ಆ್ಯಪ್ನಗರ

ಪಂಚರಾಜ್ಯ ಚುನಾವಣೆ ಫಲಿತಾಂಶ: ಕಾಂಗ್ರೆಸ್ ಸಂಭ್ರಮಾಚರಣೆ

ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

Vijaya Karnataka Web 11 Dec 2018, 6:01 pm
ಹೊಸದಿಲ್ಲಿ: ಈ ಹಿಂದೆ ನಡೆದ ಹಲವು ಚುನಾವಣೆಯಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್, ಈಗ ಚೇತರಿಸಿಕೊಂಡಿದೆ. ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
Vijaya Karnataka Web cong


ಪಂಚ ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿರುವ ಕಾಂಗ್ರೆಸ್, ಭರ್ಜರಿ ಸಂಭ್ರಮಾಚರಣೆಯಲ್ಲಿ ತೊಡಗಿದೆ. ರಾಷ್ಟ್ರ ರಾಜಧಾನಿ ದಿಲ್ಲಿ, ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಗೆಲುವನ್ನು ಸಂಭ್ರಮಸುತ್ತಿದ್ದಾರೆ.

ಶಿರಸಿಯಲ್ಲಿ ಸಂಭ್ರಮಾಚರಣೆ

ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದು, 3 ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಶಿರಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಲು ನಿರ್ಧರಿಸಿದ್ದಾರೆ. ಪಕ್ಷದ ಪದಾಧಿಕಾರಿಗಳು, ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಸಂಜೆ ಶಿರಸಿ ಬಸ್ ಸ್ಟ್ಯಾಂಡ್‌ ವೃತ್ತದಲ್ಲಿ ಸಂಭ್ರಮಿಸಲಿದ್ದಾರೆ.

ಛತ್ತೀಸ್‌ಗಢ ಕಾಂಗ್ರೆಸ್ ಅಧ್ಯಕ್ಷ ಭೂಪೇಶ್ ಬಾಗೇಲ್ ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿರುವುದು.

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಜೈಕಾರ ಕೂಗಿ ಹರ್ಷ ವ್ಯಕ್ತಪಡಿಸಿದ್ದಾರೆ.


ಛತ್ತೀಸ್‌ಗಢ ಗೆಲುವು: ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ


ರಾಷ್ಟ್ರ ರಾಜಧಾನಿ ದಿಲ್ಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ