ಆ್ಯಪ್ನಗರ

ರಾಹುಲ್ ವಿರುದ್ಧದ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ..! ಅಚ್ಚರಿ ಮೂಡಿಸಿದ ಕಪಿಲ್ ಸಿಬಲ್..!

ಕಾಂಗ್ರೆಸ್‌ನ ಹಿರಿಯ ನಾಯಕರು ಬಿಜೆಪಿ ಜೊತೆ ಸೇರಿಕೊಂಡು ಕಾಂಗ್ರೆಸ್‌ ನಾಯಕತ್ವದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ ಎಂದು ಹೇಳಿದ್ದಾರೆನ್ನಲಾದ ಆರೋಪಕ್ಕೆ ಖಡಕ್ ಆಗಿ ಟ್ವೀಟ್ ಮಾಡಿದ್ದ ಸಿಬಲ್ , ಇದೀಗ ತಾನು ಟ್ವೀಟ್ ಮಾಡಿದ್ದ ಹೇಳಿಕೆಯನ್ನು ವಾಪಾಸ್ ಪಡೆಯುತ್ತೇನೆ’ ಎಂದು ತಿಳಿಸಿದ್ದಾರೆ.

Vijaya Karnataka Web 24 Aug 2020, 2:27 pm
ಹೊಸದಿಲ್ಲಿ: ಎಐಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಕಾರ್ಯಕಾರಿಣಿ ಸಭೆ ನಡೆಸುತ್ತಿದ್ದು, ಹಿರಿಯರು ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದಾರೆ.
Vijaya Karnataka Web Kapil sibala


ರಾಹುಲ್ ಆರೋಪ ಸಾಬೀತಾದರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಗುಲಾಂ ನಬಿ

ಕೊರೊನಾ ಕಾರಣದಿಂದ ಆನ್‌ಲೈನ್‌ ಮೀಟಿಂಗ್ ನಡೆಯುತ್ತಿದ್ದು, ದೇಶದ ಬೇರೆ ಬೇರೆ ಭಾಗಗಳಿಂದ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಸಭೆಯಲ್ಲಿ ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್‌ನ ಕೆಲವು ಮುಖಂಡರು ಬರೆದಿರುವ ಪತ್ರವನ್ನು ಓದುತ್ತಿದ್ದಂತೆ ಕೆಂಡಾಮಂಡಲರಾದ ರಾಹುಲ್ ಗಾಂಧಿ, ಕಪಿಲ್ ಸಿಬಲ್, ಶಶಿ ತರೂರ್ ಸೇರಿದಂತೆ ಕೆಲವು ನಾಯಕರು ಬಿಜೆಪಿ ಜೊತೆ ಸೇರಿಕೊಂಡು ಕಾಂಗ್ರೆಸ್‌ ನಾಯಕತ್ವದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.

ರಾಹುಲ್ ಆರೋಪ ಸಾಬೀತಾದರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಗುಲಾಂ ನಬಿ ಆಜಾದ್!

ಈ ವಿಚಾರ ಸುದ್ದಿಯಾಗ್ತಿದ್ದಂತೆ ಸಿಡಿದೆದ್ದ ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಟ್ವೀಟ್ ಮೂಲಕ ರಾಹುಲ್ ಗಾಂಧಿಗೆ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದರು. ಆದರೆ ನಂತರ ರಾಹುಲ್ ಗಾಂಧಿಯವರು ಕಪಿಲ್ ಸಿಬಲ್ ಜೊತೆ ಮಾತನಾಡಿದ್ದು, ನಂತರ ತಮ್ಮ ಟ್ವೀಟ್‌ನ್ನು ಹಿಂಪಡೆಯುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಮತ್ತೊಂದು ಟ್ವೀಟ್ ಮಾಡಿರುವ ಕಪಿಲ್ ಸಿಬಲ್, ‘ರಾಹುಲ್ ಗಾಂಧಿಯವರು ನನ್ನ ಜೊತೆ ವೈಯಕ್ತಿಕವಾಗಿ ಮಾತನಾಡಿದರು. ಈ ವೇಳೆ ಅವರು ತಾನು ಆ ರೀತಿಯ ಆರೋಪ ಮಾಡೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ತಾನು ಟ್ವೀಟ್ ಮಾಡಿದ್ದ ಹೇಳಿಕೆಯನ್ನು ವಾಪಾಸ್ ಪಡೆಯುತ್ತೇನೆ’ ಎಂದು ತಿಳಿಸಿದ್ದಾರೆ. ಅಲ್ಲದೇ ತಾವು ಈ ಮೊದಲು ಮಾಡಿದ್ದ ಟ್ವೀಟ್‌ನ್ನು ಡಿಲೀಟ್ ಮಾಡಿದ್ದಾರೆ.

'ರಾಹುಲ್‌ ಗಾಂಧಿ ಈ ರೀತಿಯಾಗಿ ಹೇಳಿಲ್ಲ, ತಪ್ಪು ಮಾಹಿತಿ ನೀಡಬೇಡಿ': ಸಿಬಲ್‌ಗೆ ಸುರ್ಜೇವಾಲ ಮನವಿ!

ಕಾಂಗ್ರೆಸ್‌ನ ಹಿರಿಯ ನಾಯಕರು ಬಿಜೆಪಿ ಜೊತೆ ಸೇರಿಕೊಂಡು ಕಾಂಗ್ರೆಸ್‌ ನಾಯಕತ್ವದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ ಎಂದು ಹೇಳಿದ್ದಾರೆನ್ನಲಾದ ಆರೋಪಕ್ಕೆ ಖಡಕ್ ಆಗಿ ಟ್ವೀಟ್ ಮಾಡಿದ್ದ ಸಿಬಲ್, ‘ನಾವು ಬಿಜೆಪಿ ಜೊತೆ ಸೇರಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ರಾಜಸ್ಥಾನದ ಹೈಕೋರ್ಟ್‌ನಲ್ಲಿ ಪಕ್ಷವನ್ನು ಸಮರ್ಥಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಮಣಿಪುರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಪಕ್ಷದ ಪರ ಸಮರ್ಥಿಸಿಕೊಂಡಿದ್ದೇನೆ. ಕಳೆದ ಮೂವತ್ತು ವರ್ಷಗಳಲ್ಲಿ ಒಂದೇ ಒಂದು ಸಲವೂ ಬಿಜೆಪಿ ಪರ ಹೇಳಿಕೆ ಕೊಟ್ಟಿಲ್ಲ. ಹೀಗಿದ್ದರೂ ನಾವು ಬಿಜೆಪಿ ಪರ ಕೈ ಜೋಡಿಸಿದ್ದೇವಾ’ ಎಂದು ಪ್ರಶ್ನಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ