ಆ್ಯಪ್ನಗರ

Chandigarh VV: ಚಂಡೀಗಡ ವಿವಿಯಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಲೀಕ್ ಪ್ರಕರಣ: ಸೈನಿಕನ ಬಂಧನ

Chandigarh University MMS Leak: ಚಂಡೀಗಡ ವಿಶ್ವಿದ್ಯಾಲಯದ ವಿದ್ಯಾರ್ಥಿನಿಯರ ವಿಡಿಯೋ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಲ್ಲಿ ಸೈನಿಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

Edited byಅಮಿತ್ ಎಂ.ಎಸ್ | TIMESOFINDIA.COM 25 Sep 2022, 11:22 am

ಹೈಲೈಟ್ಸ್‌:

  • ಚಂಡೀಗಡ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ವಿಡಿಯೋ ಸೋರಿಕೆ
  • ಅರುಣಾಚಲ ಪ್ರದೇಶದಲ್ಲಿ ಸೈನಿಕನನ್ನು ಬಂಧಿಸಿದ ಪಂಜಾಬ್ ಪೊಲೀಸ್
  • ಆರೋಪಿ ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಲ್ಲಿ ಬಂಧನ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Chandigarh University
ಮೊಹಾಲಿ: ಚಂಡೀಗಡ ವಿಶ್ವವಿದ್ಯಾಲಯದ 60ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ವಿಡಿಯೋ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಾಲಿ ಪೊಲೀಸರು ಸೈನಿಕನೊಬ್ಬನನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇದು ನಾಲ್ಕನೇ ಬಂಧನವಾಗಿದೆ.
ಬಂಧಿತನನ್ನು ಸಂಜೀವ್ ಸಿಂಗ್ ಎಂದು ಗುರುತಿಸಲಾಗಿದೆ. ಈಗ ಆರೋಪಿಯಾಗಿರುವ ವಿದ್ಯಾರ್ಥಿನಿಯನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ ಎಂದು ಪಂಜಾಬ್ ಡಿಜಿಪಿ ಗೌರವ್ ಯಾದವ್ ತಿಳಿಸಿದ್ದಾರೆ.
Chandigarh Students private videos leak case - ತಾನು ಸ್ನಾನ ಮಾಡುವ ವಿಡಿಯೋವನ್ನೇ ಬಯಲು ಮಾಡಿರುವ ಆರೋಪಿ!

ವಿಧಿವಿಜ್ಞಾನ ಮತ್ತು ಡಿಜಿಟಲ್ ಪುರಾವೆಗಳ ಆಧಾರದಲ್ಲಿ ಎಸ್‌ಎಎಸ್ ನಗರ ಪೊಲೀಸ್ ತಂಡವು ಆರೋಪಿಯನ್ನು ಬಂಧಿಸಲು ಅರುಣಾಚಲ ಪ್ರದೇಶಕ್ಕೆ ತೆರಳಿತ್ತು. ಆರೋಪಿಯನ್ನು ಹಿಡಿಯಲು ಅರುಣಾಚಲ ಪ್ರದೇಶ ಪೊಲೀಸರು, ಅಸ್ಸಾಂ ಪೊಲೀಸರು ಮತ್ತು ಸೇನಾ ಅಧಿಕಾರಿಗಳು ಪಂಜಾಬ್ ಪೊಲೀಸರಿಗೆ ಸಹಾಯ ಮಾಡಿದ್ದರು ಎಂದು ಡಿಜಿಪಿ ಹೇಳಿದ್ದಾರೆ.

ಆರೋಪಿ ಸಂಜೀವ್ ಸಿಂಗ್‌ನನ್ನು ಪೊಲೀಸರು ಅರುಣಾಚಲ ಪ್ರದೇಶದ ಬೊಂದಿಲಾದ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದು, ಎಸ್‌ಎಎಸ್ ನಗರ ಕೋರ್ಟ್ ಮುಂದೆ ಹಾಜರುಪಡಿಸಲು ಎರಡು ದಿನಗಳ ಪ್ರಯಾಣ ವಶದ ಅನುಮತಿ ಪಡೆದಿದ್ದಾರೆ.
ಚಂಡೀಗಢ ವಿವಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಲೀಕ್: ವಿವಿ ಆವರಣದಲ್ಲಿ ವಿದ್ಯಾರ್ಥಿಯರ ಭಾರೀ ಪ್ರತಿಭಟನೆ

"ಸೇವೆಯಲ್ಲಿರುವ ಸೈನಿಕ ಐಪಿಸಿ ಮತ್ತು ಐಟಿ ಕಾಯ್ದೆಯ ಶಿಕ್ಷಾರ್ಹ ಕೃತ್ಯಗಳಲ್ಲಿ ಭಾಗಿಯಾಗಿರುವುದು ಪಂಜಾಬ್ ಪೊಲೀಸರು ನಡೆಸುತ್ತಿರುವ ತನಿಖೆಯಿಂದ ಬಹಿರಂಗವಾಗಿದೆ. ಸೈನಿಕನ ಬಂಧನಕ್ಕೆ ಮತ್ತು ಆತನನ್ನು ಮುಂದಿನ ವಿಚಾರಣೆಗಾಗಿ ವಶಕ್ಕೆ ಒಪ್ಪಿಸಲು ಪಂಜಾಬ್ ಹಾಗೂ ಅರುಣಾಚಲ ಪ್ರದೇಶಕ್ಕೆ ಎಲ್ಲ ಸಹಕಾರ ನೀಡಲಾಗಿದೆ" ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ