ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ಗೆ ಮೂವರು ಉಗ್ರರು ಬಲಿಯಾಗಿದ್ದಾರೆ. ಹಪತ್ನಾರ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತ ಗುಪ್ತಚರ ಮಾಹಿತಿ ಆಧರಿಸಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಆರಂಭಿಸಿತು. ಈ ವೇಳೆ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಭಾರಿ ಗುಂಡಿನ ಚಕಮಕಿ ನಡೆಯಿತು. ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಮೃತ ಉಗ್ರರ ಗುರುತು ಬಹಿರಂಗವಾಗಿಲ್ಲ. ಎನ್ಕೌಂಟರ್ ಬೆನ್ನಲ್ಲೇ ಬುಡ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಯ ಕೆಲವು ಭಾಗಗಳಲ್ಲಿ ಸ್ಥಳೀಯರಿಂದ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟದ ಘಟನೆ ವರದಿಯಾಗಿದೆ.
ಎನ್ಕೌಂಟರ್ಗೆ ಮೂವರು ಉಗ್ರರು ಬಲಿ
ಹಪತ್ನಾರ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತ ಗುಪ್ತಚರ ಮಾಹಿತಿ ಆಧರಿಸಿ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಆರಂಭಿಸಿತು.
Vijaya Karnataka 22 Jan 2019, 5:00 am