ಆ್ಯಪ್ನಗರ

ಉತ್ತರ ಪ್ರದೇಶದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಅಭಿಯಾನ ಶುರು

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಉತ್ತರ ಪ್ರದೇಶದಲ್ಲಿ ಅಭಿಯಾನ ಶುರುವಾಗಿದೆ. ದೇಶದ ಭದ್ರತೆ ದೃಷ್ಟಿಯಿಂದ ರಾಜ್ಯದ ಮೂಲೆಮೂಲೆಯಲ್ಲಿರುವ ಬಾಂಗ್ಲಾಸೇರಿ ಅಕ್ರಮ ವಿದೇಶಿ ವಲಸಿಗರನ್ನು ಪತ್ತೆ ಮಾಡಬೇಕಿದೆ.

PTI 2 Oct 2019, 6:23 am
ಲಖನೌ: ಉತ್ತರ ಪ್ರದೇಶದಲ್ಲಿಅಕ್ರಮ ಬಾಂಗ್ಲಾ ನಿವಾಸಿಗಳ ಪತ್ತೆಗೆ ಅಭಿಯಾನ ಶುರುವಾಗಿದೆ. ಉತ್ತರ ಪ್ರದೇಶ ಪೊಲೀಸ್‌ ಮಹಾ ನಿರ್ದೇಶಕ ಒ.ಪಿ.ಸಿಂಗ್‌ ಅವರು ಅಕ್ರಮ ಬಾಂಗ್ಲಾವಲಸಿಗರ ಪತ್ತೆಗೆ ಅಭಿಯಾನ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಪೊಲೀಸ್‌ ಕೇಂದ್ರ ಕಚೇರಿಗಳಿಗೆ ಸೂಚನೆ ನೀಡಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ.
Vijaya Karnataka Web illegal_bangladeshi


''ರಾಜ್ಯದಲ್ಲಿ ಬಾಂಗ್ಲಾವಲಸಿಗರು ಸಾಕಷ್ಟು ಸಂಖ್ಯೆಯಲ್ಲಿಅಕ್ರಮವಾಗಿ ನೆಲೆಸಿದ್ದು, ಅದರಲ್ಲೂಬಹುತೇಕರು ನಾಪತ್ತೆಯಾಗಿದ್ದಾರೆ. ದೇಶದ ಭದ್ರತೆ ದೃಷ್ಟಿಯಿಂದ ರಾಜ್ಯದ ಮೂಲೆಮೂಲೆಯಲ್ಲಿರುವ ಬಾಂಗ್ಲಾಸೇರಿ ಅಕ್ರಮ ವಿದೇಶಿ ವಲಸಿಗರನ್ನು ಪತ್ತೆ ಮಾಡಬೇಕಿದೆ. ಈ ನಿಟ್ಟಿನಲ್ಲಿಅಭಿಯಾನ ನಡೆಸಿ ಕಾರ್ಯಾಚರಣೆ ತ್ವರಿತಗೊಳಿಸಿ,'' ಎಂದು ಸುತ್ತೋಲೆಯಲ್ಲಿಸೂಚಿಸಲಾಗಿದೆ.

ದೇಶಾದ್ಯಂತ ಎನ್‌ಆರ್‌ಸಿ ಜಾರಿ

ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಅತ್ಯಗತ್ಯವಾಗಿದ್ದು, ಅದನ್ನು ದೇಶದ ಎಲ್ಲ ರಾಜ್ಯಗಳಲ್ಲಿ ಜಾರಿಗೊಳಿಸುವುದು ಖಚಿತ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಅಸ್ಸಾಂ ನಂತರ ಅತಿ ಹೆಚ್ಚು ಅಕ್ರಮ ವಲಸಿಗರು ನೆಲೆಸಿರುವ ರಾಜ್ಯ ಪಶ್ಚಿಮ ಬಂಗಾಳವಾಗಿದೆ. ಹೀಗಾಗಿ ರಾಷ್ಟ್ರೀಯ ಪೌರತ್ವ ಕಾಯಿದೆ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಸಭೆಯಲ್ಲಿಅಂಗೀಕಾರ ಸಿಕ್ಕ ತಕ್ಷಣವೇ ಮೊದಲು ಪಶ್ಚಿಮ ಬಂಗಾಳದಲ್ಲಿಯೇ ಎನ್‌ಆರ್‌ಸಿ ಜಾರಿಗೊಳಿಸಲಾಗುವುದು ಎಂದು ಶಾ ಘೋಷಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ