ಆ್ಯಪ್ನಗರ

ಪ್ರಧಾನಿ ಮೋದಿ ಭೇಟಿ ಮಾಡಿದ ಜಗನ್‌, ಪ್ರಮಾಣವಚನ ಸ್ವೀಕಾರಕ್ಕೆ ಆಮಂತ್ರಣ

ದಿಲ್ಲಿಯಲ್ಲಿ ನೂತನ ಸರಕಾರ ರಚನೆಯಾದ ಬಳಿಕ ಆದಷ್ಟು ಬೇಗನೆ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬಗ್ಗೆ ಪರಿಶೀಲಿಸುವಂತೆ ಪ್ರಧಾನಿಗೆ ಜಗನ್‌ ಮನವಿ ಮಾಡಿದರು. ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಗಳಿಸಿದ ಪ್ರಚಂಡ ಗೆಲುವಿಗಾಗಿ ಪ್ರಧಾನಿ ಮೋದಿ ಅವರನ್ನು ಜಗನ್‌ ಅಭಿನಂದಿಸಿದರು. ಆಂಧ್ರದಲ್ಲಿ ಭರ್ಜರಿ ಜಯಗಳಿಸಿದ ಜಗನ್‌ ಅವರಿಗೆ ಪ್ರಧಾನಿ ಮೋದಿ ಅವರೂ ಅಭಿನಂದನೆ ಸಲ್ಲಿಸಿದರು.

TNN 26 May 2019, 2:46 pm
ಅಮರಾವತಿ: ವೈಎಸ್ಸಾರ್‌ ಕಾಂಗ್ರೆಸ್ ವರಿಷ್ಠ ಹಾಗೂ ಆಂಧ್ರಪ್ರದೇಶದ ನಿಯೋಜಿತ ಮುಖ್ಯಮಂತ್ರಿ ವೈ.ಎಸ್ ಜಗನ್‌ಮೋಹನ್ ರೆಡ್ಡಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮೇ 30ರಂದು ವಿಜಯವಾಡದಲ್ಲಿ ನಡೆಯುವ ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನಿಸಿದರು.
Vijaya Karnataka Web Jagan Meets PM Modi


ದಿಲ್ಲಿಯಲ್ಲಿ ನೂತನ ಸರಕಾರ ರಚನೆಯಾದ ಬಳಿಕ ಆದಷ್ಟು ಬೇಗನೆ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬಗ್ಗೆ ಪರಿಶೀಲಿಸುವಂತೆ ಪ್ರಧಾನಿಗೆ ಜಗನ್‌ ಮನವಿ ಮಾಡಿದರು.

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಗಳಿಸಿದ ಪ್ರಚಂಡ ಗೆಲುವಿಗಾಗಿ ಪ್ರಧಾನಿ ಮೋದಿ ಅವರನ್ನು ಜಗನ್‌ ಅಭಿನಂದಿಸಿದರು. ಆಂಧ್ರದಲ್ಲಿ ಭರ್ಜರಿ ಜಯಗಳಿಸಿದ ಜಗನ್‌ ಅವರಿಗೆ ಪ್ರಧಾನಿ ಮೋದಿ ಅವರೂ ಅಭಿನಂದನೆ ಸಲ್ಲಿಸಿದರು.

ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪಕ್ಷದ ಸಂಸದರ ನಿಯೋಗದ ಜತೆಗೆ ಪ್ರಧಾನಿ ಅವರನ್ನು ಭೇಟಿ ಮಾಡಿದ ಜಗನ್‌, ಆಂಧ್ರದ ನಾನಾ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದ ನೆರವು ಹಾಗೂ ಬೆಂಬಲ ಯಾಚಿಸಿದರು.

ಆಂಧ್ರಕ್ಕೆ ವಿಶೇಷ ಸ್ಥಾನಮಾನ ಯಾಕೆ ಅಗತ್ಯವಿದೆ ಎಂಬುದನ್ನು ಪ್ರಧಾನಿ ಮೋದಿ ಅವರಿಗೆ ಮನವರಿಕೆ ಮಾಡಲು ಜಗನ್ ಯತ್ನಿಸಿದರು. ಕೇಂದ್ರದ ಸಕ್ರಿಯ ಸಹಾಯವಿಲ್ಲದೆ ಆಂಧ್ರ ಪ್ರದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

ಜಗನ್ ಬೇಡಿಕೆಗಳಿಗೆ ಪ್ರಧಾನಿ ಮೋದಿ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ