ಆ್ಯಪ್ನಗರ

ಸೇನೆ ಬಳಿಕ ದೇಶ ರಕ್ಷಣೆ ಮಾಡುತ್ತಿರುವುದು RSS: ನಿವೃತ್ತ ಸುಪ್ರೀಂ ನ್ಯಾಯಮೂರ್ತಿ

ಭಾರತೀಯ ಸೈನಿಕರ ಬಳಿಕ ಪ್ರಜೆಗಳ ರಕ್ಷಣೆಗೆ ಮುಂದಾಗುವುದು ಕೇವಲ ರಾಷ್ಟ್ರೀಯ ಸ್ವಯಂ ಸೇವಕರ ಸಂಘ ಮಾತ್ರಾ ಎಂದು ನಿವೃತ್ತ ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಕೆ.ಟಿ ಥೋಮಸ್‌ ಹೇಳಿರುವುದಾಗಿ ಬಿಜೆಪಿ ನಾಯಕ ಸಂಬಿತ್‌ ಪಾತ್ರಾ ಟ್ವೀಟ್‌ ಮಾಡಿದ್ದಾರೆ.

TNN 4 Jan 2018, 7:10 pm
ಹೊಸದಿಲ್ಲಿ: ಭಾರತೀಯ ಸೈನಿಕರ ಬಳಿಕ ಪ್ರಜೆಗಳ ರಕ್ಷಣೆಗೆ ಮುಂದಾಗುವುದು ಕೇವಲ ರಾಷ್ಟ್ರೀಯ ಸ್ವಯಂ ಸೇವಕರ ಸಂಘ ಮಾತ್ರ ಎಂದು ನಿವೃತ್ತ ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ಕೆ.ಟಿ ಥೋಮಸ್‌ ಹೇಳಿರುವುದಾಗಿ ಬಿಜೆಪಿ ನಾಯಕ ಸಂಬಿತ್‌ ಪಾತ್ರಾ ಟ್ವೀಟ್‌ ಮಾಡಿದ್ದಾರೆ.
Vijaya Karnataka Web after army rss keeps indians safe says former sc judge
ಸೇನೆ ಬಳಿಕ ದೇಶ ರಕ್ಷಣೆ ಮಾಡುತ್ತಿರುವುದು RSS: ನಿವೃತ್ತ ಸುಪ್ರೀಂ ನ್ಯಾಯಮೂರ್ತಿ




ನಿವೃತ್ತ ನ್ಯಾಯಾಧೀಶ ಥೋಮಸ್‌ ಕೇರಳದ ಕೊಟ್ಟಾಯಂನಲ್ಲಿ ನಡೆಯುತ್ತಿರುವ ಆರ್‌ಎಸ್‌ಎಸ್‌ ಟ್ರೈನಿಂಗ್‌ ಕ್ಯಾಂಪ್‌ನಲ್ಲಿ ಮಾತನಾಡಿದ್ದಾರೆ ಎಂದು ಟ್ವೀಟ್‌ನಲ್ಲಿ ತಿಳಿಸಿರುವ ಸಂಬಿತ್‌ ಪಾತ್ರಾ, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ದೇಶವನ್ನು ಪಾರುಮಾಡಲು ಆರ್‌ಎಸ್‌ಎಸ್‌ ಕೊಡುಗೆ ಅಪಾರ ಎಂದು ಥೋಮಸ್‌ ಹೇಳಿದ್ದಾರೆ.

ಭಾರತೀಯ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಸೇನೆ ಬಳಿಕ ಆರ್‌ಎಸ್‌ಎಸ್‌ ಭಾರತೀಯರನ್ನು ಕಾಪಾಡುತ್ತಿದೆ ಎಂದು 2007ರಲ್ಲಿ ಪದ್ಮ ಭೂಷಣ್‌ ಪ್ರಶಸ್ತಿಗೆ ಭಾಜನರಾಗಿರುವ ಥೋಮಸ್‌ ಹೇಳಿದ್ದಾರೆ.

1996ರಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ನೇಮಕಗೊಂಡ ಥೋಮಸ್‌, ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆಕೋರರಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ