ಆ್ಯಪ್ನಗರ

ಬಿಗಡಾಯಿಸಿದ ಜೇಟ್ಲಿ ಆರೋಗ್ಯ; ಏಮ್ಸ್‌ಗೆ ಭೇಟಿ ನೀಡಿದ ರಾಷ್ಟ್ರಪತಿ ಕೋವಿಂದ್, ಅಮಿತ್ ಶಾ

ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೇಟ್ಲಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತಿಲ್ಲ.

Times Now 17 Aug 2019, 8:00 am
ಹೊಸದಿಲ್ಲಿ: ಕಳೆದ ಎಂಟು ದಿನಗಳಿಂದ ಹೊಸದಿಲ್ಲಿಯ ಏಮ್ಸ್‌ (ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ)ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಹಣಕಾಸು ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿಲ್ಲ ಎಂದು ಹೇಳಲಾಗುತ್ತಿದೆ.
Vijaya Karnataka Web Jaitly


ಶುಕ್ರವಾರ ಮಧ್ಯಾಹ್ನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಜೇಟ್ಲಿ ಆರೋಗ್ಯ ವಿಚಾರಿಸಿದ್ದರು ಆ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಕೂಡ ಅವರೊಂದಿಗಿದ್ದರು.

ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಶುಕ್ರವಾರ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಜೇಟ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಬಳಿ ಆರೋಗ್ಯ ಸ್ಥಿತಿ ಬಗ್ಗೆ ತಿಳಿದುಕೊಂಡರು.

ಮೂಲಗಳ ಪ್ರಕಾರ ಜೇಟ್ಲಿ ಅವರ ಶ್ವಾಸಕೋಶದಲ್ಲಿ ನೀರು ತುಂಬಿದ್ದು , ಈ ಕಾರಣದಿಂದ ಅವರಿಗೆ ಉಸಿರಾಡಲು ಸಮಸ್ಯೆಯಾಗುತ್ತಿದೆ. ಶ್ವಾಸಕೋಶದಿಂದ ನೀರನ್ನು ಹೊರತೆಗೆಯಲಾಗುತ್ತಿದ್ದರೂ, ಮರಳಿ ತುಂಬಿಕೊಳ್ಳುತ್ತಿದೆ. ಹೀಗಾಗಿ ಅವರ ಸ್ಥಿತಿ ಚಿಂತಾಜನಕವಾಗಿದೆ. ಅವರು Soft tissue sarcoma (ಒಂದು ರೀತಿಯ ಕ್ಯಾನ್ಸರ್) ದಿಂದ ಬಳಲುತ್ತಿದ್ದಾರೆ ಎಂದು ವೈದ್ಯಮೂಲಗಳು ತಿಳಿಸಿವೆ.

ಜೇಟ್ಲಿ ಬಹಳ ವರ್ಷಗಳಿಂದ ಮಧುಮೇಹ ಪೀಡಿತರಾಗಿದ್ದು, ಅವರಿಗೆ ಕಿಡ್ನಿ ಕಸಿಯನ್ನು ಸಹ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಅವರಿಗೆ ಸಾಫ್ಟ್ ಟಿಸ್ಯೂ ಕ್ಯಾನ್ಸರ್ ಇದೆ ಎಂಬುದು ಪತ್ತೆಯಾಗಿತ್ತು. ಸ್ಥೂಲಕಾಯದಿಂದ ಮುಕ್ತಿ ಪಡೆಯಲು ಅವರು ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೂ ಸಹ ಒಳಗಾಗಿದ್ದರು.

66 ವರ್ಷದ ಹಿರಿಯ ನಾಯಕ ಮೋದಿ ಸರಕಾರದ ಮೊದಲ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದರು. ಆದರೆ ಅನಾರೋಗ್ಯದ ಕಾರಣದಿಂದ ಈ ಬಾರಿ ಲೋಕಸಭಾ ಚುನಾವಣೆಯನ್ನೆದುರಿಸಿರಲಿಲ್ಲ. ಬಿಜೆಪಿ ಭಾರಿ ಬಹುಮತದಿಂದ ಗೆದ್ದ ಬಳಿಕ ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಬೇಡಿ ಎಂದು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ವಿನಂತಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ