ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದೆ. ಸಂಪುಟ ಸೇರಿದ 23 ಸಚಿವರ ಪೈಕಿ 17 ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಪ್ರಥಮ ಬಾರಿ ವಿಧಾನಸಭೆ ಪ್ರವೇಶಿಸಿದ ಆರು ಶಾಸಕರಿಗೂ ಸಚಿವ ಸ್ಥಾನದ ಗೌರವ ದಕ್ಕಿದೆ. 2013ರ ಚುನಾವಣೆಯಲ್ಲಿ ಮೋದಿ ಅಲೆ ನಡುವೆಯೂ ಗೆದ್ದು, ಈ ಸಲ ಮರು ಆಯ್ಕೆಯಾಗಿರುವ ಶಾಸಕರಿಗೂ ಸಚಿವ ಸ್ಥಾನ ನೀಡಲಾಗಿದೆ. ಮಿತ್ರಪಕ್ಷ ರಾಷ್ಟ್ರೀಯ ಲೋಕದಳದ ಒಬ್ಬ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗಿದೆ. 13 ಸಂಪುಟ ದರ್ಜೆ ಮತ್ತು 10 ಮಂದಿ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಬೆಂಬಲಿಗರಿಗೆ ಸಮಾನ ಆದ್ಯತೆ ನೀಡಲಾಗಿದೆ.
ಗೆಹ್ಲೋಟ್ ಸಂಪುಟ ವಿಸ್ತರಣೆ: 17 ಮಂದಿ ಹೊಸಬರಿಗೆ ಮಣೆ
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದೆ ಸಂಪುಟ ಸೇರಿದ 23 ಸಚಿವರ ಪೈಕಿ 17 ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ...
87654322 25 Dec 2018, 5:00 am