ಆ್ಯಪ್ನಗರ

6 ಸರ್ಜಿಕಲ್ ದಾಳಿ ಮಾಡಿದ್ವಿ ಎಂದ ಕಾಂಗ್ರೆಸ್‌ಗೆ ಸೇನೆ ತಿರುಗೇಟು

ಸರ್ಜಿಕಲ್ ಸ್ಟ್ರೈಕ್ ಸಂಬಂಧ ಸೇನಾ ಕಮಾಂಡರ್ ಸ್ಪಷ್ಟನೆಯಿಂದ ಕಾಂಗ್ರೆಸ್‌ನ ಆರೋಪಗಳಿಗೆ ತಪರಾಕಿ ನೀಡಲು ಬಿಜೆಪಿಗೆ ಅವಕಾಶ ಸಿಕ್ಕಂತಾಗಿದೆ.

TIMESOFINDIA.COM 20 May 2019, 3:45 pm
ಹೊಸದಿಲ್ಲಿ: ದೇಶದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾದ ಒಟ್ಟು 6 ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದೇವೆ ಎಂಬ ಕಾಂಗ್ರೆಸ್ ಹೇಳಿಕೆಗೆ ಉತ್ತರ ವಿಭಾಗದ ಕಮಾಂಡಿಂಗ್ ಆಫೀಸರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಸೇನಾಧಿಕಾರಿ, ಭಾರತೀಯ ಸೇನೆ ಮೊದಲ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದು 2016ರಲ್ಲಿ. ಈ ವೇಳೆ ಕೇಂದ್ರದಲ್ಲಿ ಬಿಜೆಪಿ ಸರಕಾರವಿತ್ತು.

ಸರ್ಜಿಕಲ್ ಸ್ಟ್ರೈಕ್ ಸಂಬಂಧ ಸೇನಾ ಕಮಾಂಡರ್ ಸ್ಪಷ್ಟನೆಯಿಂದ ಕಾಂಗ್ರೆಸ್‌ನ ಆರೋಪಗಳಿಗೆ ತಪರಾಕಿ ನೀಡಲು ಬಿಜೆಪಿಗೆ ಅವಕಾಶ ಸಿಕ್ಕಂತಾಗಿದೆ.

ಫೆಬ್ರವರಿ 14ರಂದು ಜಮ್ಮು ಕಾಶ್ಮೀಕದ ಪುಲ್ವಾಮಾದಲ್ಲಿ ಪಾಕಿಸ್ತಾನ ಭಯೋತ್ಪಾದಕರು ನಡೆಸಿದ್ದ ಆತ್ಮಾಹುತಿ ದಾಳಿಯಲ್ಲಿ 44ಕ್ಕೂ ಅಧಿಕ ಬಿಎಸ್‌ಎಫ್ ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ವಾಯುಪಡೆ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಎರಡನೇ ಬಾರಿ ಸರ್ಜಿಕಲ್ ಸ್ಟೈಕ್ ನಡೆಸಿತ್ತು.

ಆದರೆ, ಇದು ರಾಜಕೀಯ ತಿರುವು ಪಡೆದುಕೊಂಡು ರಾಜಕಾರಣಿಗಳು ತಲೆಗೊಂದು ಹೇಳಿಕೆ ನೀಡಲು ಪ್ರಾರಂಭಿಸಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಅಧಿಕಾರಾವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ನಡೆಸಿರುವುದಾಗಿ ಹೇಳಿಕೊಂಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ