ಆ್ಯಪ್ನಗರ

26/11 ಟೆರರ್‌ ಅಟ್ಯಾಕ್‌: ಮುಂಬಯಿ ಉಗ್ರ ದಾಳಿ ಎಂಬ ಕರಾಳ ದಿನಕ್ಕೆ 12 ವರ್ಷ!

​ಜೀವಂತವಾಗಿ ಸೆರೆಸಿಕ್ಕ ಉಗ್ರ ಅಜ್ಮಲ್‌ ಕಸನ್‌ಗೆ ಮುಂಬೈನ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತು. ನ್ಯಾಯಾಮೂರ್ತಿ ಎಂ.ಎಲ್‌. ತಹಲ್ಯಾನಿ ಶಿಕ್ಷೆ ವಿಧಿಸಿದ್ದರು. ನಂತರ ಕಸಬ್‌ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಳ್ಳಿ ಹಾಕಿದ್ದ ಸುಪ್ರೀಂ ಕೋರ್ಟ್‌ ಮುಂಬೈ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯಿತು. ಕಸಬ್‌ನನ್ನು 2012ರ ನವೆಂಬರ್‌ನಲ್ಲಿ ಗಲ್ಲಿಗೇರಿಸಲಾಯಿತು.​​

Vijaya Karnataka Web 26 Nov 2020, 7:01 am
ಮುಂಬಯಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 2008ರ ನವೆಂಬರ್‌ 26ರ ಮುಂಬಯಿ ಉಗ್ರ ದಾಳಿಗೆ ಗುರುವಾರ 12 ವರ್ಷವಾಗಲಿದ್ದು, ಅಸುನೀಗಿದವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ‍್ಯಕ್ರಮವನ್ನು ಪೊಲೀಸ್‌ ಇಲಾಖೆ ಆಯೋಜಿಸಿದೆ. ಪಾಕ್‌ ಮೂಲದ ಲಷ್ಕರೆ ತಯ್ಬಾ ಸಂಘಟನೆಯ 10 ಉಗ್ರರು ಮುಂಬಯಿನ ಹಲವು ಕಡೆ ಸರಣಿ ದಾಳಿ ನಡೆಸಿ 166 ಜನರ ಮಾರಣಹೋಮ ನಡೆಸಿದ್ದರು.
Vijaya Karnataka Web mumbai terror attack


ದಕ್ಷಿಣ ಮುಂಬಯಿಯಲ್ಲಿ ನಿರ್ಮಿಸಲಾಗಿರುವ ಪೊಲೀಸ್‌ ಇಲಾಖೆಯ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಶ್ರದ್ಧಾಂಜಲಿ ಕಾರ‍್ಯಕ್ರಮದಲ್ಲಿ ಹುತಾತ್ಮ ಪೊಲೀಸರು ಹಾಗೂ ಯೋಧರ ಕುಟುಂಬ ಸದಸ್ಯರು ಭಾಗಿಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ, ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಸೇರಿ ಹಲವು ಗಣ್ಯರಿಂದ ಗೌರವ ಸಮರ್ಪಣೆ ನಡೆಯಲಿದೆ.

ದಾಳಿಗೆ ಸಾಕ್ಷಿಯಾದ ತಾಜ್ ಹೋಟೆಲ್!
2008ರ ನ. 26ರಂದು ಮುಂಬೈನ ತಾಜ್ ಹೋಟೆಲ್, ಛತ್ರಪತಿ ಶಿವಾಜಿ ಟರ್ಮಿನಲ್‌, ನಾರಿಮನ್‌ ಹೌಸ್‌ ಸೇರಿದಂತೆ ಆರು ಕಡೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಸಮುದ್ರ ಮಾರ್ಗವಾಗಿ ಮುಂಬೈಗೆ ನುಸುಳಿದ್ದ 10 ಮಂದಿ ಉಗ್ರರ ತಂಡ ಈ ಕೃತ್ಯ ಎಸಗಿತ್ತು. ಭದ್ರತಾ ಪಡೆಯ ಯೋಧರು ಉಗ್ರ ಅಜ್ಮಲ್‌ ಕಸಬ್‌ನನ್ನು ಜೀವಂತವಾಗಿ ಸೆರೆಹಿಡಿದಿದ್ದರು.ಉಗ್ರರ ಈ ದಾಳಿಯಲ್ಲಿ ಸ್ಥಳೀಯರು, ವಿದೇಶಿ ಪ್ರವಾಸಿಗರು ಹಾಗೂ ಭದ್ರತಾ ಪಡೆಯ ಯೋಧರು ಸೇರಿದಂತೆ 166 ಜನರು ಮೃತಪಟ್ಟಿದ್ದರು. ಘಟನೆಯಲ್ಲಿ ಸುಮಾರು 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ನೂತನ ಸಂಸತ್‌ ಭವನಕ್ಕೆ ಡಿಸೆಂಬರ್‌ 2ನೇ ವಾರದಲ್ಲಿ ಶಂಕುಸ್ಥಾಪನೆ!

ಕಸಬ್‌ಗೆ ಗಲ್ಲು!
ಜೀವಂತವಾಗಿ ಸೆರೆಸಿಕ್ಕ ಉಗ್ರ ಅಜ್ಮಲ್‌ ಕಸನ್‌ಗೆ ಮುಂಬೈನ ವಿಶೇಷ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತು. ನ್ಯಾಯಾಮೂರ್ತಿ ಎಂ.ಎಲ್‌. ತಹಲ್ಯಾನಿ ಶಿಕ್ಷೆ ವಿಧಿಸಿದ್ದರು. ನಂತರ ಕಸಬ್‌ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ತಳ್ಳಿ ಹಾಕಿದ್ದ ಸುಪ್ರೀಂ ಕೋರ್ಟ್‌ ಮುಂಬೈ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯಿತು. ಕಸಬ್‌ನನ್ನು 2012ರ ನವೆಂಬರ್‌ನಲ್ಲಿ ಗಲ್ಲಿಗೇರಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ