ಆ್ಯಪ್ನಗರ

ಭೂಕುಸಿತಕ್ಕೆ 10 ಮಂದಿ ಬಲಿ

ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆಗೆ ಮಿಜೋರಾಂನ ಲುಂಗ್ಲೇಯಿ ಪಟ್ಟಣದಲ್ಲಿ ಭೂಕುಸಿತ ಸಂಭವಿಸಿ 10 ಮಂದಿ ಮೃತಪಟ್ಟಿದ್ದಾರೆ.

Vijaya Karnataka 6 Jun 2018, 9:50 am
ಐಜ್ವಾಲ್‌: ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆಗೆ ಮಿಜೋರಾಂನ ಲುಂಗ್ಲೇಯಿ ಪಟ್ಟಣದಲ್ಲಿ ಭೂಕುಸಿತ ಸಂಭವಿಸಿ 10 ಮಂದಿ ಮೃತಪಟ್ಟಿದ್ದಾರೆ. ಭೂಕುಸಿತದಿಂದ ಸೋಮವಾರ ರಾತ್ರಿ ಕಟ್ಟಡ ಧರೆಗುರುಳಿದ್ದು, ಆರು ಮಹಿಳೆಯರೂ ಸೇರಿದಂತೆ 10 ಜನ ಮೃತಪಟ್ಟಿದ್ದಾರೆ.
Vijaya Karnataka Web Landslide


''ಶಿಥಿಲಾವಸ್ಥೆಯಲ್ಲಿದ್ದ ಎರಡು ಮಹಡಿಯ ಕಟ್ಟಡ ಇದಾಗಿತ್ತು. ನೆಲ ಮಹಡಿಯಲ್ಲಿ ವಾಸವಿದ್ದ ಒಂದೇ ಕುಟುಂಬದ ಏಳು ಹಾಗೂ ಮೊದಲ ಮಹಡಿಯಲ್ಲಿ ವಾಸವಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆ ನಡೆದಾಗ 14 ಜನ ಕಟ್ಟಡದಲ್ಲಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲುಂಗ್ಲೇಯಿ ಜಿಲ್ಲಾ ವಿಕೋಪ ಪರಿಹಾರ ತಂಡ ಹಾಗೂ ಸ್ವಯಂ ಕಾರ‍್ಯಕರ್ತರು ಸ್ಥಳಕ್ಕೆ ಧಾವಿಸಿ ಕಟ್ಟಡ ತೆರವು ಕಾರ್ಯಾಚರಣೆ ಕೈಗೊಂಡರು,'' ಎಂದು ಪೊಲೀಸರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ