ಆ್ಯಪ್ನಗರ

'ಅರುಣಾಸ್ತಮಾನ': ಪಂಚಭೂತಗಳಲ್ಲಿ ಲೀನರಾದ ಜೇಟ್ಲಿ

ಹಲವು ದಿನಗಳಿಂದ ಹೊಸದಿಲ್ಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜೇಟ್ಲಿ ಅವರ ಸ್ಥಿತಿ ಕಳೆದೊಂದು ವಾರದಿಂದ ಚಿಂತಾಜನಕವಾಗಿತ್ತು. ಅವರನ್ನು ಉಳಿಸಿಕೊಳ್ಳಲು ವೈದ್ಯರಿಂದ ಸಾಧ್ಯವಾಗಲಿಲ್ಲ. ಶನಿವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದರು.

TIMESOFINDIA.COM 25 Aug 2019, 4:23 pm

ಇಹಲೋಕದ ಯಾತ್ರೆ ಮುಗಿಸಿದ ಧೀಮಂತ ನಾಯಕ ಜೇಟ್ಲಿundefinedಮೋದಿ 2.0 ಸಂಪುಟದಲ್ಲಿ ಸಚಿವ ಸ್ಥಾನ ಬೇಡ ಎಂದಿದ್ದ ಅರುಣ್‌ ಜೇಟ್ಲಿundefined

ಹೊಸದಿಲ್ಲಿ: ತೀವ್ರ ಅನಾರೋಗ್ಯದಿಂದಾಗಿ ಶನಿವಾರ ಮಧ್ಯಾಹ್ನ ಕೊನೆಯುಸಿರೆಳೆದ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು.
Vijaya Karnataka Web Jetli


ಅವರ ಪುತ್ರ ರೋಹನ್ ಜೇಟ್ಲಿ ತಂದೆಯ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಿದರು.


ರಾಷ್ಟ್ರ ರಾಜಧಾನಿಯ ಯಮುನಾ ನದಿತಟದಲ್ಲಿರುವ ನಿಗಮ್‌ಬೋಧ್ ಘಾಟ್‌ನಲ್ಲಿ ನಡೆದ ಅಂತಿಮ ಸಂಸ್ಕಾರದಲ್ಲಿ ಮೃತರ ಸಂಬಂಧಿಕರು, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಗೌತಮ್ ಗಂಭೀರ್, ಬಿಜೆಪಿ ಹಿರಿಯ ಮುಖಂಡರಾದ ಲಾಲ್‌ಕೃಷ್ಣ ಅಡ್ವಾಣಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು, , ಶರದ್ ಪವಾರ್, ಚಂದ್ರಬಾಬು ನಾಯ್ಡು ಸೇರಿದಂತೆ ವಿರೋಧ ಪಕ್ಷದ ನಾಯಕರು ಪಾಲ್ಗೊಂಡಿದ್ದರು.


ಭಾನುವಾರ ಮುಂಜಾನೆ ದಿಲ್ಲಿಯ ನಿವಾಸದಿಂದ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಬಿಜೆಪಿ ಮುಖ್ಯ ಕಾರ್ಯಾಲಯಕ್ಕೆ ಕೊಂಡೊಯ್ಯಲಾಗಿತ್ತು. ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಯ ಕಾರ್ಯಕಾರಿ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವರಾದ ಹರ್ಷ ವರ್ಧನ್, ಪಿಯೂಷ್ ಗೋಯಲ್ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಸೇರಿದಂತೆ ಹಲವು ಗಣ್ಯರು ಬಿಜೆಪಿಯ ಹಿರಿಯ ನಾಯಕನಿಗೆ ಅಂತಿಮ ಗೌರವ ಸಲ್ಲಿಸಿದ್ದರು.

ಬಿಜೆಪಿಯ ಟ್ರಬಲ್‌ ಶೂಟರ್‌, ಮೋದಿಯ ಮೆಂಟರ್‌

ಅಲ್ಲಿಂದ ಪುಷ್ಪಾಲಂಕೃತ ವಿಶೇಷ ವಾಹನದಲ್ಲಿ ಪಾರ್ಥಿವ ಶರೀರವನ್ನು ನಿಗಮ್‌ಬೋಧ್ ಘಾಟ್‌‌ಗೆ ಕೊಂಡೊಯ್ಯಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ