಂತ್ರಣ: ಕೇಂದ್ರಕ್ಕೆ ಆದೇಶ - ಆಸಿಡ್ ಮಾರಾಟ ನಿಯಂತ್ರಣ: ಕೇಂದ್ರಕ್ಕೆ ಆದೇಶ - Vijay Karnataka

ಆಸಿಡ್ ಮಾರಾಟ ನಿಯಂತ್ರಣ: ಕೇಂದ್ರಕ್ಕೆ ಆದೇಶ

ಏಜೆನ್ಸೀಸ್ 2 Jul 2012, 9:58 pm
Subscribe

ಆಸಿಡ್ ದುರುಪಯೋಗ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಗಳು ಕೈಗೊಂಡಿರುವ ನಿಯಂತ್ರಣ ಕ್ರಮಗಳ ಬಗ್ಗೆ ವಿವರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಸೋಮವಾರ ನಿರ್ದೇಶನ ನೀಡಿದೆ.

ಆಸಿಡ್ ಮಾರಾಟ ನಿಯಂತ್ರಣ: ಕೇಂದ್ರಕ್ಕೆ ಆದೇಶ
ಹೊಸದಿಲ್ಲಿ: ಆಸಿಡ್ ದುರುಪಯೋಗ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಗಳು ಕೈಗೊಂಡಿರುವ ನಿಯಂತ್ರಣ ಕ್ರಮಗಳ ಬಗ್ಗೆ ವಿವರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಸೋಮವಾರ ನಿರ್ದೇಶನ ನೀಡಿದೆ.

ಮಹಿಳೆಯರ ಮೇಲೆ ದಾಳಿ ನಡೆಸಲು ಆಸಿಡ್ ಅಸ್ತ್ರವಾಗಿ ಪರಿಣಮಿಸಿದೆ. ಇದು ಅಪರಾಧಿಗಳ ಕೈಗೆ ಸುಲಭವಾಗಿ ಲಭ್ಯವಾಗದಂತೆ ನಿಯಂತ್ರಣ, ನೊಂದವರ ವೈದ್ಯೋಪಚಾರ, ಪುನರ್ವಸತಿಗಾಗಿ ಕೈಗೊಂಡಿರುವ ಕ್ರಮಗಳ ಕುರಿತು ವಿಸ್ತಾರವಾದ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಕೋರ್ಟ್ ಗೃಹ ಸಚಿವಾಲಯವನ್ನು ಕೋರಿದೆ.

ಈ ಸಂಬಂಧ 2011ರ ಫೆಬ್ರವರಿ 11ರಂದು ರಾಜ್ಯ ಸರಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಲಾಗಿದೆ. ರಾಜ್ಯ ಸರಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೂಕ್ತ ಯೋಜನೆ ರೂಪಿಸುವಂತೆ ಕಳೆದ ಏಪ್ರಿಲ್ 29ರಂದು ಗೃಹ ಸಚಿವಾಲಯಕ್ಕೆ ಕೋರ್ಟ್ ನಿರ್ದೇಶನ ನೀಡಲಾಗಿತ್ತು. ಈ ನಿರ್ದೇಶನದನ್ವಯ ರೂಪಿಸಿರುವ ಯೋಜನೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

2006ರಲ್ಲಿ ಬಾಲಕಿಯೊಬ್ಬಳ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಬಳಿಕ ಕೋರ್ಟ್ ಕೇಂದ್ರಕ್ಕೆ ಈ ನಿರ್ದೇಶನ ನೀಡಿದೆ.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ