ಆ್ಯಪ್ನಗರ

ಅಜಂ ಖಾನ್ ವಿರುದ್ಧ ದೇಶದ್ರೋಹ ಪ್ರಕರಣ

ಭಾರತೀಯ ಸೇನೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಟೈಮ್ಸ್ ಆಫ್ ಇಂಡಿಯಾ 1 Jul 2017, 12:19 pm
ಮೀರುತ್: ಭಾರತೀಯ ಸೇನೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.
Vijaya Karnataka Web azam khan booked for sedition over army remarks
ಅಜಂ ಖಾನ್ ವಿರುದ್ಧ ದೇಶದ್ರೋಹ ಪ್ರಕರಣ


ಭಜರಂಗ ದಳ ಹಾಗೂ ವಿಶ್ವ ಹಿಂದೂ ಪರಿಷತ್‌ನ ಮುಖಂಡ ಅನಿಲ್ ಪಾಂಡೆ ಅವರು ಅಜಂ ಖಾನ್ ವಿರುದ್ಧ ಚಾಂದ್‌ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖಾನ್ ವಿರುದ್ಧ ಐಪಿಸಿ ಸೆಕ್ಷನ್ 124 (ದೇಶದ್ರೋಹ), 131 (ದಂಗೆಗೆ ಕುಮ್ಮಕ್ಕು) ಹಾಗೂ 505 (ಅವಹೇಳನಕಾರಿ ಹೇಳಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಠಾಣೆಯ ಹಿರಿಯ ಅಧಿಕಾರಿ ಅಜಯ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಉತ್ತರ ಪ್ರದೇಶದ ರಾಮ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅಜಂ ಖಾನ್, ಗಡಿಯಲ್ಲಿ ಕದನ ನಡೆಯುತ್ತಿದೆ. ಆದರೆ, ಒಂದೆಡೆ ಮಹಿಳೆಯರು ಯೋಧರ ಗುಪ್ತಾಂಗ ಕತ್ತರಿಸಿ ಕೊಲೆ ಮಾಡಿದ್ದಾರೆ. ಮಹಿಳೆಯರು ಹೀಗೆ ಮಾಡಲು ಕಾರಣವೇನು ಎಂಬುದರ ಬಗ್ಗೆ ಯೋಚಿಸಬೇಕಿದೆ. ತಮ್ಮ ಮೇಲಿನ ಅತ್ಯಾಚಾರಕ್ಕೆ ಪ್ರತಿಯಾಗಿ ಮಹಿಳೆಯರು ಇಂಥ ಕೃತ್ಯಕ್ಕೆ ಮುಂದಾಗಿದ್ದಾರೆ. ಇದು ದೇಶಕ್ಕೆ ಅವಮಾನ. ಭಾರತ ವಿಶ್ವವನ್ನು ಎದುರಿಸಲು ಹೇಗೆ ಸಾಧ್ಯ ಎಂದು ಹೇಳುವ ಮೂಲಕ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದರು.

ಏತನ್ಮಧ್ಯೆ, ವಿಎಚ್‌ಪಿಯ ಜಿಲ್ಲೆಯ ಸಂಯೋಜಕ ರಾಜೇಶ್ ಕುಮಾರ್ ಅವರು ಸಮಾಜವಾದಿ ಪಕ್ಷದ ನಾಯಕನ ನಾಲಿಗೆ ಕತ್ತರಿಸುವವರಿಗೆ 50 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ