ಆ್ಯಪ್ನಗರ

ದಶಕಗಳ ವಿವಾದಕ್ಕೆ ವಿ'ರಾಮ' ಹಾಕಿದ 1045 ಪುಟಗಳ ತೀರ್ಪು

ಅಯೋಧ್ಯೆಯ ರಾಮ ಜನ್ಮಭೂಮಿ ವಿವಾದಕ್ಕೆ ದಶಕಗಳ ಇತಿಹಾಸವಿದೆ. ಇಂಥ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ನ್ಯಾಯಪೀಠ 1045 ಪುಟಗಳಲ್ಲಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ.

Vijaya Karnataka Web 9 Nov 2019, 1:29 pm
ಹೊಸದಿಲ್ಲಿ: ಅಯೋಧ್ಯೆ ಭೂ ವಿವಾದಕ್ಕೆ ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠ ಕೊನೆಗೂ ವಿರಾಮ ಹಾಕಿದೆ.
Vijaya Karnataka Web ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌


ದಶಕಗಳ ವಿವಾದದ ಕುರಿತು ಸುದೀರ್ಘ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್‌ ಪಂಚ ನ್ಯಾಯಪೀಠ ಹಲವಾರು ವಿಷಯಗಳ ಮೇಲೆ ಗಮನ ಹರಿಸಿತು.

ಅಕ್ಟೋಬರ್‌ ಎರಡನೇ ವಾರದಲ್ಲಿಯೇ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ್ದ ಸುಪ್ರೀಂ ಕೋರ್ಟ್‌ ನ್ಯಾಯಪೀಠ, ತೀರ್ಪು ಕಾಯ್ದಿರಿಸಿತ್ತು.

ನವೆಂಬರ್‌ 9 ಅಂದರೆ ಶನಿವಾರ ಬೆಳಗ್ಗೆ 10.30ಕ್ಕೆ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ತೀರ್ಪು ಓದಲು ಶುರು ಮಾಡಿದರು.

ಐತಿಹಾಸಿಕ ತೀರ್ಪು ಕೆಲವು ಐತಿಹಾಸಿಕ ಅಂಶಗಳನ್ನು ಒಳಗೊಂಡಿತ್ತು. ಈ ತೀರ್ಪು ಆದೇಶದ ಪ್ರತಿ ಒಟ್ಟು 1045 ಪುಟಗಳನ್ನು ಒಳಗೊಂಡಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯಮಂತ್ರಿ ರಂಜನ್‌ ಗೊಗೊಯಿ, ನ್ಯಾಯಮೂರ್ತಿಗಳಾದ ಶರದ್ ಅರವಿಂದ್ ಬೋಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌, ಅಬ್ದುಲ್‌ ನಜೀರ್‌ ಅವರು ಸರ್ವಾನುಮತದಿಂದ ಈ ತೀರ್ಪು ನೀಡಿರುವುದು ಮತ್ತೊಂದು ವಿಶೇಷ.

ಈ ತೀರ್ಪು ಪ್ರಕಟವಾಗುತ್ತದೆ ಎಂದು ಮಾಹಿತಿ ಹೊರಬೀಳುತ್ತಿದ್ದಂತೆ ದೇಶಾದ್ಯಂತ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಯಿತು. ಬಹುತೇಕ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಯಿತು. ಮುನ್ನೆಚ್ಚರಿಕೆ ಕ್ರಮಗಳನ್ನು ಎಲ್ಲ ರಾಜ್ಯಗಳಲ್ಲೂ ತೆಗೆದುಕೊಳ್ಳಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ