ಆ್ಯಪ್ನಗರ

ಭಾರತದಲ್ಲಿ 2.71 ಲಕ್ಷ ಹೊಸ ಕೋವಿಡ್ ಪ್ರಕರಣ ದಾಖಲು: ಚೇತರಿಕೆ ದರದಲ್ಲಿ ಮತ್ತಷ್ಟು ಕುಸಿತ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,71,202 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. 314 ಸೋಂಕಿತರು ವೈರಸ್‌ಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ. ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 7,743ಕ್ಕೆ ತಲುಪಿದೆ.

Vijaya Karnataka Web 16 Jan 2022, 11:04 am

ಹೈಲೈಟ್ಸ್‌:

  • ಭಾರತದಲ್ಲಿ 2.71 ಲಕ್ಷ ಕೊರೊನಾ ವೈರಸ್ ಪ್ರಕರಣಗಳು ದಾಖಲು
  • ಒಟ್ಟು ಸೋಂಕಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ 4.18ಕ್ಕೆ ಏರಿಕೆ
  • ದೈನಂದಿನ ಪಾಸಿಟಿವಿಟಿ ದರ 16,28%, ವಾರದ ಪಾಸಿಟಿವಿಟಿ 13.69%
  • ಕರ್ನಾಟಕದಲ್ಲಿ ಒಂದೇ ದಿನ 32 ಸಾವಿರಕ್ಕೂ ಅಧಿಕ ಕೋವಿಡ್ ಪ್ರಕರಣ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Covid-19
ಹೊಸದಿಲ್ಲಿ: ಭಾರತದಲ್ಲಿ ದೈನಂದಿನ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗಿದೆ. ಪಾಸಿಟಿವಿಟಿ ದರದಲ್ಲಿ ಕೊಂಚ ಕಡಿಮೆ ಇರುವುದು ಸಮಾಧಾನಕರ ಸಂಗತಿ. ಕಳೆದ 24 ಗಂಟೆಗಳಲ್ಲಿ 2,71,202 ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯದ ವರದಿ ಪ್ರಕಾರ ಭಾನುವಾರ 15,50,377 ಸಕ್ರಿಯ ಪ್ರಕರಣಗಳಿವೆ.
ಕಳೆದ 24 ಗಂಟೆಗಳಲ್ಲಿ 1,38,331 ಸೋಂಕಿತರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ಇದರಿಂದ ಒಟ್ಟು ಚೇತರಿಕೆ ಸಂಖ್ಯೆ 3,50,85,721ಕ್ಕೆ ತಲುಪಿದೆ. ಚೇತರಿಕೆ ಪ್ರಮಾಣದಲ್ಲಿ ಮತ್ತಷ್ಟು ಕುಸಿತ ಉಂಟಾಗಿದ್ದು, ಶೇ 94.51ಕ್ಕೆ ಇಳಿಕೆಯಾಗಿದೆ. ಇದರಿಂದ ಒಟ್ಟು ಸೋಂಕಿತರಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ 4.18ಕ್ಕೆ ಮುಟ್ಟಿದೆ. ದೇಶದಲ್ಲಿ ದೈನಂದಿನ ಪ್ರಕರಣಗಳ ಪ್ರಮಾಣ ಶೇ 16.28ಕ್ಕೆ ಮುಟ್ಟಿದೆ. ವಾರದ ಪಾಸಿಟಿವಿಟಿ ದರ ಶೇ 13.69ಕ್ಕೆ ಏರಿಕೆ ಕಂಡಿದೆ. ಇದುವರೆಗೂ 70.24 ಕೋಟಿ ಕೋವಿಡ್ ಪರೀಕ್ಷೆಗಳನ್ನು ನಡೆಸಿದ್ದು, ಕಳೆದ 24 ಗಂಟೆಗಳಲ್ಲಿ 16,65,404 ಪರೀಕ್ಷೆ ನಡೆಸಲಾಗಿದೆ.
ಕರ್ನಾಟಕದಲ್ಲಿ ಸಂಕ್ರಾಂತಿ ದಿನವೇ ಕೊರೊನಾ ಕೇಕೆ: 32,793 ಕೇಸ್‌
ದೇಶದಲ್ಲಿ ಶನಿವಾರ 314 ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಮರಣ ಸಂಖ್ಯೆ 4,86,066ಕ್ಕೆ ತಲುಪಿದೆ. ದೇಶಾದ್ಯಂತ ಇದುವರೆಗೂ 158 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಶನಿವಾರ 66 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ.

ಈವರೆಗೂ 7,743 ಓಮಿಕ್ರಾನ್ ತಳಿ ಪ್ರಕರಣಗಳು ವರದಿಯಾಗಿವೆ. ಶನಿವಾರದಿಂದ ಶೇ 28.17ರಷ್ಟು ಹೆಚ್ಚಳ ಕಂಡಿದೆ. ಮಹಾರಾಷ್ಟ್ರದಲ್ಲಿ 125 ಹೊಸ ಓಮಿಕ್ರಾನ್ ಪ್ರಕರಣ ದಾಖಲಾಗಿವೆ. ರಾಜ್ಯದಲ್ಲಿ ಒಂದೇ ದಿನ 42,462 ಕೋವಿಡ್ ಕೇಸ್‌ಗಳು ವರದಿಯಾಗಿವೆ. 23 ಸೋಂಕಿತರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿನ ಒಟ್ಟು ಸಾವಿನ ಸಂಖ್ಯೆ 1,41,779ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ 50,674, ಕರ್ನಾಟಕದಲ್ಲಿ 38,418, ತಮಿಳುನಾಡಿನಲ್ಲಿ 36,967, ದಿಲ್ಲಿಯಲ್ಲಿ 25,335, ಉತ್ತರ ಪ್ರದೇಶದಲ್ಲಿ 22,953 ಹಾಗೂ ಪಶ್ಚಿಮ ಬಂಗಾಳದಲ್ಲಿ 20,052 ಮಂದಿ ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ ಶನಿವಾರ 32,793 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 31,86,040ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 1,69,850ಕ್ಕೆ ತಲುಪಿದೆ. ಬೆಂಗಳೂರಿನಲ್ಲಿಯೇ ಪಾಸಿಟಿವ್ ಪ್ರಕರಣಗಳ ಸಂಖ್ಯೆ 22,284 ದಾಖಲಾಗಿದೆ. 4,273 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ