ಆ್ಯಪ್ನಗರ

ಬಿಜೆಪಿ-ಜೆಡಿಯು ದೋಸ್ತಿ ಚೆನ್ನಾಗಿಯೇ ಇದೆ: ಪ್ರಶಾಂತ್‌ ಕಿಶೋರ್‌ ಹೇಳಿಕೆಗೆ ನಿತೀಶ್ ಆಕ್ಷೇಪ

ಬಿಹಾರದಲ್ಲಿ ಜೆಡಿಯು ಹಾಗೂ ಬಿಜೆಪಿ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮೈತ್ರಿ ಸಂಬಂಧ ಚೆನ್ನಾಗಿಯೇ ಇದೆ ಎಂದು ಹೇಳುವ ಮೂಲಕ ನಿತೀಶ್‌ ಕುಮಾರ್‌ ಜೆಡಿಯು ಉಪಾಧ್ಯಕ್ಷ ಪ್ರಶಾಂತ್‌ ಕಿಶೋರ್‌ ಹೇಳಿಕೆಯನ್ನು ಆಕ್ಷೇಪಿಸಿದ್ದಾರೆ.

Vijaya Karnataka Web 1 Jan 2020, 12:52 pm
ಪಟನಾ: ಬಿಹಾರದಲ್ಲಿ ಜೆಡಿಯು ಹಾಗೂ ಬಿಜೆಪಿ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮೈತ್ರಿ ಸಂಬಂಧ ಚೆನ್ನಾಗಿಯೇ ಇದೆ ಎಂದು ಮುಖ್ಯಮಂತ್ರಿ ಹಾಗೂ ಜೆಡಿಯು ವರಿಷ್ಠ ನಿತೀಶ್‌ ಕುಮಾರ್‌ ಹೇಳಿದ್ದಾರೆ. ಈ ಮೂಲಕ ಜೆಡಿಯು ಉಪಾಧ್ಯಕ್ಷ ಪ್ರಶಾಂತ್‌ ಕಿಶೋರ್‌ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿ ಅವರು ಬಿಹಾರ ವಿಧಾನಸಭೆ ಚುನಾವಣೆಯನ್ನು ಪ್ರಧಾನಿ ಮೋದಿ ಹಾಗೂ ನಿತೀಶ್‌ ನೇತೃತ್ವದಲ್ಲಿಎದುರಿಸಲಾಗುವುದು. ಸೀಟುಗಳು ಸಮಾನ ಹಂಚಿಕೆಯಾಗುವುದೇ ಸೂಕ್ತ ಎಂದು ತಿರುಗೇಟು ನೀಡಿದ್ದರು. ಈ ಇಬ್ಬರ ಮಾತಿನ ಚಕಮಕಿ ನಡುವೆ ನಿತೀಶ್‌ ಅವರಿಂದ ಈ ಸ್ಪಷ್ಟನೆ ಹೊರಬಿದ್ದಿದೆ.
Vijaya Karnataka Web Bihar


ಈ ಹಿಂದೆ ಹೇಳಿಕೆ ನೀಡಿದ್ದ ಜೆಡಿಯುನ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್‌ ಕಿಶೋರ್‌ ಮುಂದಿನ ವರ್ಷ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಸ್ಥಾನಗಳಲ್ಲಿ ಜೆಡಿಯು ಸ್ಪರ್ಧಿಸಲಿದೆ ಎಂದಿದ್ದರು. ಎನ್‌ಡಿಎಯಲ್ಲಿ ಜೆಡಿಯು ಪ್ರಮುಖ ಪಾಲುದಾರ ಪಕ್ಷವಾಗಿದೆ.

ಈ ವರ್ಷ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ಸಮಾನ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದವು. 'ನನ್ನ ಪ್ರಕಾರ, ಲೋಕಸಭಾ ಚುನಾವಣಾ ಸೂತ್ರವನ್ನೇ ವಿಧಾನಸಭಾ ಚುನಾವಣೆಯಲ್ಲೂ ಅನುಸರಿಸಲಾಗದು ಎಂದು ‍ಪ್ರಶಾಂತ್‌ ಹೇಳಿ ಕೆ ಕೊಟ್ಟಿದ್ದರು. ಬಿಹಾರದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದುಕೊಳ್ಳಲು ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತಿದೆ. ನಿತೀಶ್‌ ಕುಮಾರ್‌ ಅವರ ಓಟಕ್ಕೆ ತಡೆಹಾಕಲು ಕೂಡ ಹೆಚ್ಚಿನ ತಂತ್ರ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ