ಆ್ಯಪ್ನಗರ

ಫೈವ್‌ ಸ್ಟಾರ್‌ ಹೋಟೆಲ್‌ ವಾಸ್ತವ್ಯ ಬಿಡಿ: ಸಚಿವರಿಗೆ ಮೋದಿ ತರಾಟೆ

ಮಿತವ್ಯಯಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 20 Aug 2017, 10:43 am
ಹೊಸದಿಲ್ಲಿ: ಸಚಿವರು, ಅಧಿಕಾರಿಗಳು ಪಂಚತಾರಾ ಹೋಟೆಲ್‌ಗಳಲ್ಲಿ ವಾಸ್ತವ್ಯ ಹೂಡುವ ಸಂಸ್ಕೃತಿಗೆ ಕಡಿವಾಣ ಹಾಕಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಖಡಕ್‌ ಸೂಚನೆ ನೀಡಿದ್ದಾರೆ.
Vijaya Karnataka Web avoid 5 star hotels and psu perks
ಫೈವ್‌ ಸ್ಟಾರ್‌ ಹೋಟೆಲ್‌ ವಾಸ್ತವ್ಯ ಬಿಡಿ: ಸಚಿವರಿಗೆ ಮೋದಿ ತರಾಟೆ


ಇತ್ತೀಚಿಗೆ ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಸಚಿವರಿಗೆ ಪ್ರತ್ಯೇಕವಾಗಿ ಪಾಠ ಮಾಡಿದ ಮೋದಿ, ಯಾವುದೇ ಕಾರಣಕ್ಕೂ ಪಂಚತಾರಾ ಹೋಟೆಲ್‌ಗಳಲ್ಲಿ ವಾಸ್ತವ್ಯ ಹೂಡುವ ಪರಿಪಾಠ ಬೆಳೆಸಿಕೊಳ್ಳಬಾರದು. ಅದರಲ್ಲೂ ಅಧಿಕೃತ ಪ್ರವಾಸಗಳಿಗೆ ತೆರಳಿದಾಗ ಸರಕಾರಿ ಪ್ರವಾಸಿ ಮಂದಿರಗಳಲ್ಲಿ ಅಥವಾ ಸರಕಾರ ನೀಡುವ ಆತಿಥ್ಯವನ್ನೇ ಬಳಸಿಕೊಳ್ಳಬೇಕು ಎಂದು ಸೂಚಿಸಿದರು.

ಕೆಲವು ಅಧಿಕಾರಿಗಳು, ಸಚಿವರು ಫೈವ್‌ ಸ್ಟಾರ್‌ ಸಂಸ್ಕೃತಿಗೆ ಮಾರು ಹೋಗಿರುವ ಬಗ್ಗೆ ವರದಿಗಳು ಬಂದಿವೆ. ಇದಕ್ಕೆ ಮೋದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರಕಾರಿ ಸ್ವಾಮ್ಯದ ಸಂಸ್ಥೆಗಳಿಂದ 'ಲಾಭ' ಪಡೆದುಕೊಳ್ಳುತ್ತಿದ್ದಾರೆ. ಇನ್ಮುಂದೆ ಈ ರೀತಿ ಆಗಬಾರದು ಎಂದು ಎಚ್ಚರಿಸಿದ್ದಾರೆ.

ಇನ್ನು ಎರಡು ವರ್ಷಗಳಲ್ಲಿ ಚುನಾವಣೆ ಬರುತ್ತಿದ್ದು, ಮಿತವ್ಯಯಕ್ಕೆ ಹೆಚ್ಚು ಒತ್ತು ನೀಡಬೇಕು. ಇದರಿಂದ ಭ್ರಷ್ಟಾಚಾರಕ್ಕೆ ನಿಯಂತ್ರಣ ಹೇರಿದಂತಾಗುತ್ತದೆ. ಯಾವುದೇ ಕಾರಣಕ್ಕೂ ಭ್ರಷ್ಟಾಚಾರ ಮುಕ್ತ ಆಡಳಿತವೇ ನಮ್ಮ ಗುರಿ, ಧ್ಯೇಯ ಆಗಿರಬೇಕು. ಅಲ್ಲದೇ ಹಗರಣ ಮುಕ್ತ ಸರಕಾರ ಆಗಿರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಮೋದಿ ಖಡಕ್‌ ಸೂಚನೆ ನೀಡಿದ್ದಾರೆ.

Avoid 5-star hotels and PSU perks

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ