ಆ್ಯಪ್ನಗರ

ಅಮಿತ್‌ ಶಾ ಕ್ಷಮೆ ಯಾಚಿಸು ಎಂದರೆ, 'ಜೆಪಿಸಿ' ರಚನೆಯಾಗಲಿ ಎಂದ ರಾಹುಲ್‌ ಗಾಂಧಿ

ರಫೇಲ್ ಪ್ರಕರಣ ಕುರಿತ ಸುಪ್ರೀಂ ಕೋರ್ಟ್‌ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮತ್ತು ಅದರ ನಾಯಕರು ಇನ್ನಾದರೂ ದೇಶದ ಜನತೆಗೆ ಕ್ಷಮೆ ಯಾಚಿಸಬೇಕು ಎಂದು ಅಮಿತ್‌ ಶಾ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರಾಹುಲ್‌ ಗಾಂಧಿ ಪ್ರಕರಣದ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚನೆಯಾಗಲಿ ಎಂದು ಬೇಡಿಕೆ ಇಟ್ಟಿದ್ದಾರೆ.

Vijaya Karnataka Web 14 Nov 2019, 6:49 pm
ಹೊಸದಿಲ್ಲಿ: ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖ್ಯಸ್ಥ ಅಮಿತ್‌ ಶಾ ಅವರು ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ದುರುದ್ದೇಶಪೂರಿತ ಹಾಗೂ ಆಧಾರರಹಿತ ವದಂತಿ ಹಬ್ಬಿಸುತ್ತಿದ್ದವರಿಗೆ ಸುಪ್ರೀಂ ಕೋರ್ಟ್‌ ತಕ್ಕ ಪಾಠ ಕಲಿಸಿದೆ. ರಾಷ್ಟ್ರೀಯ ಹಿತಾಸಕ್ತಿಗೆ ಮೀರಿದ ರಾಜಕೀಯ ಮಾಡುವ
ಕಾಂಗ್ರೆಸ್‌ ಮತ್ತು ಅದರ ನಾಯಕರು ಇನ್ನಾದರೂ ದೇಶದ ಜನತೆಗೆ ಕ್ಷಮೆ ಯಾಚಿಸಬೇಕು ಎಂದು ಟ್ವೀಟ್‌ ಮಾಡಿದ್ದಾರೆ.



ರಫೇಲ್ ತೀರ್ಪು ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್: ರಾಹುಲ್‌ ಗಾಂಧಿಗೆ ತರಾಟೆ

ರಾಹುಲ್‌ ಗಾಂಧಿ ಕೂಡ ಇದಕ್ಕೆ ಪ್ರತಿಕ್ರಿಯಿಸಿದ್ದು, ಸುಪ್ರೀಂ ಕೋರ್ಟ್‌ ತೀರ್ಪಿನಲ್ಲಿ ನ್ಯಾಯಮೂರ್ತಿ ಕೆ.ಎಂ. ಜೋಸೆಫ್‌ ಅವರು ಪ್ರಕರಣದ ಪೂರ್ಣ ತನಿಖೆಗೆ ಬೃಹತ್‌ ದ್ವಾರವನ್ನೇ ತೆರೆದಿದ್ದಾರೆ. ಈ ಪ್ರಕರಣದ ಉನ್ನತ ತನಿಖೆಗೆ 'ಜಂಟಿ ಸಂಸದೀಯ ಸಮಿತಿ' (ಜಾಯಿಂಟ್‌ ಪಾರ್ಲಿಮೆಂಟರಿ ಕಮಿಟಿ- ಜೆಪಿಸಿ) ರಚಿಸಬೇಕು ಎಂದು ಬೇಡಿಕೆ ಇಟ್ಟು ಟ್ವೀಟ್‌ ಮಾಡಿದ್ದಾರೆ.



ರಫೇಲ್‌ ಪ್ರಕರಣದ ತೀರ್ಪಿನ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್‌, ಚೌಕೀದಾರ್‌ ಚೋರ್‌ ಹೈ'' ಘೋಷಣೆ ಮಾಡಿದ್ದ ರಾಹುಲ್‌ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ರಾಹುಲ್‌ ಗಾಂಧಿ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ರದ್ದುಗೊಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ