ಆ್ಯಪ್ನಗರ

ಈಶಾನ್ಯ ರಾಜ್ಯಗಳ ರಾಜ್ಯಪಾಲರು, ಸಿಎಂಗಳ ಜತೆ ಅಮಿತ್‌ ಶಾ ಚರ್ಚೆ

ಈಶಾನ್ಯ ಮಂಡಳಿ ಸಭೆ ಆ.3, 4ರಂದು ಅಸ್ಸಾಂನ ಗುವಾಹಟಿಯಲ್ಲಿ ನಡೆಯಲಿದೆ.

PTI 19 Jul 2019, 5:00 am
ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಆಗಸ್ಟ್‌ ಮೊದಲ ವಾರದಲ್ಲಿ ಈಶಾನ್ಯ ಭಾರತ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಿದ್ದಾರೆ. ಈಶಾನ್ಯ ಮಂಡಳಿ ಸಭೆ ಆ.3, 4ರಂದು ಅಸ್ಸಾಂನ ಗುವಾಹಟಿಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ರಾಜ್ಯಪಾಲರು, ಸಿಎಂಗಳ ಜತೆ ಅಭಿವೃದ್ಧಿ ಯೋಜನೆಗಳು ಮತ್ತು ಭದ್ರತೆ ಕುರಿತಂತೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಗೃಹ ಸಚಿವಾಲಯ ಗುರುವಾರ ತಿಳಿಸಿದೆ. ಕಳೆದ ವರ್ಷದ ಜುಲೈನಲ್ಲಿ ಪುನರ್‌ ರೂಪಿಸಲಾಗಿರುವ ಮಂಡಳಿಗೆ ಕೇಂದ್ರ ಗೃಹ ಸಚಿವರು ಅಧ್ಯಕ್ಷರಾಗಿದ್ದು, ಈಶಾನ್ಯ ವಲಯ ಅಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಮಂಡಳಿಯ ನಿಧಿಯಿಂದ ಈಗಾಗಲೇ 10,911 ಕಿ.ಮೀ ರಸ್ತೆ ನಿರ್ಮಿಸಲಾಗಿದ್ದು, ಆಯಾ ರಾಜ್ಯಗಳ ಸುಪರ್ದಿಗೆ ಹಸ್ತಾಂತರಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ