ಆ್ಯಪ್ನಗರ

ದುಬೆ ಎನ್‌ಕೌಂಟರ್ ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ, ತಪ್ಪಿತಸ್ಥರ ಶಿಕ್ಷೆಗೆ ಆಗ್ರಹ!

ವಿಕಾಸ್‌ ದುಬೆ ಎನ್‌ಕೌಂಟರ್‌ ಅಥವಾ ಹತ್ಯೆಗೆ ಸಂಬಂಧಿಸಿದಂತೆ ಕೂಲಂಕುಶ ತನಿಖೆಗೆ ನಡೆಸುವಂತೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಸಿಬಿಐನಿಂದ ತನಿಖೆ ನಡೆಸುವಂತೆ ಪತ್ರದಲ್ಲಿ ಆಗ್ರಹಿಸಿದ್ದಾರೆ.

Vijaya Karnataka Web 10 Jul 2020, 10:03 am
ನವದೆಹಲಿ: ಬೆಳ್ಳಂಬೆಳಗ್ಗೆ ಇಡೀ ದೇಶವನ್ನೇ ಆಶ್ಚರ್ಯವಾಗುವಂತಹ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಳೆದ ಏಳು ದಿನಗಳಿಂದ ಭಾರೀ ಸುದ್ದಿಯಲ್ಲಿದ್ದ ರೌಡಿ, ಪಾತಕಿ ವಿಕಾಸ್‌ ದುಬೆ ಯುಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಆದರೆ ಈ ಬಗ್ಗೆ ಪರ ಹಾಗೂ ವಿರೋಧಗಳು ಕೂಡ ಕೇಳಿ ಬರುತ್ತಿದೆ.
Vijaya Karnataka Web EcdbmzXU0AALms_


ಕೆಲವರು ಆತನ ವಿಚಾರಣೆಯಿಂದ ಅನೇಕ ವಿಚಾರಗಳು ಬಯಲಾಗುತ್ತಿದ್ದವು ಎನ್ನುವ ಮಾತುಗಳನ್ನ ಕೂಡ ಆಡುತ್ತಿದ್ದಾರೆ. ಈ ಮಧ್ಯೆ ಈ ಬಗ್ಗೆ ಕೂಲಂಕುಶ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ವಿಕಾಸ್‌ ದುಬೆ ಎನ್‌ಕೌಂಟರ್‌ ಅಥವಾ ಹತ್ಯೆಗೆ ಸಂಬಂಧಿಸಿದಂತೆ ಕೂಲಂಕುಶ ತನಿಖೆಗೆ ನಡೆಸುವಂತೆ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಅಲ್ಲದೇ ಈ ತನಿಖೆ ಸುಪ್ರೀಂಕೋರ್ಟ್‌ನ ನಿಗಾದಲ್ಲಿ ಸಿಬಿಐನಿಂದ ನಡೆಯಬೇಕು ಎಂದು ಅರ್ಜಿಯಲ್ಲಿ ಕೇಳಿಕೊಂಡಿದ್ದಾರೆ. ಅಲ್ಲದೇ ಪೊಲೀಸರು ಇದರಲ್ಲಿ ಶಾಮೀಲಾಗಿದ್ದರೆ, ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆಯೂ ಆಗ್ರಹಿಸಿದ್ದಾರೆ. ಜು.10ರ ಮುಂಜಾನೆ ವಿಕಾಸ್‌ ದುಬೆಯನ್ನ ಮಧ್ಯಪ್ರದೇಶದಿಂದ ಉತ್ತರ ಪ್ರದೇಶಕ್ಕೆ ಕರೆತರುವ ವೇಳೆ ಬೆಂಗಾವಲು ವಾಹನ ಪಲ್ಟಿಯಾಗಿದೆ.

ಹೇಗೆ ? ಯಾಕೆ ನಡೀತು ರೌಡಿ ದುಬೆಯ ಎನ್‌ಕೌಂಟರ್‌? ಕಾರು ಪಲ್ಟಿ, ಪೊಲೀಸರ ಮೇಲೆ ಗುಂಡಿನ ದಾಳಿಯ ಇಂಟ್ರೆಸ್ಟಿಂಗ್‌ ಕಹಾನಿ!
ಈ ವೇಳೆ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಲು ವಿಕಾಸ್‌ ದುಬೆ ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಆತ ಸಾವನಪ್ಪಿದ್ದಾನೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ